ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತತ ಎಂಟು ಗಂಟೆ ಡಿಕೆ ಸುರೇಶ್ ವಿಚಾರಣೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 10: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾಲ್ಕನೆಯ ದಿನವೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಂಸದ ಡಿಕೆ ಸುರೇಶ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದರು. ದೆಹಲಿಯ ಲೋಕನಾಯಕ ಭವನದಲ್ಲಿರುವ ಇ.ಡಿ. ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ 11.30ರ ಸುಮಾರಿಗೆ ಆರಂಭವಾದ ಡಿಕೆ ಸುರೇಶ್ ಅವರ ವಿಚಾರಣೆ ರಾತ್ರಿ 9.30ರವರೆಗೂ ನಡೆಯಿತು.

ಇದಕ್ಕೂ ಮುನ್ನ ಅ.3 ಮತ್ತು 4ರಂದು ಇ.ಡಿ. ಅಧಿಕಾರಿಗಳು ಡಿಕೆ ಸುರೇಶ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಡಿಕೆ ಶಿವಕುಮಾರ್ ಅವರ ದೆಹಲಿ ನಿವಾಸದಲ್ಲಿ ಆದಾಯ ತೆರಿಗೆ ಇಲಾಖೆ ದಾಳಿಯ ವೇಳೆ ದೊರೆತ 21 ಲಕ್ಷ ರೂಪಾಯಿ ಹಣದಲ್ಲಿ 17 ಲಕ್ಷ ಹಣ ತಮ್ಮದು ಎಂದು ಡಿಕೆ ಸುರೇಶ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದರು.

ಸಹೋದರನ ಹೇಳಿಕೆ ಆಧರಿಸಿ ಜೈಲಿನಲ್ಲಿ ಡಿಕೆ ಶಿವಕುಮಾರ್ ವಿಚಾರಣೆಸಹೋದರನ ಹೇಳಿಕೆ ಆಧರಿಸಿ ಜೈಲಿನಲ್ಲಿ ಡಿಕೆ ಶಿವಕುಮಾರ್ ವಿಚಾರಣೆ

ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಸುರೇಶ್, 'ವಿರೋಧಪಕ್ಷದ ನಾಯಕರು ಮತ್ತು ಮುಖಂಡರು ಯಾರು ಬಲಿಷ್ಠವಾಗಿರುತ್ತಾರೋ ಅವರ ಮೇಲೆ ದಾಳಿ ನಡೆಯುತ್ತದೆ. ಅವರನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ. ಇದನ್ನು ಎಲ್ಲ ವಿರೋಧಪಕ್ಷಗಳೂ ಖಂಡಿಸಬೇಕಾಗುತ್ತದೆ. ಇದು ವಿಪರೀತ ಅಧಿಕಾರದ ದುರುಪಯೋಗ. ಚುನಾವಣಾ ಆಯೋಗ, ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ, ಸಿಬಿಐ ಎಲ್ಲವನ್ನೂ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಒಳ್ಳೆಯದಲ್ಲ. ಅವರ ಕಾಲ ಚೆನ್ನಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಅವರಿಗೆ ಅಧಿಕಾರ ನೀಡದ್ದಾರೆ. ಈ ಅಧಿಕಾರ ಶಾಶ್ವತವಲ್ಲ. ಕಾಲಚಕ್ರ ಉರುಳುತ್ತದೆ' ಎಂದು ಹೇಳಿದರು.

ED Enquired DK Suresh On Money Laundering Case

ವರದಿ ನೀಡುವಂತೆ ಹೈಕೋರ್ಟ್ ಸೂಚನೆ
ಇದೇ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ED Enquired DK Suresh On Money Laundering Case

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಬಿಎಸ್ ನಾರಾಯಣಸ್ವಾಮಿ ಮತ್ತು ಸಾಮಾಜಿಕ ಕಾರ್ಯಕರ್ತ ಎಸಿ ಶಿವರಾಜು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ವರದಿ ಸಲ್ಲಿಸಲು ಮತ್ತು ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿತು. ವಿಚಾರಣೆಯನ್ನು ಡಿಸೆಂಬರ್‌ಗೆ ಮುಂದೂಡಿತು.

ಇಡಿ ಸಂಕಷ್ಟ: ವಿಚಾರಣೆಗೆ ಹಾಜರಾದ ಸಂಸದ ಡಿ.ಕೆ.ಸುರೇಶ್ಇಡಿ ಸಂಕಷ್ಟ: ವಿಚಾರಣೆಗೆ ಹಾಜರಾದ ಸಂಸದ ಡಿ.ಕೆ.ಸುರೇಶ್

ಡಿಕೆ ಶಿವಕುಮಾರ್ ಮತ್ತು ಅವರ ಸಹೋದರಿಗೆ ಸೇರಿದ ಕಂಪೆನಿಗಳಿಂದ ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿ ಕಲ್ಲುಗಣಿಗಾರಿಕೆ ನಡೆಸುವ ಮೂಲಕ ಕೋಟ್ಯಂತರ ರೂ ನಷ್ಟ ಉಂಟುಮಾಡಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು. ಡಿಕೆ ಶಿವಕುಮಾರ್ ಹೈಕೋರ್ಟ್ ವಿಭಾಗೀಯ ಪೀಠ ಸಿಬಿಐ ವರದಿ

English summary
ED has enquired MP DK Suresh on Thursday in money laundering case related to ex minister DK Shivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X