ಪಶ್ಚಿಮ ಬಂಗಾಳದಲ್ಲಿ ರೋಡ್‌ಶೋ, ಬೈಕ್ ಜಾಥಾಗೆ ಬ್ರೇಕ್ ಹಾಕಿದ ಚುನಾವಣಾ ಆಯೋಗ
ನವದೆಹಲಿ, ಏಪ್ರಿಲ್ 22: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಸಂದರ್ಭ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿರುವುದು ಕಂಡುಬಂದಿದ್ದು, ಚುನಾವಣಾ ಆಯೋಗ ತಕ್ಷಣವೇ ಜಾರಿಗೆ ಬರುವಂತೆ ರಾಜ್ಯದಲ್ಲಿ ರೋಡ್‌ಶೋ ಹಾಗೂ ಬೈಕ್ ಜಾಥಾ ರದ್ದುಗೊಳಿಸಿದೆ.
ಐನೂರಕ್ಕೂ ಹೆಚ್ಚು ಜನ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಆದೇಶಿಸಿದೆ.
ಚುನಾವಣಾ ಪ್ರಚಾರ ವೇಳೆ ಹಲವು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಸಾರ್ವಜನಿಕ ಸಭೆಗಳಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬರುತ್ತಿದೆ. ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಚುನಾವಣಾ ಆಯೋಗ ಬೇಸರ ವ್ಯಕ್ತಪಡಿಸಿದೆ.

ಪಶ್ಚಿಮ ಬಂಗಾಳದಲ್ಲಿ 294 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಆರು ಹಂತದ ಚುನಾವಣೆಗಳು ಪೂರ್ಣಗೊಂಡಿವೆ. ಇಂದು ಆರನೇ ಹಂತದ ಚುನಾವಣೆ ಮುಕ್ತಾಯವಾಗಿದೆ. ಇನ್ನೂ ಎರಡು ಹಂತದ ಮತದಾನ ಬಾಕಿ ಇದ್ದು, ಚುನಾವಣಾ ಆಯೋಗ ರೋಡ್ ಶೋಗೆ ಬ್ರೇಕ್ ಹಾಕಿದೆ.












Click it and Unblock the Notifications