ಕೋವಿಡ್ ಪ್ರಮಾಣ ಪತ್ರದಲ್ಲಿ ಮೋದಿ ಚಿತ್ರ; ಆರೋಗ್ಯ ಸಚಿವಾಲಯದ ವಿವರಣೆ ಕೇಳಿದ ಆಯೋಗ

ನವದೆಹಲಿ, ಮಾರ್ಚ್ 05: ಕೊರೊನಾ ಸೋಂಕಿನ ಲಸಿಕೆಯ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಚಿತ್ರ ಬಳಸಿರುವ ಕುರಿತು ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಈ ಬಗ್ಗೆ ಆಯೋಗ ಆರೋಗ್ಯ ಸಚಿವಾಲಯದ ಪ್ರತಿಕ್ರಿಯೆ ಕೇಳಿದೆ.

"ನಿಜಾಂಶವನ್ನು ಮೊದಲು ನಾವು ಪರಿಶೀಲಿಸಬೇಕಿದೆ. ಎಲ್ಲಿ ಈ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು, ಈ ಪ್ರಮಾಣಪತ್ರವನ್ನು ಆರೋಗ್ಯ ಸಚಿವಾಲಯ ನೀಡಿದೆಯೇ ಎಂಬ ಕುರಿತು ತಿಳಿದುಕೊಳ್ಳಬೇಕಿದೆ. ಈ ರೀತಿಯ ದೂರುಗಳು ಬಂದಾಗ ಪ್ರಕರಣದಲ್ಲಿ ಒಳಗೊಂಡ ಪಕ್ಷಗಳಿಂದ ಅಭಿಪ್ರಾಯ ಪಡೆಯಬೇಕಾಗುತ್ತದೆ" ಎಂದು ವಿವರಣೆ ನೀಡಿದೆ.

ರಾಜ್ಯ ಚುನಾವಣಾಧಿಕಾರಿಯಿಂದ ಚುನಾವಣಾ ಆಯೋಗ ವರದಿ ಪಡೆದುಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

EC Seeks Health Ministry Response Over Complaint Of TMC Against BJP

ಕೊವಿಡ್-19 ಲಸಿಕೆ ಸೇರಿದಂತೆ ಸರ್ಕಾರಿ ಯೋಜನೆಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾವಚಿತ್ರ ಹಾಕುವ ಮೂಲಕ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಈ ವಿಷಯದಲ್ಲಿ ಚುನಾವಣಾ ಸಮಿತಿ ಮಧ್ಯ ಪ್ರವೇಶಿಸಬೇಕು. ಪೆಟ್ರೋಲ್ ಬಂಕ್ ಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದ ಯೋಜನೆಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರವಿರುವ ಫ್ಲೆಕ್ಸ್‌ಗಳನ್ನು ತೆರವುಗೊಳಿಸಬೇಕು ಎಂದು ಟಿಎಂಸಿ ದೂರು ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+