ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಮ್ಸ್ ಸಿಇಟಿ ರದ್ದುಕೋರಿ ಸುಪ್ರೀಂ ಮೆಟ್ಟಿಲೇರಿದ ಡಾಕ್ಟರ್ಸ್

|
Google Oneindia Kannada News

ನವದೆಹಲಿ, ಜೂನ್ 7: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ಜೂನ್ 16ರಂದು ನಡೆಸಲಿರುವ ಐಎನ್‌ಐ ಸಿಇಟಿ ಪರೀಕ್ಷೆ ಮುಂದೂಡಬೇಕೆಂದು ಕೋರಿ ಇಪ್ಪತ್ತಾರು ವೈದ್ಯರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

ದೇಶದಲ್ಲಿ ಲಸಿಕೆ ಅಭಿಯಾನ ಇನ್ನೂ ಪೂರ್ತಿಗೊಂಡಿಲ್ಲ, ಅನೇಕ ಮಂದಿ ಕೋವಿಡ್ ಲಸಿಕೆಯ ಮೊದಲ ಡೋಸ್ ಕೂಡ ಹಾಕಿಸಿಕೊಂಡಿಲ್ಲ. ಇಂಥ ಸಂದರ್ಭದಲ್ಲಿ ಪ್ರವೇಶ ಪರೀಕ್ಷೆ ನಡೆಸಿದರೆ ಅವರ ಜೀವಕ್ಕೆ ಅಪಾಯ ಎದುರಾಗಲಿದೆ ಎಂದು ಏಮ್ಸ್ ವೈದ್ಯರು ಸುಪ್ರೀಂಕೋರ್ಟ್ ಅರ್ಜಿಯಲ್ಲಿ ತಿಳಿಸಲಾಗಿದೆ.

ವೈದ್ಯಕೀಯ/ ಸ್ನಾತಕೋತ್ತರ ಅಧ್ಯಯನ ಕ್ಷೇತ್ರದಲ್ಲಿ ಉನ್ನತ ವ್ಯಾಸಂಗ ಪ್ರವೇಶಾತಿಗಾಗಿ ಐಎನ್‌ಐ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ. ವಕೀಲರಾದ ಪಲ್ಲವಿ ಪ್ರತಾಪ್ ಅವರ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ ಜೂನ್ 16 ರಂದು ಪರೀಕ್ಷೆ ನಡೆಸುತ್ತಿರುವುದರಿಂದ ಸ್ನಾತಕೋತ್ತರ ಪರೀಕ್ಷೆ ಮುಂದೂಡುವುದಕ್ಕೆ ಸಂಬಂಧಿಸಿದಂತೆ ನೀಟ್‌ ಪರೀಕ್ಷೆಗಳನ್ನು ಮುಂದೂಡುವಾಗ ಪ್ರಧಾನಿ ಕಚೇರಿ ನೀಡಿದ್ದ ಭರವಸೆಯನ್ನು ಸಂಪೂರ್ಣವಾಗಿ ಕಡೆಗಣಿಸಿದಂತಾಗಿದೆ ಎಂದು ತಿಳಿಸಿದ್ದಾರೆ.

Doctors move Supreme Court seeking postponement of AIIMS INI CET Examination, 2021

ಈ ಪರೀಕ್ಷೆಗೆ ತಯಾರಿ ನಡೆಸಲು ವಿದ್ಯಾರ್ಥಿಗಳಿಗೆ ಕನಿಷ್ಠ ಒಂದು ತಿಂಗಳ ಸಮಯಾವಕಾಶ ನೀಡಲಾಗುವುದು ಎಂದು ಪ್ರಧಾನಿ ಕಚೇರಿಯು ಮಾಹಿತಿ ನೀಡಿತ್ತು ಆದರೆ, ಕೇವಲ 19 ದಿನಗಳ ಕಾಲಾವಕಾಶ ನೀಡಿ ಪರೀಕ್ಷೆ ಘೋಷಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳು ಬೇರೆ ಬೇರೆ ರಾಜ್ಯಗಳಲ್ಲಿವೆ ಅಥವಾ ಪರೀಕ್ಷಾಂಕ್ಷಿಗಳು ಕೆಲಸ ನಿರ್ವಹಿಸುತ್ತಿರುವ ಸ್ಥಳದಿಂದ ಬಹುದೂರದಲ್ಲಿವೆ. ಅವರು ಪ್ರಯಾಣ ನಿರ್ಬಂಧಗಳನ್ನು ಎದುರಿಸಿ ಅಲ್ಲಿಗೆ ಹೋಗಬೇಕಾದ ಅನಿವಾರ್ಯತೆ ಎದುರಾಗುತ್ತದೆ ಎಂದು ತಿಳಿಸಲಾಗಿದೆ.

ಸಾಂಕ್ರಾಮಿಕ ರೋಗದ ಮಧ್ಯೆ ಪರೀಕ್ಷೆ ನಡೆಸುವುದರಿಂದ ಪದವೀಧರ ವೈದ್ಯರ ಮೇಲೆ ಒತ್ತಡ ಉಂಟು ಮಾಡುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದು ಸಿಬಿಎಸ್‌ಇ ಮತ್ತಿತರ ವೃತ್ತಿಪರ ಪರೀಕ್ಷೆಗಳನ್ನು ಮುಂದೂಡಿರುವುದು ಅಥವಾ ರದ್ದಾಗಿರುವುದನ್ನು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ. (ಮಾಹಿತಿ ಕೃಪೆ: ಬಾರ್ ಅಂಡ್ ಬೆಂಚ್)

English summary
Twenty-six doctors have approached the Supreme Court seeking postponement of the INI CET Examination, 2021 which is scheduled to be conducted by All India Institute of Medical Science (AIIMS) on June 16, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X