Get Updates
Get notified of breaking news, exclusive insights, and must-see stories!

EC ಗೆ ಲಂಚ ನೀಡಿದ ಆರೋಪ: ದೆಹಲಿಯಲ್ಲಿ ದಿನಕರನ್ ವಿಚಾರಣೆ

ಚುನಾವಣಾ ಆಯೋಗಕ್ಕೆ ಲಂಚ ನೀಡಲು ಪ್ರಯತ್ನಿಸಿದ ಆರೋಪ ಎದುರಿಸುತ್ತಿರುವ ಟಿಟಿವಿ ದಿನಕರನ್ ಅವರನ್ನು ಇಂದು ದೆಹಲಿ ಪೊಲೀಸರು ವಿಚಾರಣೆಗೊಳಪಡಿಸಲಿದ್ದಾರೆ.

ನವದೆಹಲಿ, ಏಪ್ರಿಲ್ 22: ಚುನಾವಣಾ ಆಯೋಗಕ್ಕೆ ಲಂಚ ನೀಡಲು ಪ್ರಯತ್ನಿಸಿದ ಆರೋಪ ಎದುರಿಸುತ್ತಿರುವ ಟಿಟಿವಿ ದಿನಕರನ್ ಅವರನ್ನು ಇಂದು (ಏಪ್ರಿಲ್ 22) ದೆಹಲಿ ಪೊಲೀಸರು ವಿಚಾರಣೆಗೊಳಪಡಿಸಲಿದ್ದಾರೆ.

ಇಂದು ವಿಚಾರಣೆ ಎದುರಿಸಲಿರುವ ಶಶಿಕಲಾ ಅವರ ಸೋದರಳಿಯ ಟಿಟಿವಿ ದಿನಕರನ್ ಚೆನ್ನೈನಿಂದ ದೆಹಲಿಗೆ ತೆರಳಿದ್ದು, ತಮ್ಮ ಕೃತ್ಯವನ್ನು ಹೇಗೆ ಸಮರ್ಥಿಸಿಕೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.[ಎಐಎಡಿಎಂಕೆ ಪಕ್ಷದಿಂದ ಟಿಟಿವಿ ದಿನಕರನ್ ಔಟ್]

EC bribery case: Delhi police to inquire TTV Dinakaran

ಜಯಲಲಿತಾ ನಿಧನದಿಂದ ತೆರವಾಗಿದ್ದ ಚೆನ್ನೈನ ಆರ್.ಕೆ. ನಗರ ಉಪ ಚುನಾವಣೆ ಏ. 12ರಂದು ನಡೆಯಬೇಕಿತ್ತು. ಈ ಸಂದರ್ಭದಲ್ಲಿ ಎಐಎಡಿಎಂಕೆ ಪಕ್ಷದ ಲಾಂಛನವಾದ ಎರಡು ಎಲೆಗಳ ಚಿಹ್ನೆಯನ್ನು ದಿನಕರನ್- ಶಶಿಕಲಾ ಬಣಕ್ಕೆ ಸೇರಿದವರು ತಮ್ಮ ಬಣದಲ್ಲೇ ಉಳಿಸಿಕೊಳ್ಳಲು ಪ್ರಯತ್ನಿಸಿದ್ದರು.

ಇದಕ್ಕಾಗಿ ದಿನಕರನ್ ಅವರು ಮಧ್ಯವರ್ತಿಯ ಮೂಲಕ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಪ್ರಯತ್ನಿಸಿದ ಆರೋಪ ಕೇಳಿ ಬಂದಿದ್ದರಿಂದ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರನ್ನು ವಿಚಾರಣೆಗೊಳಪಡಿಸಲಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+