Breaking News: 2022ರ ಸೆಪ್ಟೆಂಬರ್‌ನಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ನವದೆಹಲಿ, ಅಕ್ಟೋಬರ್ 16: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ 2022ರಲ್ಲಿ ಚುನಾವಣೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಶನಿವಾರ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ.

ಕಾಂಗ್ರೆಸ್ ನಾಯಕತ್ವದ ಬಗ್ಗೆ ಆಂತರಿಕ ವಲಯದಲ್ಲಿ ಸೃಷ್ಟಿಯಾಗಿರುವ ಗೊಂದಲ ಮತ್ತು ಟೀಕೆ-ಟಿಪ್ಪಣಿಗಳಿಗೆ ಅಧಿನಾಯಕಿ ಸೋನಿಯಾ ಗಾಂಧಿ ಪ್ರತ್ಯುತ್ತರ ನೀಡಿದ್ದಾರೆ. ತಾವು ಪೂರ್ಣಾವಧಿವರೆಗೂ ಕಾಂಗ್ರೆಸ್ ನಾಯಕತ್ವವನ್ನು ವಹಿಸಿಕೊಳ್ಳುವ ಬಗ್ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಕಳೆದೊಂದು ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಪರಿಣಾಮಕಾರಿ ನಾಯಕತ್ವದ ಬಗ್ಗೆ ಜಿ-23 ನಾಯಕರು ಸೇರಿದಂತೆ ಹಲವು ಸಂಘಟನೆ ಕುರಿತು ಪ್ರಶ್ನೆಗಳನ್ನು ಎತ್ತಿದ್ದರು. ಈ ಹಿನ್ನೆಲೆ ಸೃಷ್ಟಿಯಾದ ಗೊಂದಲಗಳ ನಿವಾರಿಸುವ ನಿಟ್ಟಿನಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ತಾವು ಪೂರ್ಣಾವಧಿವರೆಗೂ ಕಾಂಗ್ರೆಸ್ ನಾಯಕತ್ವದಲ್ಲಿ ಮುಂದುವರಿಯುವ ಬಗ್ಗೆ ಸೋನಿಯಾ ಗಾಂಧಿ ಒತ್ತಿ ಹೇಳಿದ್ದಾರೆ.

Elections for Congress President to be conducted in September 2022

ಹಂಗಾಮಿ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ:

ಎರಡು ವರ್ಷಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಂಸದ ರಾಹುಲ್ ಗಾಂಧಿ ರಾಜೀನಾಮೆ ಸಲ್ಲಿಸಿದ ನಂತರದಲ್ಲಿ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿದಿದ್ದಾರೆ. ಈ ಹಂತದಲ್ಲಿ ಪಕ್ಷದ ಹಿರಿಯ ಮತ್ತು ಉನ್ನತ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿಯವರು, "ನಾನು ಯಾವಾಗಲೂ ಸರಳತೆ ಮತ್ತು ನೇರವಾದ ಮಾತುಗಳನ್ನು ಪ್ರಶಂಸಿಸುತ್ತೇನೆ. ಮಾಧ್ಯಮಗಳ ಮೂಲಕ ನನ್ನೊಂದಿಗೆ ಮಾತನಾಡುವ ಅಗತ್ಯವಿಲ್ಲ," ಎಂದರು. ಈ ಮಧ್ಯೆ 'ಜಿ -23' ಸದಸ್ಯರು ಬಿಡುಗಡೆ ಮಾಡಿದ ಪತ್ರಗಳಲ್ಲಿ ಉಲ್ಲೇಖವಾದ ಅಂಶಗಳು ಎರಡೂ ಕಡೆ ನಾಯಕರ ನಡುವೆ ಜಟಾಪಟಿಗೆ ಕಾರಣವಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+