ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಂದು ಮತ್ತೆ ವಿಚಾರಣೆಗೆ ಹಾಜರಾಗಲಿರುವ ಸೋನಿಯಾ ಗಾಂಧಿ

|
Google Oneindia Kannada News

ನವದೆಹಲಿ, ಜುಲೈ 27: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ ಸೋನಿಯಾ ಗಾಂಧಿಯವರನ್ನು ವಿಚಾರಣೆ ನಡೆಸಿತು. ವಿಚಾರಣೆ ಇನ್ನೂ ಪೂರ್ತಿಯಾಗದ ಹಿನ್ನೆಲೆಯಲ್ಲಿ ಬುಧವಾರವೂ ಕೂಡ ವಿಚಾರಣೆಗಾಗಿ ಹಾಜಾರುಗುವಂತೆ ಕಾಂಗ್ರೆಸ್ ವಕ್ತಾರೆ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯ ಸೂಚನೆ ನೀಡಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವದ ಕಾಂಗ್ರೆಸ್ ಬೆಂಬಲಿತ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ನಡೆದ ಆಪಾದಿತ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಸತತ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

Breaking; ದೆಹಲಿ ಕಾಂಗ್ರೆಸ್ ಕಚೇರಿ ಮುಂದೆ ಪೊಲೀಸ್ ದಂಡು!Breaking; ದೆಹಲಿ ಕಾಂಗ್ರೆಸ್ ಕಚೇರಿ ಮುಂದೆ ಪೊಲೀಸ್ ದಂಡು!

ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುವುದನ್ನು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಸತ್ಯಾಗ್ರಹ ನಡೆಸಿತು. ಸೇಡಿನ ರಾಜಕೀಯ ಮಾಡಲು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಸೋನಿಯಾ ಗಾಂಧಿ ವಿಚಾರಣೆ ವೇಳೆಯಲ್ಲಿ ದೆಹಲಿಯಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬುಧವಾರವೂ ಕೂಡ ಅವರು ವಿಚಾರಣೆಗೆ ಹಾಜರಾಗುತ್ತಿದ್ದು ಕಾಂಗ್ರೆಸ್ ಮತ್ತೆ ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿ ಮುಂದೆ ಹಾಜರಾಗಲಿರುವ ಸೋನಿಯಾ ಗಾಂಧಿ, ದೆಹಲಿಯಲ್ಲಿ ಭಾರಿ ಬಂದೋಬಸ್ತ್ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿ ಮುಂದೆ ಹಾಜರಾಗಲಿರುವ ಸೋನಿಯಾ ಗಾಂಧಿ, ದೆಹಲಿಯಲ್ಲಿ ಭಾರಿ ಬಂದೋಬಸ್ತ್

 ಇ.ಡಿ ಯಿಂದ ಸೋನಿಯಾ ಗಾಂಧಿಗೆ 30 ಪ್ರಶ್ನೆ

ಇ.ಡಿ ಯಿಂದ ಸೋನಿಯಾ ಗಾಂಧಿಗೆ 30 ಪ್ರಶ್ನೆ

ಸೋನಿಯಾ ಗಾಂಧಿ ಅವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ತೊಡಗಿಸಿಕೊಂಡಿರುವ ಸುಮಾರು 30 ಪ್ರಶ್ನೆಗಳಿಗೆ ಉತ್ತರಿಸುವಂತೆ ಕೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಡಿ ಕಚೇರಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥರನ್ನು ಸುಮಾರು ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು ಮತ್ತು ಅಧಿಕಾರಿಗಳು 90 ನಿಮಿಷಗಳ ಊಟಕ್ಕಾಗಿ ವಿರಾಮ ನೀಡಲಾಗಿತ್ತು. ಸಂಜೆ 7 ಗಂಟೆ ಸುಮಾರಿಗೆ ಸೋನಿಯಾ ಗಾಂಧಿಗೆ ತೆರಳಲು ಅವಕಾಶ ನೀಡಲಾಯಿತು.
 ಸೋನಿಯಾ ಗಾಂಧಿಗೆ ರಾಹುಲ್, ಪ್ರಿಯಾಂಕ ಸಾಥ್

ಸೋನಿಯಾ ಗಾಂಧಿಗೆ ರಾಹುಲ್, ಪ್ರಿಯಾಂಕ ಸಾಥ್

ಮಂಗಳವಾರ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಸೋನಿಯಾ ಗಾಂಧಿ ಅವರು ತಮ್ಮ ಸಶಸ್ತ್ರ ಭದ್ರತೆಯೊಂದಿಗೆ ಇ.ಡಿ ಕಚೇರಿಯನ್ನು ತಲುಪಿದರು. ರಾಹುಲ್ ಗಾಂಧಿ ಪ್ರತಿಭಟನೆಗೆ ತೆರಳಿದರೆ. ಪ್ರಿಯಾಂಕಾ ಗಾಂಧಿ ತನ್ನ ತಾಯಿಗೆ ವೈದ್ಯಕೀಯ ನೆರವು ಬೇಕಾದಲ್ಲಿ ಸಹಾಯಕ್ಕಾಗಿ ಇ.ಡಿ ಕಚೇರಿಯಲ್ಲೇ ಉಳಿದರು.

ಮೊದಲ ಬಾರಿ ವಿಚಾರಣೆ ನಡೆಸಿದ್ದಾಗ 28 ಪ್ರಶ್ನೆಗಳಿಗೆ ಉತ್ತರ ನೀಡುವಂತೆ ಕೇಳಲಾಯಿತು. ಎರಡು ಗಂಟೆಗಳ ಕಾಲ ಪ್ರಶ್ನಿಸಲಾಯಿತು. ಯಂಗ್ ಇಂಡಿಯನ್ ಲಾಭರಹಿತ ಕಂಪನಿಯಾಗಿದೆ ಮತ್ತು ಪಕ್ಷವು ಅದರ ಮೂಲಕ ಯಾವುದೇ ವೈಯಕ್ತಿಕ ಲಾಭವನ್ನು ಮಾಡಿಲ್ಲ ಎಂದು ಅವರು ಪುನರುಚ್ಚರಿಸಿದರು.

ಪತ್ರಿಕೆಯ ಕಾರ್ಯಚಟುವಟಿಕೆ ಮತ್ತು ನಿರ್ವಹಣೆ, ಅದರ ಪದಾಧಿಕಾರಿಗಳ ಪಾತ್ರ ಮತ್ತು ಪತ್ರಿಕೆ ಮತ್ತು ಸ್ಕ್ಯಾನರ್ ಅಡಿಯಲ್ಲಿ ಸಂಸ್ಥೆಯ ನಿರ್ವಹಣೆಯಲ್ಲಿ ಸೋನಿಯಾ ಗಾಂಧಿ ಕುಟುಂಬದ ಭಾಗವಹಿಸುವಿಕೆಯ ಬಗ್ಗೆಯೂ ಅವರನ್ನು ಪ್ರಶ್ನೆ ಮಾಡಲಾಗಿದೆ.

ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಅವರನ್ನು ಕಳೆದ ತಿಂಗಳು ಐದು ದಿನಗಳಲ್ಲಿ 50 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು.

 ನಡು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ರಾಹುಲ್ ಗಾಂಧಿ

ನಡು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ರಾಹುಲ್ ಗಾಂಧಿ

ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದರು. ರಾಜಕೀಯ ದುರುದ್ದೇಶಕ್ಕಾಗಿ ತನಿಖಾ ಸಂಸ್ಥೆಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಸಾಥ್ ನೀಡಿದರು. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದರು ವಿಜಯ್ ಚೌಕ್‌ನಲ್ಲಿ ಜಮಾಯಿಸಿ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ನಡೆಸಿದರು.

"ನಾನು ಎಲ್ಲಿಯೂ ಹೋಗುವುದಿಲ್ಲ. ನಾವು ರಾಷ್ಟ್ರಪತಿ ಭವನದ ಕಡೆಗೆ ಹೋಗಬೇಕೆಂದಿದ್ದೆವು. ಆದರೆ ಪೊಲೀಸರು ನಮಗೆ ಅವಕಾಶ ನೀಡುತ್ತಿಲ್ಲ" ಎಂದು ರಾಹುಲ್ ಗಾಂಧಿ ಹೇಳಿದ್ದರು. ನಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆಗೆ ಮುಂದಾದ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದರು. "ಭಾರತ ಪೊಲೀಸ್ ರಾಜ್ಯವಾಗಿದೆ ಮತ್ತು ಮೋದಿ ರಾಜ" ಎಂದು ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

 ಪೊಲೀಸರು ಪ್ರತಿಭಟನಾಕಾರರ ನಡುವೆ ಜಟಾಪಟಿ

ಪೊಲೀಸರು ಪ್ರತಿಭಟನಾಕಾರರ ನಡುವೆ ಜಟಾಪಟಿ

ದೆಹಲಿ ಪೊಲೀಸರು ಮತ್ತು ಭದ್ರತಾ ಪಡೆಗಳ ಸಿಬ್ಬಂದಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ಮೇಲೆ ಹಲ್ಲೆ ನಡೆಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರನ್ನು ದೆಹಲಿ ಪೊಲೀಸರು ಕಾರಿನಿಂದ ಹೊರಗೆಳೆದಿದ್ದಾರೆ, ಪ್ರತಿಭಟನೆಯ ವಿಡಿಯೋಗಳಲ್ಲೊ ಶ್ರೀನಿವಾಸ್ ಅವರ ಕೂದಲನ್ನು ಹಿಡಿದು ಪೊಲೀಸರು ಎಳೆದಾಡಿದ್ದಾರೆ. ಅಲ್ಲಿ ನೆರೆದಿದ್ದ ಮಾಧ್ಯಮದವರೊಂದಿಗೆ ಮಾತನಾಡಲು ಮುಂದಾದಾಗ ಪೊಲೀಸರು ಕಾರಿನೊಳಗೆ ಅವರನ್ನು ತಳ್ಳುವುದು ಕಂಡುಬಂದಿತು.

ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ಬಾರಿ ವೀಡಿಯೊವನ್ನು ಹಂಚಿಕೊಂಡ ನಂತರ, ದೆಹಲಿ ಪೊಲೀಸರು ಕೃತ್ಯ ಎಸಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ರೀತಿ ವರ್ತಿಸಿದ ಸಿಬ್ಬಂದಿಯನ್ನು ಗುರುತಿಸಿ ಶಿಸ್ತು ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

English summary
Sonia Gandhi was questioned for almost six hours on Tuesday, and Enforcement Directorate asked her to appear again Wednesday in connection with the alleged financial irregularities in the Congress-supported Young Indian Private Ltd, which owns the National Herald newspaper.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X