• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಇ.ಡಿ ವಿಚಾರಣೆ ವೇಳೆ ಡಿಕೆಶಿ ಆರೋಗ್ಯದಲ್ಲಿ ಮತ್ತೆ ಏರುಪೇರು: ಆಸ್ಪತ್ರೆಗೆ ದಾಖಲು

|

ನವೆಹಲಿ, ಸೆಪ್ಟೆಂಬರ್ 14: ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಆರೋಗ್ಯ ಮತ್ತೆ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೆಪ್ಟೆಂಬರ್ 3ರಂದು ಡಿಕೆ ಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು. ಶುಕ್ರವಾರವಷ್ಟೇ ಪ್ರಕರಣ ವಿಚಾರಣೆ ನಡೆದು ಸೆ.17ರವರೆಗೆ ಇ.ಡಿ. ಕಸ್ಟಡಿಗೆ ನೀಡಲಾಗಿತ್ತು.

ಇ.ಡಿ. ಕಚೇರಿಯಲ್ಲಿ ಡಿಕೆ ಶಿವಕುಮಾರ್ ಅವರ ವಿಚಾರಣೆ ಶನಿವಾರವೂ ಮುಂದುವರೆದಿತ್ತು, ವಿಚಾರಣೆ ಸಂದರ್ಭದಲ್ಲಿ ಆರೋಗ್ಯ ಏರುಪೇರಾಗಿದ್ದು, ವಿಚಾರಣೆಯನ್ನು ಅರ್ಧಕ್ಕೆ ನಿಲ್ಲಿಸಿ ಇಡಿ ಅಧಿಕಾರಿಗಳು ಅವರನ್ನು ಆರ್‌ಎಂಎಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇಡಿ ವಶಕ್ಕೆ ಪಡೆದಾಗಿನಿಂದಲೂ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಅವರು, ಬಂಧನಕ್ಕೂ ಮುನ್ನ ಆರ್​ಎಂಎಲ್​ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಿಪಿ ಹಾಗೂ ಹೈ ಶುಗರ್​ನಿಂದ ಅವರು ಬಳಲುತ್ತಿದ್ದಾರೆ.

ಅನಾರೋಗ್ಯ; ಆಸ್ಪತ್ರೆಯಲ್ಲಿಯೇ ರಾತ್ರಿ ಕಳೆದ ಡಿಕೆಶಿ

ಗುರುವಾರ ಬೆಳಗ್ಗೆ ಇಡಿ ಅಧಿಕಾರಿಗಳು ಡಿ. ಕೆ. ಶಿವಕುಮಾರ್‌ರನ್ನು ಇಡಿ ಕಚೇರಿಗೆ ವಿಚಾರಣೆಗೆ ಕರೆದುಕೊಂಡು ಹೋಗಿದ್ದರು. ಮಧ್ಯಾಹ್ನ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ವೈದ್ಯರ ಸೂಚನೆಯಂತೆ ರಾತ್ರಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

English summary
DK Shivakumar Health Fluctuates During ED Trial And taken into the RML hopsital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X