ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತದಾರರ ಗುರುತಿನ ಚೀಟಿ, ಆಧಾರ್ ಲಿಂಕ್ ಕುರಿತು ಚುನಾವಣಾ ಆಯೋಗ ಪತ್ರ

|
Google Oneindia Kannada News

ನವದೆಹಲಿ, ಆಗಸ್ಟ್ 17: ಮತದಾರರ ಗುರುತಿನ ಚೀಟಿ ಹಾಗೂ ಆಧಾರ್ ಲಿಂಕ್ ಕುರಿತು ಕೇಂದ್ರ ಚುನಾವಣಾ ಆಯೋಗವು ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದೆ.

ಆಧಾರ್ ಕಾರ್ಡ್ ಅನ್ನು ಮತದಾರರ ಪಟ್ಟಿಗೆ ಲಿಂಕ್ ಮಾಡುವ ಮೂಲಕ ನಕಲಿ ಮತದಾರರ ಗುರುತಿನ ಚೀಟಿ ಹಾವಳಿ ಕಡಿಮೆಯಾಗುತ್ತವೆ ಎಂದು ಚುನಾವಣಾ ಆಯೋಗ ಪತ್ರದಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

ಆಧಾರ್ ಕಾರ್ಡ್ ಅನ್ನು ಮತದಾರರ ಗುರುತಿನ ಚೀಟಿ (Voter ID) ಜೊತೆ ಲಿಂಕ್ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಶುಕ್ರವಾರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ಸಾರ್ವಜನಿಕ ಪ್ರಾತಿನಿಧ್ಯ ಕಾನೂನು ಮತ್ತು ಆಧಾರ್‌ಗೆ ಸಂಬಂಧಿಸಿದ ಕಾನೂನನ್ನು ತಿದ್ದುಪಡಿ ಮಾಡುವಂತೆ ಕಾನೂನು ಸಚಿವಾಲಯವನ್ನು ಒತ್ತಾಯಿಸಿದೆ ಎನ್ನಲಾಗಿದೆ.

addhar card

ಮತದಾರರ ಗುರುತಿನ ಚೀಟಿಯನ್ನು ಆಧಾರ್ ಕಾರ್ಡ್‌ಗೆ ಜೋಡಿಸಬೇಕು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗವು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಅಂತೆಯೇ ಮತದಾರರ ಗುರುಚಿನ ಚೀಟಿಯನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡುವುದರಿಂದ ಚುನಾವಣೆಯಲ್ಲಿ ನಕಲಿ ಮತದಾನದ ಪ್ರಮಾಣ ಕಡಿಮೆಯಾಗುತ್ತದೆ ಎಂದು ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ. ಈಗಾಗಲೇ 32 ಕೋಟಿ ಆಧಾರ್‌ ಕಾರ್ಡ್‌ಗಳು ಮತದಾರರ ಗುರುತಿನ ಚೀಟಿಯೊಂದಿಗೆ ಲಿಂಕ್ ಆಗಿವೆ.

English summary
Election Commission Has Written a letter to Law Ministry Over Aadhaar Card And Voter Id Linking with the 12-digit Aadhaar number.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X