ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡ್ರಿಪ್ಸ್‌ ಹಾಕಿದ್ರೂ ಸಹಜ ಸ್ಥಿತಿಗೆ ಮರಳದ ಡಿಕೆ ಶಿವಕುಮಾರ್ ಆರೋಗ್ಯ

|
Google Oneindia Kannada News

Recommended Video

ಎಷ್ಟೇ ಪ್ರಯತ್ನ ಪಟ್ಟರು ಸಹಜ ಸ್ಥಿತಿಗೆ ಬರುತ್ತಿಲ್ಲ ಡಿಕೆಶಿ ಆರೋಗ್ಯ..? | DK Shivakumar | Oneindia Kannada

ನವದೆಹಲಿ, ಸೆಪ್ಟೆಂಬರ್ 18: ಡ್ರಿಪ್ಸ್ ಹಾಕಿದ್ದರೂ ಕೂಡ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಆರೋಗ್ಯಸಹಜ ಸ್ಥಿತಿಗೆ ಮರಳಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ರಕ್ತದೊತ್ತಡ, ಶುಗರ್, ಅತಿಸಾರದಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಅವರ ಆರೋಗ್ಯ ತಪಾಸಣೆ 11 ಗಂಟೆ ಸುಮಾರಿಗೆ ನಡೆಯಲಿದೆ. ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ರಂಜಿತ್ ಎನ್ನುವವರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಲು ಮಗಳು ಐಶ್ವರ್ಯಳೇ ಕಾರಣ?ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಲು ಮಗಳು ಐಶ್ವರ್ಯಳೇ ಕಾರಣ?

ಅಕ್ರಮ ಹಣ ವಗಾವಣೆ ಆರೋಪದಲ್ಲಿ ಸೆ.3ರಿಂದ ಇಡಿ ಬಂಧನದಲ್ಲಿದ್ದಾರೆ. ಮಂಗಳವಾರವೂ ಕೂಡ ನ್ಯಾಯಾಲಯವು ಮತ್ತೆ 14 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಜಾಮೀನು ಸಿಗುತ್ತಾ ಅಥವಾ ಬಂಧನ ಮುಂದುವರೆಯುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

 ಸತತ ಎರಡು ಗಂಟೆಗಳ ಕಾಲ ತೀವ್ರ ನಿಗಾ ಘಟಕದಲ್ಲಿದ್ದರು

ಸತತ ಎರಡು ಗಂಟೆಗಳ ಕಾಲ ತೀವ್ರ ನಿಗಾ ಘಟಕದಲ್ಲಿದ್ದರು

ತೀವ್ರ ರಕ್ತದೊತ್ತಡ ಹಾಗೂ ಹೃದಯ ಬೇನೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಆರ್‌ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಸತತ ಎರಡು ಗಂಟೆಗಳ ತಪಾಸಣೆ ನಂತರ ಡಿಕೆ ಶಿವಕುಮಾರ್ ಅವರನ್ನು ತೀವ್ರ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು.

 ಇಂದು ಜಾಮೀನು ಅರ್ಜಿ ವಿಚಾರಣೆ

ಇಂದು ಜಾಮೀನು ಅರ್ಜಿ ವಿಚಾರಣೆ

ಡಿಕೆ ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಬುಧವಾರ(ಸೆ.18) ಮಧ್ಯಾಹ್ನ ನಡೆಯಲಿದೆ. ಜಾಮೀನು ಸಿಕ್ಕರೆ ಬಿಡುಗಡೆಯಾಗಲಿದ್ದು ಇಲ್ಲದಿದ್ದರೆ ತಿಹಾರ್ ಜೈಲು ಪಾಲಾಗಲಿದ್ದಾರೆ.

ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಶತಕೋಟಿಗಳ ಒಡತಿ ಆಗಿದ್ದೇಗೆ?ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಶತಕೋಟಿಗಳ ಒಡತಿ ಆಗಿದ್ದೇಗೆ?

 ಏನಿದು ಡಿಕೆಶಿ ಪ್ರಕರಣ

ಏನಿದು ಡಿಕೆಶಿ ಪ್ರಕರಣ

ದೆಹಲಿಯಲ್ಲಿರುವ ಡಿ.ಕೆ. ಶಿವಕುಮಾರ್​ ಅವರಿಗೆ ಸೇರಿದ ಫ್ಲಾಟ್​ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಅಕ್ರಮ ಹಣ ಪತ್ತೆಯಾಗಿತ್ತು. ಡಿಕೆಶಿ ಹಾಗೂ ಆಪ್ತರ ಮನೆಗಳಲ್ಲಿ ಐಟಿ ಅಧಿಕಾರಿಗಳು 8.59 ಕೋಟಿ ಹಣ ಜಪ್ತಿ ಮಾಡಿದ್ದರು.

ಇಡಿ ಸಮನ್ಸ್ ರದ್ದು ಕೋರಿ ಸಚಿವ ಡಿಕೆಶಿ ಹಾಗೂ ಆಪ್ತರು ಅರ್ಜಿ ಸಲ್ಲಿಸಿದ್ದರು. ಹಣದ ಮೂಲದ ಬಗ್ಗೆ ವಿವರಣೆ ನೀಡುವಂತೆ ಡಿಕೆಶಿ ಮತ್ತು ಆಪ್ತರಿಗೆ ಇಡಿ ಸಮನ್ಸ್ ನೀಡಿತ್ತು.

ಡಿಕೆಶಿಗೆ ನ್ಯಾಯಾಂಗ ಬಂಧನ, ತಿಹಾರ್ ಜೈಲು ಬದಲಿಗೆ ಆಸ್ಪತ್ರೆ ವಾಸಡಿಕೆಶಿಗೆ ನ್ಯಾಯಾಂಗ ಬಂಧನ, ತಿಹಾರ್ ಜೈಲು ಬದಲಿಗೆ ಆಸ್ಪತ್ರೆ ವಾಸ

 ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಇಡಿ ನೋಟಿಸ್

ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಇಡಿ ನೋಟಿಸ್

ಅಕ್ರಮ ಹಣ ದೊರೆತ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್​ ಪ್ರಬಲ ನಾಯಕ ಡಿಕೆ ಶಿವಕುಮಾರ್​ ಅವರನ್ನು ವಿಚಾರಣೆ ನಡೆಸುತ್ತಿದೆ. ಡಿಕೆಶಿ ಆಪ್ತರಲ್ಲೊಬ್ಬರಾದ ಲಕ್ಷ್ಮಿ ಹೆಬ್ಬಾಳ್ಕರ್​ಗೂ ಇಡಿ ನೊಟೀಸ್​ ನೀಡಿದೆ. ಒಬ್ಬರಲ್ಲ, ಇಬ್ಬರಲ್ಲ ಇಡಿ ಪಟ್ಟಿಯಲ್ಲಿ 184 ಜನ ಇದ್ದಾರಂತೆ. ಈ ಎಲ್ಲರಿಗೂ ಇಡಿ ನೋಟೀಸ್​ ನೀಡಿದೆ. 184 ಜನರಿಗೆ ಇಡಿ ನೋಟಿಸ್​ ನೀಡಿದೆ. ಅವರಲ್ಲಿ ನಾನು ಒಬ್ಬ ಅಷ್ಟೆ, ಎಂದು ಹೇಳುವ ಮೂಲಕ ಲಕ್ಷ್ಮಿ ಹೆಬ್ಬಾಳ್ಕರ್​ ಅಚ್ಚರಿ ಮೂಡಿಸಿದ್ದಾರೆ.

English summary
Doctors have said that the former minister DK Shivakumar's illness has not returned to normal despite the drips.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X