ವಿಜಯ್ ಮಲ್ಯ ವಿರುದ್ಧ ಇಡಿ ದೋಷಾರೋಪಪಟ್ಟಿ ಸಲ್ಲಿಕೆ

ನವದೆಹಲಿ, ಜೂನ್ 18: ಹಣ ವಂಚನೆ ಆರೋಪ ಪ್ರಕರಣದಲ್ಲಿ ಮದ್ಯ ದೊರೆ ವಿಜಯ್ ಮಲ್ಯ ಅವರ ವಿರುದ್ಧ ಜಾರಿ ನಿರ್ದೇಶನಾಲಯವು (ಇಡಿ) ಸೋಮವಾರ ದೋಷಾರೋಪ ಸಲ್ಲಿಸಿದೆ.

ಉದ್ಯಮಿ ವಿಜಯ್ ಮಲ್ಯ ಅವರನ್ನು 9 ಸಾವಿರ ಕೋಟಿ ಮೊತ್ತದ ಹಣದಲ್ಲಿನ ಅವ್ಯವಹಾರ ಮತ್ತು ಹಣ ವಂಚನೆ ಪ್ರಕರಣಗಳಲ್ಲಿ ಭಾರತಕ್ಕೆ ಗಡಿಪಾರು ಮಾಡುವ ಸಂಬಂಧ ಬ್ರಿಟನ್ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಗಡಿಪಾರು ವಾರಂಟ್‌ನೊಂದಿಗೆ ಮಲ್ಯ ಅವರನ್ನು ಸ್ಕಾಟ್ಲೆಂಡ್‌ಯಾರ್ಡ್‌ ಪೊಲೀಸರು ಕಳೆದ ವರ್ಷದ ಏಪ್ರಿಲ್‌ನಲ್ಲಿ ಬಂಧಿಸಿದ್ದರು. ಆದರೆ ಕೂಡಲೇ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದರು.

ed filed chargesheet against vijay mallya

ಬ್ಯಾಂಕುಗಳಿಗೆ ಸುಮಾರು 10 ಸಾವಿರ ಕೋಟಿ ಮೊತ್ತದ ಭಾರಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ಅವರಿಂದ ಹಣ ಸಂಗ್ರಹಿಸಲು ಅವಕಾಶ ನೀಡಬೇಕು ಎಂದು ಭಾರತೀಯ ಬ್ಯಾಂಕುಗಳು ಸಲ್ಲಿಸಿದ್ದ ಅರ್ಜಿ ವಿಚಾರದಲ್ಲಿ ಮಲ್ಯ ಹಿನ್ನಡೆ ಅನುಭವಿಸಿದ್ದರು.

ಮಲ್ಯ ಅವರು 200000 ಪೌಂಡ್ ಹಣವನ್ನು ಭಾರತೀಯ ಬ್ಯಾಂಕುಗಳಿಗೆ ನೀಡುವಂತೆ ಬ್ರಿಟನ್ ನ್ಯಾಯಾಲಯ ಮಲ್ಯ ಅವರಿಗೆ ಆದೇಶಿಸಿತ್ತು. ಆಸ್ತಿ ಮುಟ್ಟುಗೋಲು ಆದೇಶ ರದ್ದು ಮಾಡುವಂತೆ ಮಲ್ಯ ಪರ ವಕೀಲರು ಮಾಡಿಕೊಂಡ ಮನವಿಯನ್ನು ವಜಾಗೊಳಿಸಿತ್ತು. ಅಲ್ಲದೆ, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಲು ನಿರಾಕರಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+