ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅವತ್ತು ಜಾರ್ಜ್‌; ಇವತ್ತು ಡಿಕೆ: ತಿಹಾರ್‌ ಜೈಲಿಗೆ ಕಾಲಿಟ್ಟ ಎರಡನೇ ಕನ್ನಡಿಗ

|
Google Oneindia Kannada News

Recommended Video

ತಿಹಾರ್ ಜೈಲಿಗೆ ಡಿಕೆಶಿ ಶಿಫ್ಟ್. | Dk Shivakumar | Oneindia Kannada

ನವದೆಹಲಿ, ಸೆಪ್ಟೆಂಬರ್ 19: ಅಕ್ರಮ ವರ್ಗಾವಣೆ ಆರೋಪ ಹೊತ್ತಿರುವ ಬಂಧನ ಎದುರಿಸುತ್ತಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ತಿಹಾರ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದರೂ ಕೂಡ ಡಿಕೆ ಶಿವಕುಮಾರ್ ಅವರಿಗೆ ಅನಾರೋಗ್ಯವಿದ್ದ ಕಾರಣ ಅವರನ್ನು ರಾಮ್ ಮನೋಹರ ಲೂಹಿಯಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಡಿಕೆಶಿಗೆ ನ್ಯಾಯಾಂಗ ಬಂಧನ, ತಿಹಾರ್ ಜೈಲು ಬದಲಿಗೆ ಆಸ್ಪತ್ರೆ ವಾಸಡಿಕೆಶಿಗೆ ನ್ಯಾಯಾಂಗ ಬಂಧನ, ತಿಹಾರ್ ಜೈಲು ಬದಲಿಗೆ ಆಸ್ಪತ್ರೆ ವಾಸ

ಡಿಕೆ ಶಿವಕುಮಾರ್ ಅವರು ಬಾಯಿಹುಣ್ಣು, ಅತಿಸಾರ, ಶುಗರ್‌ನಿಂದ ಬಳಲುತ್ತಿದ್ದರು. ಹಾಗಾಗಿ ಆಸ್ಪತ್ರೆ ವರದಿ ಬರುವ ವರೆಗೆ ಅವರನ್ನು ಅಲ್ಲಿಯೇ ಇರಲಿಸಲಾಗಿತ್ತು. ಡಿಕೆ ಶಿವಕುಮಾರ್ ಅವರು ಗುಣಮುಖರಾಗಿದ್ದಾರೆ, ಬಾಯಿಹುಣ್ಣು ಬಿಟ್ಟು ಯಾವುದೇ ತೊಂದರೆ ಇಲ್ಲ ಎಂದು ಆಸ್ಪತ್ರೆ ನೀಡಿದ ವರದಿ ಆಧರಿಸಿ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ.

ಜಾಮೀನು ಸಿಗುವವರೆಗೂ ಅವರು ತಿಹಾರ್ ಜೈಲಿನಲ್ಲಿಯೇ ಕಳೆಯಬೇಕಿದೆ. ಇಡಿ ವಶದಲ್ಲಿ ಸತತ 14 ದಿನಗಳನ್ನು ಕಳೆದಿರುವ ಡಿ.ಕೆ.ಶಿವಕುಮಾರ್ ಅವರಿಗೆ ವಿಶೇಷ ನ್ಯಾಯಾಲಯವು ಇಂದು ನ್ಯಾಯಾಂಗ ಬಂಧನ ವಿಧಿಸಿತ್ತು,.

ಆದರೆ ಡಿ.ಕೆ.ಶಿವಕುಮಾರ್ ಅವರನ್ನು ತಿಹಾರ್ ಜೈಲಿಗೆ ಕಳುಹಿಸುವ ಬದಲಿಗೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ನ್ಯಾಯಾಧೀಶರು ಸೂಚಿಸಿದರು. ಆಸ್ಪತ್ರೆಯಲ್ಲಿಯೇ ಡಿ.ಕೆ.ಶಿವಕುಮಾರ್ ಅವರು ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.

1975ರ ಸಮಯದಲ್ಲಿ 9 ತಿಂಗಳು ತಿಹಾರ್ ಜೈಲಿನಲ್ಲಿದ್ದ ಜಾರ್ಜ್ ಫರ್ನಾಂಡಿಸ್

1975ರ ಸಮಯದಲ್ಲಿ 9 ತಿಂಗಳು ತಿಹಾರ್ ಜೈಲಿನಲ್ಲಿದ್ದ ಜಾರ್ಜ್ ಫರ್ನಾಂಡಿಸ್

ಡೈನಮೈಟ್‌ ಕದ್ದ ಆರೋಪವನ್ನು ಜಾರ್ಜ್‌ ಮೇಲೆ ಹಾಕಿ ಅವರನ್ನು 9 ತಿಂಗಳು ಕಾಲ ತಿಹಾರ್‌ ಜೈಲಿನಲ್ಲಿ ಇಡಲಾಯಿತು. ಈ ಪ್ರಕರಣವೇ ಮುಂದೆ 'ಬರೋಡಾ ಡೈನಮೈಟ್‌' ಎಂದು ಪ್ರಖ್ಯಾತವಾಯಿತು. ಜೈಲಿನಲ್ಲಿದ್ದುಕೊಂಡೇ ಬಿಹಾರದ ಮುಜಾಫರ್‌ನಗರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ, ಮೂರು ಲಕ್ಷ ಮತಗಳ ಅಂತರದಿಂದ ಗೆದ್ದರು. ಜಾರ್ಜ್‌ ಅವರನ್ನು ಬಂಧಿಸಿದ ಕ್ಷ ಣದಲ್ಲಿ ಅವರ ಕೋಳ ತೊಟ್ಟ ಕೈ ಮೇಲತ್ತಿದ ಫೋಟೋ ಈ ಗೆಲುವಿನಲ್ಲಿ ಭಾರಿ ಪ್ರಭಾವ ಬೀರಿತ್ತು!

ಕರ್ನಾಟಕದ ಎರಡನೇ ಸಕ್ರಿಯ ರಾಜಕಾರಣಿ ತಿಹಾರ್ ಜೈಲಿಗೆ

ಕರ್ನಾಟಕದ ಎರಡನೇ ಸಕ್ರಿಯ ರಾಜಕಾರಣಿ ತಿಹಾರ್ ಜೈಲಿಗೆ

ಕರ್ನಾಟಕದ ಇನ್ನೊಬ್ಬ ಸಕ್ರಿಯ ರಾಜಕಾರಣಿ ಡಿಕೆ ಶಿವಕುಮಾರ್ ತಿಹಾರ್ ಜೈಲುಪಾಲಾಗಿದ್ದಾರೆ. ಇದಕ್ಕೂ ಮೊದಲು ಜಾರ್ಜ್ ಫರ್ನಾಂಡಿಸ್ ಅವರನ್ನು 1975ರಲ್ಲಿ 9 ತಿಂಗಳ ಕಾಲ ತಿಹಾರ್ ಜೈಲಿನಲ್ಲಿಡಲಾಗಿತ್ತು.

ಇ.ಡಿ. ವಶದಲ್ಲಿದ್ದ ಡಿಕೆಶಿ

ಇ.ಡಿ. ವಶದಲ್ಲಿದ್ದ ಡಿಕೆಶಿ

ಇಡಿ ವಶದಲ್ಲಿ ಸತತ 14 ದಿನಗಳನ್ನು ಕಳೆದಿರುವ ಡಿ.ಕೆ.ಶಿವಕುಮಾರ್ ಅವರಿಗೆ ವಿಶೇಷ ನ್ಯಾಯಾಲಯವು ಇಂದು ನ್ಯಾಯಾಂಗ ಬಂಧನ ವಿಧಿಸಿತು. ಆದರೆ ಡಿ.ಕೆ.ಶಿವಕುಮಾರ್ ಅವರನ್ನು ತಿಹಾರ್ ಜೈಲಿಗೆ ಕಳುಹಿಸುವ ಬದಲಿಗೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ನ್ಯಾಯಾಧೀಶರು ಸೂಚಿಸಿದರು. ಆಸ್ಪತ್ರೆಯಲ್ಲಿಯೇ ಡಿ.ಕೆ.ಶಿವಕುಮಾರ್ ಅವರು ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಚೇತರಿಕೆ

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಚೇತರಿಕೆ

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಆರ್‌ಎಂಎಲ್ ಆಸ್ಪತ್ರೆ ನೀಡಿರುವ ವರದಿ ಪ್ರಕಾರ ದೆಹಲಿ ಪೊಲೀಸರು ಡಿಕೆ ಶಿವಕುಮಾರ್ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ. ಡಿಕೆ ಶಿವಕುಮಾರ್ ಅವರ ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

English summary
After Treatment Dk Shivakumar Shited To Tihar Jail. Delhi police Taken Him To jail.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X