ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಡಿಯೋ: ಟ್ವಿಟ್ಟರ್ ಖಾತೆಯಲ್ಲಿ ಯಡವಟ್ಟಿನಿಂದ ಕೇಜ್ರಿವಾಲ್ ಗೆ ನೋಟಿಸ್

|
Google Oneindia Kannada News

ನವದೆಹಲಿ, ಫೆಬ್ರವರಿ.07: ರಾಷ್ಟ್ರ ರಾಜಧಾನಿಯಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ಗಂಟೆ ಬಾಕಿ ಇರುವಂತೆ ನವದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿಗೊಳಿಸಿದೆ.

ಮತದಾನಕ್ಕೆ ಎರಡು ದಿನ ಬಾಕಿ ಇರುವಂತೆ ಟ್ವಿಟ್ಟರ್ ಖಾತೆಯಲ್ಲಿ ತಾವು ಮಾತನಾಡಿರುವ ವಿಡಿಯೋ ಒಂದನ್ನು ಅರವಿಂದ್ ಕೇಜ್ರಿವಾಲ್ ಅಪ್ ಲೋಡ್ ಮಾಡಿದ್ದರು. ಇದನ್ನು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ. ವಿಡಿಯೋ ಅಪ್ ಲೋಡ್ ಮಾಡುವ ಮೂಲಕ ಸಿಎಂ ಅರವಿಂದ್ ಕೇಜ್ರಿವಾಲ್ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.

Election Commission Issues Notice To Delhi Chief Minister Arvind Kejriwal

ಸೋಲು ಗೆಲುವಿನ ಲೆಕ್ಕಾಚಾರ: ದೆಹಲಿಯಲ್ಲಿ ಅಂತ್ಯವಾದ ಬಹಿರಂಗ ಪ್ರಚಾರಸೋಲು ಗೆಲುವಿನ ಲೆಕ್ಕಾಚಾರ: ದೆಹಲಿಯಲ್ಲಿ ಅಂತ್ಯವಾದ ಬಹಿರಂಗ ಪ್ರಚಾರ

ದೆಹಲಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಬಹಿರಂಗ ಪ್ರಚಾರದ ದಿನವೇ ಅಂದರೆ ಫೆಬ್ರವರಿ.06ರಂದು ಅರವಿಂದ್ ಕೇಜ್ರಿವಾಲ್ ವಿಡಿಯೋ ಒಂದನ್ನು ಟ್ವಿಟ್ಟರ್ ಖಾತೆಯಲ್ಲಿ ಅಪ್ ಲೋಡ್ ಮಾಡಿದ್ದರು. ಇದಕ್ಕೆ ವಿರೋಧ ಪಕ್ಷದ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು.

ಫೆಬ್ರವರಿ.08ರಂದು ದೆಹಲಿ ವಿಧಾನಸಭೆ ಮತದಾನ:

ನವದೆಹಲಿ ವಿಧಾನಸಭೆಗೆ ಫೆಬ್ರವರಿ.08ರ ಶನಿವಾರ ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಫೆಬ್ರವರಿ.11ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಇದರ ಮಧ್ಯೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದ್ದು, ಉತ್ತರ ನೀಡುವಂತೆ ಸೂಚಿಸಿದೆ.

English summary
Election Commission Issues Notice To Delhi Chief Minister Arvind Kejriwal Over Video Uploaded On His Twitter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X