'12 ಗಂಟೆಯವರೆಗೆ ಈ ರಸ್ತೆಗಳಲ್ಲಿ ಹೋಗಬೇಡಿ': ದೆಹಲಿ ಜನರಿಗೆ ಟ್ರಾಫಿಕ್ ಪೊಲೀಸರ ಮನವಿ

ನವದೆಹಲಿ, ಜೂನ್ 13: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯ ಕಚೇರಿಗೆ ಹಾಜರಾಗಿದ್ದಾರೆ. ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಕಳುಹಿಸಿದ್ದು, ಇಡಿ ಸಮನ್ಸ್‌ನ ಮೇರೆಗೆ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯದ ಕಚೇರಿಯನ್ನು ತಲುಪಿದ್ದಾರೆ. ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಬಂದ ನಂತರ ಕಾಂಗ್ರೆಸ್ ಇದನ್ನು ವಿರೋಧಿಸುತ್ತಿದೆ. ಇದನ್ನು ವಿರೋಧಿಸಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್‌ನ ಕಾರ್ಯವೈಖರಿಯನ್ನು ಗಮನದಲ್ಲಿಟ್ಟುಕೊಂಡು ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರತಿಭಟನೆಯ ಹಿನ್ನಲೆಯಲ್ಲಿ ಸಂಚಾರ ಪೊಲೀಸರು ಕೂಡ ಕೆಲ ರಸ್ತೆಗಳ ಮಾರ್ಗ ಬದಲಿಸಿದ್ದಾರೆ.

ದೆಹಲಿ ಟ್ರಾಫಿಕ್ ಪೊಲೀಸರು ಹೊರಡಿಸಿದ ಸಲಹೆಯಲ್ಲಿ ಜನರು ಬೆಳಗ್ಗೆ 7 ಗಂಟೆಯಿಂದ ಮೇಥಿ ಜಂಕ್ಷನ್, ತುಘಲಕ್ ರಸ್ತೆ ಜಂಕ್ಷನ್, ಕ್ಲಾರಿಡ್ಜ್ ಜಂಕ್ಷನ್, ಕ್ಯೂ ಪಾಯಿಂಟ್ ಜಂಕ್ಷನ್, ಸುನ್ಹಾರಿ ಮಸೀದಿ ಜಂಕ್ಷನ್, ಮೌಲಾನಾ ಆಜಾದ್ ರಸ್ತೆ ಜಂಕ್ಷನ್, ಮಾನ್ ಸಿಂಗ್ ರಸ್ತೆ ಜಂಕ್ಷನ್ ನಡುವೆ ಸಂಚರಿಸುತ್ತಾರೆ ಎಂದು ಸವಾರರಿಗೆ ತಿಳಿಸಲಾಗಿದೆ. ಮಧ್ಯಾಹ್ನ 12 ಗಂಟೆಯವರೆಗೆ ಈ ರಸ್ತೆ ಮಾರ್ಗವಾಗಿ ವಾಹನದಲ್ಲಿ ಚಲಿಸಬೇಡಿ ಎಂದು ಪೊಲೀಸರು ಸೂಚನೆ ನೀಡಿದ್ದಾರೆ. ಈಗಾಗಲೇ ಇಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಈ ರಸ್ತೆಗಳ ಕಡೆ ಹೋಗಬೇಡಿ ಎಂದು ಸೂಚನೆ ನೀಡಲಾಗಿದೆ.

ಪೊಲೀಸ್ ನೀಡಿದ ಸೂಚನೆ

ಪೊಲೀಸ್ ನೀಡಿದ ಸೂಚನೆ

ವಿಶೇಷ ಸಂಚಾರ ವ್ಯವಸ್ಥೆಯಿಂದಾಗಿ ದೆಹಲಿಯ ಗೋಲ್ ದಕ್ ಖಾನಾ ಜಂಕ್ಷನ್, ಪಟೇಲ್ ಚೌಕ್, ವಿಂಡ್ಸರ್ ಪ್ಲೇಸ್, ತೀನ್ ಮೂರ್ತಿ ಚೌಕ್, ಪೃಥ್ವಿರಾಜ್ ರಸ್ತೆಯಲ್ಲಿ ಬಸ್‌ಗಳನ್ನು ಮುಂದುವರಿಸಲು ಅನುಮತಿಸಲಾಗುವುದಿಲ್ಲ ಎಂದು ದೆಹಲಿ ಸಂಚಾರ ಪೊಲೀಸರಿಗೆ ತಿಳಿಸಲಾಗಿದೆ. ಇಡಿ ಮುಂದೆ ರಾಹುಲ್ ಗಾಂಧಿ ಹಾಜರಾಗುವ ಮುನ್ನವೇ ಇಂದು ಬೆಳಗ್ಗೆಯಿಂದಲೇ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವುದು ಗಮನಾರ್ಹವಾಗಿದೆ. ದೆಹಲಿ ಪೊಲೀಸರು ಅನುಮತಿ ನೀಡದಿದ್ದರೂ ಕಾಂಗ್ರೆಸ್ ಕಾರ್ಯಕರ್ತರು ಇಂದು ಪಕ್ಷದ ಪ್ರಧಾನ ಕಚೇರಿಯಿಂದ ಎಪಿಜೆ ಅಬ್ದುಲ್ ಕಲಾಂ ರಸ್ತೆವರೆಗೆ ರ್‍ಯಾಲಿ ನಡೆಸಲಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ರ್‍ಯಾಲಿಗೆ ಅನುಮತಿ ನಿರಾಕರಿಸಿದ್ದರು.

ರಾಹುಲ್ ಗಾಂಧಿಗೆ ಮತ್ತೊಂದು ಸಮನ್ಸ್ ಜಾರಿ

ರಾಹುಲ್ ಗಾಂಧಿಗೆ ಮತ್ತೊಂದು ಸಮನ್ಸ್ ಜಾರಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ ರಾಹುಲ್ ಗಾಂದಿಯವರಿಗೆ ಸಮನ್ಸ್ ಜಾರಿ ಮಾಡಿದ್ದ ಜಾರಿ ನಿರ್ದೇಶನಾಲಯವು, ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇದಕ್ಕೆ ಉತ್ತರಿಸಿದ್ದ ರಾಹುಲ್ ಗಾಂಧಿಯವರು ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದು, ಜೂನ್ 5 ರಂದು ಭಾರತಕ್ಕೆ ವಾಪಸ್ಸಾಗುತ್ತಿದ್ದೇನೆ. ತನಿಖೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಹೊಸದಾಗಿ ಮತ್ತೊಂದು ಸಮನ್ಸ್ ಜಾರಿ ಮಾಡಿರುವ ಜಾರಿ ನಿರ್ದೇಶನಾಲಯವು, ಜೂನ್ 13ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

 ವಿಚಾರಣೆ ಮುಂದೂಡಿಕೆ

ವಿಚಾರಣೆ ಮುಂದೂಡಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಯ ಮುಂಭಾಗದಲ್ಲಿ, ಭಾರೀ ಪ್ರತಿಭಟನೆ ಹಮ್ಮಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಈ ಪ್ರತಿಭಟನೆಯಲ್ಲಿ ಹಿರಿಯ ಕಾಂಗ್ರೆಸ್ ಸಂಸದರು ಮತ್ತು ನಾಯಕರು ಭಾಗಿಯಾಗಲಿದ್ದಾರೆ. ರಾಹುಲ್ ಗಾಂಧಿ ಅವರೊಂದಿಗೆ ಈ ನಾಯಕರು ಇಡಿಯತ್ತ ಹೆಜ್ಜೆ ಹಾಕಲಿದ್ದಾರೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ. ಇದೇ ಪ್ರಕರಣದಲ್ಲಿ ಇಡಿಯಿಂದ ಸಮನ್ಸ್ ಪಡೆದಿರುವ ಸೋನಿಯಾ ಗಾಂಧಿ, ಕೊರೊನಾ ವೈರಸ್ ಸೋಂಕು ತಗುಲಿರುವ ಕಾರಣಕ್ಕೆ ವಿಚಾರಣೆ ದಿನಾಂಕವನ್ನು ಮುಂದೂಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಸೋಮವಾರ ರಾಹುಲ್ ಗಾಂಧಿ ಮಾತ್ರ ವಿಚಾರಣೆಗೆ ಹಾಜರಾಗಲಿದ್ದಾರೆ.

ತನಿಖಾ ಸಂಸ್ಥೆ ದುರ್ಬಳಕೆ ಆರೋಪ

ತನಿಖಾ ಸಂಸ್ಥೆ ದುರ್ಬಳಕೆ ಆರೋಪ

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿರುವುದನ್ನು, ಕಾಂಗ್ರೆಸ್ ಕೇಂದ್ರ ಸರ್ಕಾರ ಮತ್ತು ಬಿಜೆಪಿಯ ದ್ವೇಷ ರಾಜಕಾರಣಕ್ಕೆ ಉದಾಹರಣೆ ಎಂದು ಆರೋಪಿಸಿದೆ. ವಿರೋಧಿಗಳನ್ನು ನೇರವಾಗಿ ಎದುರಿಸಲಾಗದ ಬಿಜೆಪಿ, ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಶಕ್ತಿ ಕುಂದಿಸುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಒಟ್ಟಿನಲ್ಲಿ ರಾಹುಲ್ ಗಾಂಧಿ ಅವರು ಇಡಿ ವಿಚಾರಣೆಗೆ ಹಾಜರಾಗುವ ಈ ದಿನ, ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿರುವುದು ಕುತೂಹಲ ಕೆರಳಿಸಿದೆ.

Recommended Video

      ED ವಿಚಾರಣೆಗೆ ತೆರಳಿದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+