20 ಎಎಪಿ ಶಾಸಕರ ಅನರ್ಹತೆಗೆ ಚುನಾವಣಾ ಆಯೋಗ ಶಿಫಾರಸ್ಸು

ನವದೆಹಲಿ, ಜನವರಿ 19: ದೆಹಲಿಯ ಆಡಳಿತರೂಢ ಎಎಪಿಯ 20 ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ರಾಷ್ಟ್ರಪತಿಗೆ ಶಿಫಾರಸ್ಸು ಮಾಡಿದೆ.

ಲಾಭದಾಯಕ ಹುದ್ದೆ ಪಡೆದ ಸಂಬಂಧ 20 ಶಾಸಕರನ್ನು ಅನರ್ಹಗೊಳಿಸುವಂತೆ ಆಯೋಗ ಕೇಳಿಕೊಂಡಿದೆ. ಎಎಪಿಯ ಸರಕಾರದಲ್ಲಿ 20 ಶಾಸಕರು ಸಂಸದೀಯ ಕಾರ್ಯದರ್ಶಿ ಹುದ್ದೆಗಳನ್ನು ಪಡೆದುಕೊಂಡಿದ್ದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಎಎಪಿ 66 ಹಾಗೂ ಬಿಜೆಪಿ 4 ಸ್ಥಾನಗಳನ್ನು ಹೊಂದಿದೆ. ಇದೀಗ 20 ಶಾಸಕರು ಅನರ್ಹಗೊಂಡರೂ ಸರಕಾರಕ್ಕೆ ಯಾವುದೇ ತೊಂದರೆಯಾಗದು. ಆದರೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾತ್ರ ತೀವ್ರ ಹಿನ್ನಡೆ ಅನುಭವಿಸಲಿದ್ದಾರೆ.

 Election Commission disqualifies 20 Aam Aadmi Party MLAs

20 ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಶಿಫಾರಸ್ಸು ಮಾಡುತ್ತಿದ್ದಂತೆ ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಮಧ್ಯಾಹ್ನ ಮೂರು ಗಂಟೆಗೆ ಎಎಪಿ ನಾಯಕರು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು ಪಕ್ಷದ ನಡೆ ಕುತೂಹಲ ಮೂಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+