ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೋಷಯುಕ್ತ ಎಲೆಕ್ಟ್ರಿಕ್ ವಾಹನ ಉತ್ಪಾದಿಸಿದರೆ ಕಂಪನಿಗೆ 'ಭಾರೀ ದಂಡ' : ನಿತಿನ್ ಗಡ್ಕರಿ ಎಚ್ಚರಿಕೆ

|
Google Oneindia Kannada News

ನವದೆಹಲಿ, ಏಪ್ರಿಲ್ 22 : ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳು ಬೆಂಕಿಗೆ ಆಹುತಿಯಾಗುತ್ತಿರುವ ಹಿನ್ನಲೆ, ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನಗಳನ್ನ ತಯಾರಿಸುವ ಕಂಪನಿ ಮೇಲೆ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಲು ನಿರ್ಧರಿಸಿದೆ. ಇದಕ್ಕಾಗಿ ತಜ್ಞರ ಸಮಿತಿಯನ್ನ ರಚನೆ ಮಾಡಿದ್ದು, ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದೆ.

ಗುರುವಾರ ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸರಣಿ ಟ್ವಿಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ್ದು, ಕಳೆದ ಕೆಲ ತಿಂಗಳಿನಿಂದ ಎಲೆಕ್ಟ್ರಿಕ್ ವಾಹನಗಳು ಸ್ಫೋಟಗೊಳ್ಳುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ತಜ್ಞರ ಸಮಿತಿಯನ್ನ ರಚನೆ ಮಾಡಿದ್ದೇವೆ ಎಂದಿದ್ದಾರೆ. ಅಲ್ಲದೆ ಯಾವ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳಲ್ಲಿ ದೋಷ ಹೊಂದಿರುತ್ತವೋ ಅಂತಹ ಕಂಪನಿಗಳಿಗೆ ಭಾರಿ ದಂಡವನ್ನ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ.

ಅಲ್ಲದೆ ಕಳೆದ ಎರಡು ತಿಂಗಳಲ್ಲಿ ದೇಶದ ಹಲವು ಕಡೆ ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಸ್ಫೋಟಗೊಂಡು ಕೆಲ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಕೆಲವರು ಗಾಯಗೊಂಡಿದ್ದಾರೆ. ಇದು ನಿಜಕ್ಕೂ ದುರದೃಷ್ಟಕರ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಮನೆಯಲ್ಲಿ ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ: ಓರ್ವ ಸಾವುಮನೆಯಲ್ಲಿ ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ: ಓರ್ವ ಸಾವು

''ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳಿಗೆ ಗುಣಮಟ್ಟ ಕೇಂದ್ರಿತ ಮಾರ್ಗಸೂಚಿಗಳನ್ನ ನೀಡುತ್ತೇವೆ. ಅಲ್ಲದೆ ದೋಷಪುರಿತ ಎಲೆಕ್ಟ್ರಿಕ್ ವಾಹನಗಳನ್ನ ಹಿಂಪಡೆಯುವುದು ಮತ್ತು ಉತ್ಪಾದನಾ ದೋಷ ಕಂಡ ಬಂದಲ್ಲಿ ಅಂತಹ ಕಂಪನಿಗಳಿಗೆ ಭಾರಿ ದಂಡ ಹಾಕಲಾಗುತ್ತದೆ. ಜೊತೆಗೆ ಕಂಪನಿಯಲ್ಲಿರುವ ಎಲ್ಲಾ ದೋಷಯುಕ್ತ ವಾಹನಗಳನ್ನ ಹಿಂಪಡೆಯಲಾಗುತ್ತದೆ,'' ಎಂದು ನಿತಿನ್ ಗಡ್ಕರಿ ಎಲೆಕ್ಟ್ರಿಕ್ ವಾಹನ ತಯಾರಿಕಾ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

EV Scooter Fires: Nitin Gadkari Warns of Penalty, Says Govt Will Take Action Against Firms

''ಎಲೆಕ್ಟ್ರಿಕ್ ವಾಹನ ಖರೀದಿಸುವವರ ಸುರಕ್ಷತೆಗಾಗಿ ಕಂಪನಿಗಳು ಈಗಲಾದರೂ ಅಗತ್ಯ ಕ್ರಮಗಳನ್ನ ತೆಗೆದುಕೊಳ್ಳಬೇಕು. ಮತ್ತು ಉತ್ಪಾದನೆಯಲ್ಲಿ ದೋಷ ಕಂಡುಬಂದತಹ ಎಲೆಕ್ಟ್ರಿಕ್ ವಾಹನಗಳನ್ನ ತಕ್ಷಣವೇ ಹಿಂಪಡೆಯಬೇಕು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರತಿಯೊಬ್ಬ ಪ್ರಯಾಣಿಕನ ಸುರಕ್ಷತೆಯನ್ನು ನೀಡುವಲ್ಲಿ ಬದ್ದವಾಗಿರುತ್ತದೆ.'' ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದರು.

EV Scooter Fires: Nitin Gadkari Warns of Penalty, Says Govt Will Take Action Against Firms

ಇಂದು ಕೂಡ ತೆಲಂಗಾಣದ ನೀಜಾಮಾಬಾದ್‌ ಜಿಲ್ಲೆಯಲ್ಲಿ ಮತ್ತೊಂದು ಎಲೆಕ್ಟ್ರಿಕ್ ವಾಹನದ ಬ್ಯಾಟರಿ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಎಲೆಕ್ಟ್ರಿಕ್ ವಾಹನದ ಬ್ಯಾಟರಿಯನ್ನ ಚಾರ್ಜ್‌ಗೆ ಇಟ್ಟ ವೇಳೆ ಬ್ಯಾಟರಿ ಸ್ಪೋಟಗೊಂಡಿದೆ. ಈ ವೇಳೆ ಪಕ್ಕದಲ್ಲೇ ಇದ್ದ 80 ವರ್ಷದ ವ್ಯಕ್ತಿ ಮೃತಪಟ್ಟರೆ, ಮನೆಯಲ್ಲಿದ್ದ ಮೂವರಿಗೆ ಸುಟ್ಟ ಗಾಯಗಳಾಗಿದೆ. ಇದು ಕೂಡ ಎಲೆಕ್ಟ್ರಿಕ್ ವಾಹನ ಸ್ಫೋಟಗೊಂಡು ಜೀವ ಕಳೆದುಕೊಂಡ ಮೂರನೇ ಘಟನೆ ಇದಾಗಿದೆ. ಇದಕ್ಕೂ ಮುನ್ನ ಒಂದು ಓಲಾ ಸ್ಕೂಟರ್, ಎರಡು ಓಕಿನಾವಾ, ಪ್ಯೂರ್‌ ಎಲೆಕ್ಟ್ರಿಕ್ ಸ್ಕೂಟರ್ ಮತ್ತು 20 ಜಿತೇಂದ್ರ ಎಲೆಕ್ಟ್ರಿಕ್ ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು.

English summary
EV scooter fires: Union Transport Minister Nitin Gadkari warns of heavy penalty, says govt will take action against defaulting firms. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X