ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಮತ್ತೆ ಲಘು ಭೂಕಂಪ: 2.7 ತೀವ್ರತೆ ದಾಖಲು

|
Google Oneindia Kannada News

ನವದೆಹಲಿ, ಏಪ್ರಿಲ್ 13: ದೆಹಲಿಯಲ್ಲಿ ಸತತ ಎರಡನೇ ದಿನ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.7 ಭೂಕಂಪದ ತೀವ್ರತೆ ದಾಖಲಾಗಿದೆ.

ಭೂಕಂಪದ ಕೇಂದ್ರ ಬಿಂದು ಯಾವುದು ಎನ್ನುವ ಕುರಿತು ಇನ್ನೇನು ಮಾಹಿತಿ ಲಭ್ಯವಾಗಬೇಕಿದೆ. ದೆಹಲಿಯಲ್ಲಿ ಏಪ್ರಿಲ್ 12ರಂದು ಸಂಜೆ 5.45ರ ಸುಮಾರಿಗೆ ಭೂಕಂಪ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿತ್ತು.

Earthquake Of Magnitude 2.7 In Delhi

ಈಗ ಸತತ ಎರಡನೇ ದಿನವು ಭೂಕಂಪ ಸಂಭವಿಸಿದೆ. ದೆಹಲಿ-ಉತ್ತರ ಪ್ರದೇಶ ಗಡಿಯನ್ನು ಕೇಂದ್ರ ಬಿಂದು ಎಂದು ಗುರುತಿಸಲಾಗಿತ್ತು.

ದೆಹಲಿ ಮತ್ತು ನೆರೆಯ ನಗರಗಳಾದ ನೋಯ್ಡಾ, ಗಾಜಿಯಾಬಾದ್‍ನಲ್ಲಿ ಭೂಕಂಪನ ಉಂಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿ ಸಂಭವಿಸಿಲ್ಲ.

ಕೊರೊನಾ ಲಾಕ್ಡೌನ್ ನಡುವೆ ದೆಹಲಿಯಲ್ಲಿ ಭೂಕಂಪದ ಅನುಭವಕೊರೊನಾ ಲಾಕ್ಡೌನ್ ನಡುವೆ ದೆಹಲಿಯಲ್ಲಿ ಭೂಕಂಪದ ಅನುಭವ

ಈ ಬಗ್ಗೆ ಲಾಕ್‍ಡೌನ್‍ನಿಂದ ಮನೆಯಲ್ಲೇ ಇರುವ ದೆಹಲಿಯ ಜನರು ಸಾಮಾಜಿಕ ಜಾಲತಾಣದಲ್ಲಿ ಭೂಕಂಪದ ಅನುಭವ ಹಂಚಿಕೊಂಡಿದ್ದಾರೆ.

ಭಾನುವಾರ ಸಂಜೆ 5.45ಕ್ಕೆ ಭೂಕಂಪ ಸಂಭವಿಸಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ದೇಶದಲ್ಲಿ ಕೊರೊನಾ ವೈರಸ್ ಭೀತಿಯ ನಡುವೆ ಭೂಕಂಪ ಸಂಭವಿಸಿದ್ದು, ದೆಹಲಿ ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ.

English summary
Earthquake of magnitude 2.7 in Delhi, adjoining areas.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X