ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಮತ್ತೆ ನಿರಾಳ: ಎರಡು ಪ್ರಕರಣಗಳಲ್ಲಿ ಕ್ಲೀನ್ ಚಿಟ್

|
Google Oneindia Kannada News

Recommended Video

ಕಾಂಗ್ರೆಸ್ ನೀಡಿದ್ದ ದೂರೆಲ್ಲವನ್ನು ಖುಲಾಸೆಗೊಳಿಸಿದ ಚುನಾವಣಾ ಆಯೋಗ..! | Oneindia Kannada

ನವದೆಹಲಿ, ಮೇ 07: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಎರಡು ಪ್ರಕರಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ಮೋದಿ ಮತ್ತೆ ನಿರಾಳರಾಗಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಕಳೆದ ಏಪ್ರಿಲ್ 23 ರಂದು ಗುಜರಾತಿನ ಅಹ್ಮದಾಬಾದಿನಲ್ಲಿ ರೋಡ್ ಶೋದಲ್ಲಿ ಭಾಗಿಯಾಗಿದ್ದ ಮೋದಿ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆಹೋಗಿತ್ತು. ಆದರೆ ಮೋದಿ ಯಾವುದೇ ರೀತಿಯಲ್ಲೂ ನೀತಿ ಸಂಹಿತೆ ಉಲ್ಲಂಘಿಸಿಲ್ಲ ಎಂದಿರುವ ಆಯೋಗ, ಅವರಿಗೆ ಈ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದೆ.

ಪ್ರಧಾನಿ ಮೋದಿ 'ನ್ಯೂಕ್ಲಿಯರ್ ಬಟನ್' ಹೇಳಿಕೆಗೆ ಚು.ಆಯೋಗ ಕ್ಲೀನ್ ಚಿಟ್ಪ್ರಧಾನಿ ಮೋದಿ 'ನ್ಯೂಕ್ಲಿಯರ್ ಬಟನ್' ಹೇಳಿಕೆಗೆ ಚು.ಆಯೋಗ ಕ್ಲೀನ್ ಚಿಟ್

ಜೊತೆಗೆ ಏಪ್ರಿಲ್ 09 ರಂದು ಕರ್ನಾಟಕದ ಚಿತ್ರದುರ್ಗದಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುತ್ತಿದ್ದ ಮೋದಿ, ಮತದಾರರು ಬಾಲಕೋಟ್ ಏರ್ ಸ್ಟ್ರೈಕ್ ನಡೆಸಿದ ಸೈನಿಕರಿಗೆ ಮತ ನೀಡಿ ಎಂದು ಕೇಳುವ ಮೂಲಕ ಸೇನೆಯ ಸಾಧನೆಯ ಶ್ರೇಯಸ್ಸನ್ನು ಪಡೆಯಲು ಯತ್ನಿಸಿದ್ದರು ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಆಯೋಗ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದೆ.

EC gives clean chit to PM Narendra Modi in 2 cases

ಇದಕ್ಕೂ ಮುನ್ನ ಏಪ್ರಿಲ್ 1ರಂದು ಮಹಾರಾಷ್ಟ್ರದ ವಾರ್ಧಾದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮೋದಿ ಅವರು, ಭಾಷಣದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯುತ್ತಿರುವುದನ್ನು ಟೀಕಿಸಿದ್ದರು. 'ಅಲ್ಪಸಂಖ್ಯಾತರು ಬಹುಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವು ಆಶ್ರಯ ಪಡೆದುಕೊಳ್ಳುತ್ತಿದೆ' ಎಂದು ಮೋದಿ ಲೇವಡಿ ಮಾಡಿದ್ದರು.ಇದರ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಜನರನ್ನು ಧರ್ಮದ ಹೆಸರಿನಲ್ಲಿ ವಿಭಜಿಸುವ ಭಾಷಣ ಮಾಡಿದ್ದಾರೆ. ಅವರ ಮಾತುಗಳು ದ್ವೇಷಪೂರಿತವಾಗಿವೆ ಎಂದು ಆರೋಪಿಸಿತ್ತು.

ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗದಿಂದ ಮೋದಿಗೆ ಕ್ಲೀನ್ ಚಿಟ್ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗದಿಂದ ಮೋದಿಗೆ ಕ್ಲೀನ್ ಚಿಟ್

ಆದರೆ ಈ ಪ್ರಕರಣದಲ್ಲೂ ಚುನಾವಣಾ ಆಯೋಗ ಮೋದಿ ಆವರಿಗೆ ಕ್ಲೀನ್ ಚಿಟ್ ನೀಡಿತ್ತು.

English summary
Lok Sabha elections 2019: The Election Commission has given clean chit to Prime Minister Narendra Modi in two more cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X