ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆ ಶಿವಕುಮಾರ್ ಬೆಂಬಿಡದ ಇ.ಡಿ: ಸುಪ್ರೀಂಕೋರ್ಟ್‌ಗೆ ಮೇಲ್ಮನವಿ

|
Google Oneindia Kannada News

ನವದೆಹಲಿ, ಅಕ್ಟೋಬರ್ 23: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 50 ದಿನ ಜೈಲು ಶಿಕ್ಷೆ ಅನುಭವಿಸಿ ಕೊನೆಗೂ ಜಾಮೀನು ಪಡೆಯುವಲ್ಲಿ ಸಫಲರಾದರೂ ಮಾಜಿ ಸಚಿವ ಡಿಕೆ ಶಿವಕುಮಾರ್ ನೆಮ್ಮದಿಯ ನಿಟ್ಟುಸಿರು ಬಿಡಲು ಸಾಧ್ಯವಾಗಿಲ್ಲ. ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ (ಇಡಿ) ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಡಿ. ಕೆ. ಶಿವಕುಮಾರ್‌ಗೆ ಜಾಮೀನು ಸಿಕ್ಕಿದ್ದು ಹೇಗೆ?; 3 ಅಂಶಗಳುಡಿ. ಕೆ. ಶಿವಕುಮಾರ್‌ಗೆ ಜಾಮೀನು ಸಿಕ್ಕಿದ್ದು ಹೇಗೆ?; 3 ಅಂಶಗಳು

ಬುಧವಾರವೇ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯ, ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಮಂಜೂರು ಮಾಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿದೆ. ಸುಪ್ರೀಂಕೋರ್ಟ್ ಈ ಅರ್ಜಿಯನ್ನು ಗುರುವಾರ ವಿಚಾರಣೆಗೆ ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ.

Live : ಡಿ. ಕೆ. ಶಿವಕುಮಾರ್‌ಗೆ ಜಾಮೀನು ನೀಡಿದ ಹೈಕೋರ್ಟ್Live : ಡಿ. ಕೆ. ಶಿವಕುಮಾರ್‌ಗೆ ಜಾಮೀನು ನೀಡಿದ ಹೈಕೋರ್ಟ್

ಒಂದು ವೇಳೆ ದೆಹಲಿ ಹೈಕೋರ್ಟ್ ನೀಡಿರುವ ಷರತ್ತುಬದ್ಧ ಜಾಮೀನಿಗೆ ಸುಪ್ರೀಂಕೋರ್ಟ್ ತಡೆ ನೀಡಿದರೆ ಡಿಕೆ ಶಿವಕುಮಾರ್ ಮತ್ತೆ ಸಂಕಷ್ಟದಲ್ಲಿ ಸಿಲುಕಿಕೊಳ್ಳಲಿದ್ದಾರೆ.

ED Appeal To Supreme Court Against Bail To DK Shivakumar

ಡಿಕೆ ಶಿವಕುಮಾರ್‌ಗೆ ಜಾಮೀನು: ನಾಯಕರು ಹೇಳಿದ್ದೇನು?ಡಿಕೆ ಶಿವಕುಮಾರ್‌ಗೆ ಜಾಮೀನು: ನಾಯಕರು ಹೇಳಿದ್ದೇನು?

ಸೆ. 3ರಿಂದ ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಅವರಿಗೆ ಆರೋಗ್ಯದ ಸಮಸ್ಯೆ ಇರುವುದರಿಂದ ಜಾಮೀನು ನೀಡಬೇಕೆಂಬ ಅವರ ಪರ ವಕೀಲರ ವಾದವನ್ನು ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕೈಟ್ ಅವರ ಏಕಸದಸ್ಯ ಪೀಠ ಪರಿಗಣಿಸಿತ್ತು. ಅಲ್ಲದೆ, ಡಿಕೆ ಶಿವಕುಮಾರ್ ದೇಶಬಿಟ್ಟು ಪರಾರಿಯಾಗುವುದಿಲ್ಲ. ಅವರ ಪಾಸ್‌ಪೋರ್ಟ್‌ಅನ್ನು ನ್ಯಾಯಾಲಯದ ವಶಕ್ಕೆ ನೀಡುತ್ತೇವೆ ಎಂದು ವಕೀಲರನ್ನು ಹೇಳಿದ್ದನ್ನು ಕೂಡ ಮಾನ್ಯ ಮಾಡಿತ್ತು. ಡಿಕೆ ಶಿವಕುಮಾರ್ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಸಾಕ್ಷ್ಯ ನಾಶಮಾಡುವ ಅಪಾಯವಿದೆ ಎಂದು ಇ.ಡಿ ಪರ ವಕೀಲರು ವಾದಿಸಿದ್ದರು. ಆದರೆ ಅವರು ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸುವುದಿಲ್ಲ. ವಿಚಾರಣೆಗೆ ಸಹಕರಿಸಲಿದ್ದಾರೆ ಎಂದು ಡಿಕೆ ಶಿವಕುಮಾರ್ ಪರ ವಕೀಲರು ಭರವಸೆ ನೀಡಿದ್ದಾರೆ.

English summary
ED has questioned the Delhi High Court's order to grant bail to DK Shivakumar in the Supreme Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X