ಏಮ್ಸ್ ಸಿಇಟಿ ರದ್ದುಕೋರಿ ಸುಪ್ರೀಂ ಮೆಟ್ಟಿಲೇರಿದ ಡಾಕ್ಟರ್ಸ್
ನವದೆಹಲಿ, ಜೂನ್ 7: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಜೂನ್ 16ರಂದು ನಡೆಸಲಿರುವ ಐಎನ್‌ಐ ಸಿಇಟಿ ಪರೀಕ್ಷೆ ಮುಂದೂಡಬೇಕೆಂದು ಕೋರಿ ಇಪ್ಪತ್ತಾರು ವೈದ್ಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ದೇಶದಲ್ಲಿ ಲಸಿಕೆ ಅಭಿಯಾನ ಇನ್ನೂ ಪೂರ್ತಿಗೊಂಡಿಲ್ಲ, ಅನೇಕ ಮಂದಿ ಕೋವಿಡ್ ಲಸಿಕೆಯ ಮೊದಲ ಡೋಸ್ ಕೂಡ ಹಾಕಿಸಿಕೊಂಡಿಲ್ಲ. ಇಂಥ ಸಂದರ್ಭದಲ್ಲಿ ಪ್ರವೇಶ ಪರೀಕ್ಷೆ ನಡೆಸಿದರೆ ಅವರ ಜೀವಕ್ಕೆ ಅಪಾಯ ಎದುರಾಗಲಿದೆ ಎಂದು ಏಮ್ಸ್ ವೈದ್ಯರು ಸುಪ್ರೀಂಕೋರ್ಟ್ ಅರ್ಜಿಯಲ್ಲಿ ತಿಳಿಸಲಾಗಿದೆ.
ವೈದ್ಯಕೀಯ/ ಸ್ನಾತಕೋತ್ತರ ಅಧ್ಯಯನ ಕ್ಷೇತ್ರದಲ್ಲಿ ಉನ್ನತ ವ್ಯಾಸಂಗ ಪ್ರವೇಶಾತಿಗಾಗಿ ಐಎನ್‌ಐ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ. ವಕೀಲರಾದ ಪಲ್ಲವಿ ಪ್ರತಾಪ್ ಅವರ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ ಜೂನ್ 16 ರಂದು ಪರೀಕ್ಷೆ ನಡೆಸುತ್ತಿರುವುದರಿಂದ ಸ್ನಾತಕೋತ್ತರ ಪರೀಕ್ಷೆ ಮುಂದೂಡುವುದಕ್ಕೆ ಸಂಬಂಧಿಸಿದಂತೆ ನೀಟ್ ಪರೀಕ್ಷೆಗಳನ್ನು ಮುಂದೂಡುವಾಗ ಪ್ರಧಾನಿ ಕಚೇರಿ ನೀಡಿದ್ದ ಭರವಸೆಯನ್ನು ಸಂಪೂರ್ಣವಾಗಿ ಕಡೆಗಣಿಸಿದಂತಾಗಿದೆ ಎಂದು ತಿಳಿಸಿದ್ದಾರೆ.

ಈ ಪರೀಕ್ಷೆಗೆ ತಯಾರಿ ನಡೆಸಲು ವಿದ್ಯಾರ್ಥಿಗಳಿಗೆ ಕನಿಷ್ಠ ಒಂದು ತಿಂಗಳ ಸಮಯಾವಕಾಶ ನೀಡಲಾಗುವುದು ಎಂದು ಪ್ರಧಾನಿ ಕಚೇರಿಯು ಮಾಹಿತಿ ನೀಡಿತ್ತು ಆದರೆ, ಕೇವಲ 19 ದಿನಗಳ ಕಾಲಾವಕಾಶ ನೀಡಿ ಪರೀಕ್ಷೆ ಘೋಷಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳು ಬೇರೆ ಬೇರೆ ರಾಜ್ಯಗಳಲ್ಲಿವೆ ಅಥವಾ ಪರೀಕ್ಷಾಂಕ್ಷಿಗಳು ಕೆಲಸ ನಿರ್ವಹಿಸುತ್ತಿರುವ ಸ್ಥಳದಿಂದ ಬಹುದೂರದಲ್ಲಿವೆ. ಅವರು ಪ್ರಯಾಣ ನಿರ್ಬಂಧಗಳನ್ನು ಎದುರಿಸಿ ಅಲ್ಲಿಗೆ ಹೋಗಬೇಕಾದ ಅನಿವಾರ್ಯತೆ ಎದುರಾಗುತ್ತದೆ ಎಂದು ತಿಳಿಸಲಾಗಿದೆ.
ಸಾಂಕ್ರಾಮಿಕ ರೋಗದ ಮಧ್ಯೆ ಪರೀಕ್ಷೆ ನಡೆಸುವುದರಿಂದ ಪದವೀಧರ ವೈದ್ಯರ ಮೇಲೆ ಒತ್ತಡ ಉಂಟು ಮಾಡುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದು ಸಿಬಿಎಸ್‌ಇ ಮತ್ತಿತರ ವೃತ್ತಿಪರ ಪರೀಕ್ಷೆಗಳನ್ನು ಮುಂದೂಡಿರುವುದು ಅಥವಾ ರದ್ದಾಗಿರುವುದನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ. (ಮಾಹಿತಿ ಕೃಪೆ: ಬಾರ್ ಅಂಡ್ ಬೆಂಚ್)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications