ಜಾರ್ಖಂಡ್ ವಿಧಾನಸಭೆ ಚುನಾವಣೆ: ಇಂದು ದಿನಾಂಕ ಘೋಷಣೆ

ನವದೆಹಲಿ, ನವೆಂಬರ್ 01: ಜಾರ್ಖಂಡ್ ವಿಧಾನಸಭೆಗೆ ಚುನಾವಣಾ ಆಯೋಗ ಇಂದು(ಶುಕ್ರವಾರ) ದಿನಾಂಕ ಘೋಷಿಸಲಿದೆ.

ಇದೇ ಡಿಸೆಂಬರ್ ಅಂತ್ಯಕ್ಕೆ ಜಾರ್ಖಂಡ್ ವಿಧಾನಸಬೆ ಚುನಾವಣೆಯ ಅವಧಿ ಮುಕ್ತಾಯವಾಗಲಿದ್ದು, ಅದಕ್ಕೂ ಮುನ್ನ ಸರ್ಕಾರ ರಚನೆಯಾಗಬೇಕಿದೆ.

ಕಳೆದ ವಿಧಾನಸಭೆ ಚುನಾವನೆ 2014 ರಲ್ಲಿ ನಡೆದಿತ್ತು. ಒಟ್ಟು 81 ಶಾಸಕ ಬಲದ ಜಾರ್ಖಂಡ್ ನಲ್ಲಿ ಪ್ರಸ್ತುತ ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. 37 ಸ್ಥಾನಗಳ್ಲಲಿ ಜಯಗಳಿಸಿದ್ದ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಸ್ಥಳೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಬಹುಮತ ಸಾಬೀತುಪಡಿಸಿ, ಸರ್ಕಾರ ರಚಿಸಿತ್ತು. ರಘುವರ್ ದಾಸ್ ಮುಖ್ಯಮಂತ್ರಿಯಾಗಿದ್ದರು.

EC To Announce Jharkhand Assembly Election Dates Today

81 ಶಾಸಕಬಲದ ಜಾರ್ಖಂಡ್ ವಿಧಾನಸಭೆಗೆ ಅಗತ್ಯವಿರುವ ಮ್ಯಾಜಿಕ್ ನಂಬರ್ 41. ಅಕ್ಟೋಬರ್ 21 ರಂದು ನಡೆದ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಗಳೊಂದಿಗೇ ಜಾರ್ಖಂಡದ್ ನಲ್ಲೂ ವಿಧಾನಸಭೆ ಚುನಾವಣೆ ನಡೆಯಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ವಿಧಾನಸಭೆಯ ಕಾಲಾವಧಿ ಡಿಸೆಂಬರ್ ಅಂತ್ಯದವರೆಗೂ ಇದ್ದಿದ್ದರಿಂದ ಆ ಸಂದರ್ಭದಲ್ಲಿ ಚುನಾವಣೆ ಘೋಷಿಸಿರಲಿಲ್ಲ.

ಇದೀಗ ಚುನಾವಣಾ ಆಯೋಗ ಇಂದು ದಿನಾಂಕ ಘೋಷಿಸಲಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಚುನಾವನೆ ನಡೆಯುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+