ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅಭಿನಂದನೆಗಳ ಮಹಾಪೂರ

|
Google Oneindia Kannada News

ನವದೆಹಲಿ, ಜುಲೈ 21: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಆಯ್ಕೆಯಾಗಿದ್ದಾರೆ. ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಮುರ್ಮು ಅವರ ವಿರುದ್ಧ ಕಾಂಗ್ರೆಸ್‌ ನೇತೃತ್ವದ ಯುಪಿಎ ಅಭ್ಯರ್ಥಿಯಾಗಿ ಮಾಜಿ ಸಚಿವರಾಗಿದ್ದ ಯಶವಂತ್‌ ಸಿನ್ಹಾ ಕಣಕ್ಕಿಳಿದಿದ್ದರು.

ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳ ಮಹಾಪೂರವೆ ಹರಿದು ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೂತನ ರಾಷ್ಟಪತಿಯವರನ್ನು ಭೇಟಿಯಾಗಿ ಅಭಿನಂದನೆ ತಿಳಿಸಿದ್ದಾರೆ.

Draupadi Murmu elected as the 15th President of India: political leaders reactions

ಪ್ರತಿಸ್ಪರ್ಧಿ ಯಶವಂತ್‌ ಸಿನ್ಹಾ " 2022 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ದ್ರೌಪದಿ ಮುರ್ಮು ಅವರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಎಲ್ಲಾ ಭಾರತೀಯರಂತೆ ನಾನು ಕೂಡ 15ನೇ ರಾಷ್ಟ್ರಪತಿಯಾಗಿ ಅವರು ಯಾವುದೇ ಭಯ ಅಥವಾ ಯಾರಿಗೂ ಪರವಾಗಿಲ್ಲದೇ ಸಂವಿಧಾನದ ಪಾಲಕರಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಆಕೆಗೆ ಶುಭ ಹಾರೈಕೆಗಳನ್ನು ಸಲ್ಲಿಸಲು ನಾನು ಸಹ ದೇಶವಾಸಿಗಳೊಂದಿಗೆ ಸೇರುತ್ತೇನೆ" ಎಂದಿದ್ದಾರೆ.

Draupadi Murmu elected as the 15th President of India: political leaders reactions

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನೂತನ ರಾಷ್ಟ್ರಪತಿಗೆ ಅಭಿನಂದನೆ ತಿಳಿಸಿದ್ದಾರೆ. "ರಾಷ್ಟ್ರಪತಿ ಚುನಾವಣೆಯಲ್ಲಿ ಪರಿಣಾಮಕಾರಿ ಜಯ ದಾಖಲಿಸಿದ್ದಕ್ಕಾಗಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳು. ಹಳ್ಳಿಗಳಲ್ಲಿ, ಬಡವರು, ಅವಕಾಶ ವಂಚಿತರು ಹಾಗೂ ಸ್ಲಂಗಳಲ್ಲಿನ ಜನಕಲ್ಯಾಣಕ್ಕಾಗಿ ಸಕ್ರಿಯರಾಗಿದ್ದ ಅವರು ಇಂದು ಅವರ ನಡುವಿನಿಂದ ಬಂದು ಅತ್ಯುನ್ನತ ಸಾಂವಿಧಾನಿಕ ಸ್ಥಾನಕ್ಕೆ ಏರಿದ್ದಾರೆ. ಇದು ಭಾರತೀಯ ಪ್ರಜಾಪ್ರಭುತ್ವದ ಶಕ್ತಿಗೆ ಸಾಕ್ಷಿಯಾಗಿದೆ" ಎಂದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್‌ನಲ್ಲಿ ಶುಭಾಶಯ ತಿಳಿಸಿದ್ದಾರೆ. " ಭಾರತದ 15 ನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳು" ಎಂದಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಟ್ವೀಟ್ ಮಾಡಿ, "ಶ್ರೀಮತಿ ದ್ರೌಪದಿ ಮುರ್ಮು ಅವರು 126 ಸದಸ್ಯರ ಅಸ್ಸಾಂ ಅಸೆಂಬ್ಲಿಯಲ್ಲಿ NDA ಯ ಮೂಲ ಬಲ 79 ಕ್ಕೆ ಹೋಲಿಸಿದರೆ 104 ಮತಗಳನ್ನು ಪಡೆದರು. ಇಬ್ಬರು ಗೈರಾಗಿದ್ದರು. ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿಯ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಮತ್ತು ಈ ಐತಿಹಾಸಿಕ ಕ್ಷಣದಲ್ಲಿ ತುಂಬು ಮನಸ್ಸಿನಿಂದ ಸೇರಿದ್ದಕ್ಕಾಗಿ ಅಸ್ಸಾಂನ ಜನರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು" ಎಂದರು.

ಸಾಂಸ್ಕೃತಿಕ ಶ್ರೀಮಂತಿಕೆಯ ಪ್ರತೀಕ:

"ಪ್ರಥಮ ಬುಡಕಟ್ಟು ಮಹಿಳಾ ರಾಷ್ಟ್ರಪತಿಯನ್ನು ಚುನಾಯಿಸಿದ ಭಾರತ ಸಾಮಾನ್ಯ ಹಿನ್ನಲೆಯಿಂದ ಬಂದು ಇಂದು ರಾಷ್ಟ್ರದ ಉನ್ನತ ಹುದ್ದೆಯನ್ನು ಅಲಂಕರಿಸುತ್ತಿರುವ ಶ್ರೀಮತಿ ದ್ರೌಪದಿ ಮುರ್ಮು ಅವರು ಭಾರತದ ವೈವಿಧ್ಯತೆ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯ ಪ್ರತೀಕವಾಗಿದ್ದಾರೆ. ಭಾರತದ ಪ್ರಥಮ ಪ್ರಜೆಯಾಗಿ ಆಯ್ಕೆಗೊಂಡ ಅವರಿಗೆ ಹಾರ್ದಿಕ ಶುಭಾಶಯಗಳು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೂ ಮಾಡಿದ್ದಾರೆ.

English summary
Yashwant Sinha congratulated new President Draupadi Murmu says Hope Droupadi Murmu Functions Without Fear Or Favour.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X