ಇಡಿ ವಶದಲ್ಲಿರುವ ಡಿಕೆಶಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ, ಸೆಪ್ಟೆಂಬರ್ 12: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಇಡಿ ವಶದಲ್ಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆಗೆ ಎದುರಿಸುತ್ತಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಇದ್ದಕ್ಕಿದ್ದಂತೆ ಇಂದು ಸಂಜೆ ವೇಳೆಗೆ ರಕ್ತದೊತ್ತಡದಲ್ಲಿ ಏರುಪೇರಾಗಿದೆ ಹಾಗಾಗಿ ಅವರನ್ನು ಕೂಡಲೇ ಆರ್‌ಎಂವಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿ.ಕೆ.ಶಿವಕುಮಾರ್ ಅವರಿಗೆ ಮಲಬದ್ಧತೆ ಪ್ರಾರಂಭವಾಗಿದೆ ಎಂದೂ ಹೇಳಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೂಡಲೇ ಅವರನ್ನು ಇಡಿ ಅಧಿಕಾರಿಗಳು ಪೊಲೀಸರ ಬಂದೋಬಸ್ತ್‌ನಲ್ಲಿ ದೆಹಲಿಯ ಆರ್‌ಎಂವಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

DK Shivakumar Health Upset, Admitted To Hospital

ಡಿ.ಕೆ.ಶಿವಕುಮಾರ್ ಅವರ ಮಗಳು ಐಶ್ವರ್ಯಾ ಇಂದೇ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಅಪ್ಪ-ಮಗಳು ಇಬ್ಬರನ್ನೂ ಇಂದು ಇಡಿ ವಿಚಾರಣೆಗೆ ಒಳಪಡಿಸಿದೆ.

ಡಿಕೆ.ಶಿವಕುಮಾರ್ ಅವರನ್ನು ಸೆಪ್ಟೆಂಬರ್ 3 ರಂದು ಇಡಿ ಅಧಿಕಾರಿಗಳು ಬಂಧಿಸಿದ್ದರು. ನಾಳೆಗೆ ಅವರ ಕಸ್ಟಡಿ ಅವಧಿ ಮುಗಿಯಲಿದ್ದು, ನಾಳೆ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ನಾಳೆ ಅವರಿಗೆ ಜಾಮೀನು ದೊರೆಯುತ್ತದೆಯೋ ಅಥವಾ ಇನ್ನೂ ಕೆಲವು ದಿನ ಇಡಿ ಅಧಿಕಾರಿಗಳು ವಶಕ್ಕೆ ಮನವಿ ಮಾಡುತ್ತಾರೆಯೋ ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+