ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಓರ್ವ ವಿದ್ಯಾರ್ಥಿ ಮೃತಪಟ್ಟರೂ ನೀವೇ ಹೊಣೆ: ಆಂಧ್ರಕ್ಕೆ ಸುಪ್ರೀಂ ಎಚ್ಚರಿಕೆ

|
Google Oneindia Kannada News

ನವದೆಹಲಿ, ಜೂನ್ 24: ಕೋವಿಡ್‌-19 ನಡುವೆಯೂ 12ನೇ ತರಗತಿ ಪರೀಕ್ಷೆಗೆ ಮುಂದಾಗಿರುವ ಆಂಧ್ರಪ್ರದೇಶ ಹಾಗೂ ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಎಚ್ಚರಿಕೆ ನೀಡಿದೆ.

ಈ ಪರೀಕ್ಷೆಯಿಂದ ಯಾವುದೇ ಸಾವು ವರದಿಯಾದರೂ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಲಿದ್ದು, ಅಂತಿಮ ನಿರ್ಧಾರ ತಿಳಿಸುವಂತೆ ಸೂಚಿಸಿತು. ಒಂದೊಮ್ಮೆ ಓರ್ವ ವಿದ್ಯಾರ್ಥಿ ಮೃತಪಟ್ಟರೂ ಆ ವಿದ್ಯಾರ್ಥಿ ಕುಟುಂಬಕ್ಕೆ 1 ಕೋಟಿ ರೂ. ನೀಡಬೇಕು ಎಂದು ಹೇಳಿದೆ.

 SSLC ಪರೀಕ್ಷೆ 2021: ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ SSLC ಪರೀಕ್ಷೆ 2021: ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ದೇಶದ ಎಲ್ಲ ರಾಜ್ಯಗಳು ಪರೀಕ್ಷೆ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದ್ದರೂ ನೀವೇಕೆ ಪರೀಕ್ಷೆ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂದು ಇದೇ ವೇಳೆ ಆಂಧ್ರ ಸರ್ಕಾರವನ್ನು ಕೋರ್ಟ್‌ ಪ್ರಶ್ನಿಸಿದೆ. ಈ ಬಗ್ಗೆ ಸರ್ಕಾರದಿಂದ ಯಾವುದೇ ಸ್ಪಷ್ಟತೆ ಇಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

Even 1 Fatality Supreme Court Questions Andhra Over Class 12 Exam

ಕೊರೊನಾ ಎರಡನೇ ಅಲೆ ಕಾರಣದಿಂದ ಸ್ಥಗಿತಗೊಂಡಿರುವ 12ನೇ ತರಗತಿ ಪರೀಕ್ಷೆಗಳ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಏಕರೂಪದ ಮೌಲ್ಯಮಾಪನ ವ್ಯವಸ್ಥೆ ಜಾರಿಗೊಳಿಸಲು ಭಾರತದ ಸರ್ವೋಚ್ಛ ನ್ಯಾಯಾಲಯ ನಿರಾಕರಿಸಿದೆ. ರಾಜ್ಯಗಳ ಬೋರ್ಡ್ ಪರೀಕ್ಷೆಗೆ ಏಕರೂಪ ಮೌಲ್ಯಮಾಪನ ಪದ್ಧತಿ ಬೇಡ ಎಂದಿರುವ ಘನ ನ್ಯಾಯಾಲಯ, ಮೌಲ್ಯಮಾಪನ ವ್ಯವಸ್ಥೆ ತೀರ್ಮಾನ ರಾಜ್ಯಗಳಿಗೆ ಬಿಟ್ಟ ನಿರ್ಧಾರ ಎಂದು ಅಭಿಪ್ರಾಯಪಟ್ಟಿದೆ.

ಕೊರೊನಾ ಆರಂಭವಾದಾಗಿನಿಂದ ಶೈಕ್ಷಣಿಕ ವ್ಯವಸ್ಥೆಗೆ ಅನೇಕ ಅಡೆತಡೆಗಳು ಎದುರಾಗಿದ್ದು, ಕಳೆದ ವರ್ಷವೂ ಪರೀಕ್ಷೆ ಆಯೋಜಿಸಲು ಭಾರೀ ಸಮಸ್ಯೆಯಾಗಿತ್ತು. ಆದರೆ, ತಡವಾಗಿಯಾದರೂ ಅನೇಕ ರಾಜ್ಯಗಳು ಪರೀಕ್ಷೆ ನಡೆಸುವ ಸಂಕಲ್ಪ ಮಾಡಿದ ಪರಿಣಾಮವಾಗಿ ಕೊರೊನಾ ಮೊದಲ ಅಲೆ ನಿಯಂತ್ರಣಕ್ಕೆ ಬರುತ್ತಿದ್ದಂತೆಯೇ ಪರೀಕ್ಷೆ ನಡೆಸಲಾಗಿತ್ತು. ಆದರೆ, ಈ ಬಾರಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ ಕಾರಣ ಕಳೆದ ವರ್ಷದಂತೆ ಧೈರ್ಯ ಮಾಡಿ ಮುನ್ನುಗ್ಗುವುದು ಕಷ್ಟವಿದೆ.

ಒಂದೆಡೆ ಕೊರೊನಾ ಎರಡನೇ ಅಲೆ ತಾರಕಕ್ಕೆ ಹೋಗಿರುವುದು ಪರೀಕ್ಷೆ ಹಿನ್ನೆಡೆ ಉಂಟುಮಾಡಿದ್ದರೆ ಇನ್ನೊಂದೆಡೆ ಸಂಭವನೀಯ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಆಘಾತಕಾರಿ ಎಂಬ ಅಭಿಪ್ರಾಯ ಇರುವುದು ಕೂಡಾ ಪರೀಕ್ಷೆ ವಿಚಾರದಲ್ಲಿ ಯೋಚನೆ ಮಾಡಲು ಕಾರಣವಾಗಿದೆ.

ಹೀಗಾಗಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ದ್ವಿತೀಯ ಪಿಯು ಪರೀಕ್ಷೆಯನ್ನೇ ರದ್ದಪಡಿಸಿ ಹಿಂದಿನ ಪರೀಕ್ಷೆ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವುದಾಗಿ ತಿಳಿಸಿವೆ.

ಆಂಧ್ರಸರ್ಕಾರದ ಪರ ವಾದಿಸಿದ ವಕೀಲ ಮಹಪೂಜ್ ನಜ್ಕಿ, 'ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಕಡಿಯಾಗಿರುವುದರಿಂದ ಜುಲೈ ಮೊದಲ ವಾರದಲ್ಲಿ 12ನೇ ತರಗತಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ' ಎಂದು ಹೇಳಿದರು.

ವಿಚಾರಣೆ ವೇಳೆ ಕೇರಳದಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ 11ನೇ ತರಗತಿ ಪರೀಕ್ಷೆ ನಡೆಸುವುದಾಗಿ ಅಲ್ಲಿನ ಸರ್ಕಾರ ಕೋರ್ಟ್‌ಗೆ ತಿಳಿಸಿದೆ. ಅರ್ಜಿದಾರರ ಪರ ವಕೀಲರು ಮಧ್ಯಪ್ರವೇಶಿಸಿದಾಗ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಕೋವಿಡ್‌ 3ನೇ ಅಲೆ ತೀವ್ರವಾಗಿರುತ್ತದೆ ಎಂದು ದೆಹಲಿ ಏಮ್ಸ್ ನಿರ್ದೇಶಕರು ಎಚ್ಚರಿಸಿದ್ದಾರೆ. ಹೀಗಾಗಿ ಆ ಸಮಯದಲ್ಲಿ ಪರೀಕ್ಷೆಗಳನ್ನು ಹೇಗೆ ನಿಭಾಯಿಸುತ್ತೀರಿ ಎಂದು ನ್ಯಾಯಪೀಠ ಪ್ರಶ್ನಿಸಿದೆ.

28 ರಾಜ್ಯಗಳ ಪೈಕಿ 6 ರಾಜ್ಯಗಳು ಈಗಾಗಲೇ ಬೋರ್ಡ್‌ ಪರೀಕ್ಷೆಯನ್ನು ನಡೆಸಿದ್ದು, 18 ರಾಜ್ಯಗಳು ರದ್ದು ಮಾಡಿವೆ. ಆದರೆ ಅಸ್ಸಾಂ, ಪಂಜಾಬ್‌, ತ್ರಿಪುರಾ ಹಾಗೂ ಆಂಧ್ರ ಪ್ರದೇಶ ಸರ್ಕಾರಗಳು ಮಾತ್ರ ಪರೀಕ್ಷೆ ರದ್ದು ಮಾಡಿಲ್ಲ.

English summary
The Andhra Pradesh government will be held responsible "if there is even one fatality" as a result of holding in-session Class 12 exams next month, the Supreme Court said Thursday. The court also said it "may order compensation amounting to ₹ 1 crore" in the event of any deaths.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X