ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಕೊವಿಡ್ ಲಸಿಕೆಯ ಉಚಿತ ವಿತರಣೆ, ನೀತಿ ಸಂಹಿತೆಯ ಉಲ್ಲಂಘನೆಯಲ್ಲ'

|
Google Oneindia Kannada News

ನವದೆಹಲಿ, ಅಕ್ಟೋಬರ್ 31: ಕೊವಿಡ್ 19 ಉಚಿತ ಲಸಿಕೆಯ ವಿತರಣೆ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಬಿಜೆಪಿ ಬಿಹಾರ ಚುನಾವಣೆಯ ಹೊಸ್ತಿಲಿನಲ್ಲಿ ಬಿಹಾರದ ಜನತೆಗೆ ಕೊವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಭರವಸೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

ದೇಶದಲ್ಲಿ ಐದು ಲಕ್ಷಕ್ಕೆ ಇಳಿಕೆಯಾದ ಸಕ್ರಿಯ ಪ್ರಕರಣಗಳುದೇಶದಲ್ಲಿ ಐದು ಲಕ್ಷಕ್ಕೆ ಇಳಿಕೆಯಾದ ಸಕ್ರಿಯ ಪ್ರಕರಣಗಳು

ಚುನಾವಣೆಯ ವೇಳೆ ಮತದಾರರನ್ನು ಸೆಳೆಯುವುದು ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುವುದು ಸಾಮಾನ್ಯ, ಬಿಜೆಪಿಯ ಭರವಸೆ ನೀತಿ ಸಂಹಿತೆಗೆ ವಿರುದ್ಧವಾಗಿಲ್ಲ ಎಂದು ಹೇಳಿದೆ.

Election Commission Says BJPs Free Covid Vaccine Promise Not A Poll Code Violation

ಬಿಜೆಪಿಯ ಈ ನಡೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸುತ್ತಿವೆ. ಆಡಳಿತಾರೂಢ ಸರ್ಕಾರವು ಮತದಾರರಿಗೆ ಆಮಿಷ ಒಡ್ಡುತ್ತಿವೆ. ಹೀಗಾಗಿ ಬಿಜೆಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.

ಬಿಜೆಪಿಯ ಭರವಸೆಯು ತಾರತಮ್ಯದಿಂದ ಕೂಡಿದ್ದು, ಚುನಾವಣೆಯ ವೇಳೆ ಕೇಂದ್ರ ಸರ್ಕಾರದ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಉಲ್ಲೇಖಿಸಲಾಗಿತ್ತು.

Recommended Video

Modi ಯಿಂದ ಭಾರತೀಯರಿಗೆ ಮತ್ತೊಂದು Gift | Oneindia Kannada

ಈ ತಿಂಗಳ ಆರಂಭದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದ ನಿರ್ಮಲಾ ಸೀತಾರಾಮನ್, ಐಸಿಎಂಆರ್ ಒಪ್ಪಿಗೆ ದೊರೆತ ಕೂಡಲೇ ಬಿಹಾರದ ಜನತೆಗೆ ಕೊವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಭರವಸೆ ನೀಡಿದ್ದರು.

English summary
The BJP's promise of providing free coronavirus vaccine in its manifesto for the Bihar assembly polls is not in violation of the provisions of the model code, the Election Commission has held.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X