ಡಿಕೆ ಶಿವಕುಮಾರ್ ಜಾಮೀನು ಆದೇಶ ಅ.19ಕ್ಕೆ ಕಾಯ್ದಿರಿಸಿದ ಹೈಕೋರ್ಟ್

ನವದೆಹಲಿ, ಅಕ್ಟೋಬರ್ 17: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ನ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿ ಆದೇಶವನ್ನು ಮುಂದೂಡಿದೆ. ಅಕ್ಟೋಬರ್ 19 ರಂದು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ.

ಅಕ್ಟೋಬರ್ 15 ರಂದು ಹೈಕೋರ್ಟ್ ಜಾಮೀನು ಅರ್ಜಿ ವಿಚಾರಣೆ ನಡೆಸಿ, ವಿಚಾರಣೆ ಪೂರ್ಣವಾಗದ ಕಾರಣ ಅದನ್ನು ಗುರುವಾರಕ್ಕೆ ಮುಂದೂಡಿತ್ತು.

ಡಿಕೆ ಶಿವಕುಮಾರ್ ಅವರ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಅರ್ಜಿ ವಿಚಾರಣೆ ನಡೆಸಿದರು.

DK Shivakumar in Money Laundering Case: Delhi High Court Reserved Bail Plea Order

ಆಗಸ್ಟ್ 2017 ರಲ್ಲಿ ಡಿಕೆಶಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ 8.50 ರೂಪಾಯಿ ನಗದು ಹಣವನ್ನು ವಶಪಡಿಸಿಕೊಂಡಿತ್ತು. ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ಲಭ್ಯವಾದ ಈ ಹಣಕ್ಕೆ ಯಾವುದೇ ರೀತಿಯ ಲೆಕ್ಕವಿರಲಿಲ್ಲ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೆ. 3ರಂದು ಇ.ಡಿ. ಡಿಕೆ ಶಿವಕುಮಾರ್ ಅವರನ್ನು ಬಂಧಿಸಿತ್ತು. ಇದಕ್ಕೂ ಮೊದಲು ಆಗಸ್ಟ್ 30ರಿಂದ ಸತತ ನಾಲ್ಕು ದಿನ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಅವರನ್ನು ವಿಶೇಷ ನ್ಯಾಯಾಲಯವು ಇ.ಡಿ ವಶಕ್ಕೆ ಒಪ್ಪಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+