• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎಲ್ಲವನ್ನೂ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ: ಶರದ್ ಭೇಟಿ ಬಗ್ಗೆ ಅಮಿತ್ ಶಾ

|

ನವದೆಹಲಿ, ಮಾರ್ಚ್ 28: ಎನ್‌ಸಿಪಿ ನಾಯಕ ಶರದ್ ಪವಾರ್ ಅವರನ್ನು ಅಮಿತ್ ಶಾ ಭೇಟಿಯಾಗಿದ್ದಾರೆ ಎನ್ನಲಾಗಿದ್ದು, ಸಾರ್ವಜನಿಕವಾಗಿ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಶರದ್ ಪವಾರ್ ಅವರ ಎನ್‌ಸಿಪಿ ಮಹಾ ವಿಕಾಸ್ ಅಘಡಿ ಮೈತ್ರಿ ಸರ್ಕಾರದ ಪ್ರಮುಖ ಪಾಲುದಾರ ಪಕ್ಷವಾಗಿದೆ. ಗೃಹ ಸಚಿವ ಅನಿಲ್ ದೇಶಮುಖ್ ಕೂಡ ಎನ್‌ಪಿಸಿಗೆ ಸೇರಿದವರೇ ಆಗಿದ್ದಾರೆ.

ಈ ಮೊದಲ ಮುಂಬೈ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಭ್ರಷ್ಟಾಚಾರದ ಆರೋಪ ಮಾಡಿ ಪತ್ರ ಬರೆದ ಬಳಿಕ ಎನ್‌ಸಿಪಿಗೆ ಮುಜುಗರವಾಗಿತ್ತು.

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್‌ಮುಖ್ ಭ್ರಷ್ಟಾಚಾರದ ಬಗ್ಗೆ ಮುಂಬೈನ ಹಿಂದಿನ ಪೊಲೀಸ್ ಕಮಿಷನರ್ ಬರೆದಿದ್ದ ಪತ್ರದ ಹಿನ್ನೆಲೆಯಲ್ಲಿ ಈ ಭೇಟಿಗೆ ಮಹತ್ವ ಬಂದಿದೆ. ಹಲವು ರೀತಿಯ ವಿಶ್ಲೇಷಣೆಗಳಿಗೂ ಈ ಬೆಳವಣಿಗೆ ಕಾರಣವಾಗಿದೆ.

ಈ ಕುರಿತು ಶಾ ಅವರನ್ನು ಪ್ರಶ್ನಿಸಿದಾಗ ಅಹಮದಾಬಾದಿನಲ್ಲಿ ಮಹಾರಾಷ್ಟ್ರದ ಚಾಣಕ್ಯನ ಭೇಟಿಯ ವಿಚಾರವನ್ನು ಒಪ್ಪಿಕೊಳ್ಳಲು ಇಲ್ಲ ನಿರಾಕರಿಸಲೂ ಇಲ್ಲ ಎಲ್ಲವನ್ನು ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

ಶರದ್ ಪವಾರ್ ಮತ್ತು ಪ್ರಫುಲ್ ಪಟೇಲ್ ಅಹಮದಾಬಾದ್ ಹೊರವಲಯದ ತೋಟದ ಮನೆಯೊಂದರಲ್ಲಿ ಶನಿವಾರ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು ಎಂದು ಗುಜರಾತ್ ಸ್ಥಳೀಯ ಮಾಧ್ಯಮಗಳು ವರದಿ ಮಾಡಿತ್ತು.

ಅಂಬಾನಿ ಮನೆ ಎದುರು ಸ್ಫೋಟಕ ಪತ್ತೆ ಮತ್ತು ಅನಿಲ್ ದೇಶ್‌ಮುಖ್ ವಿರುದ್ಧದ ಆರೋಪ ಕೇಳಿಬಂದ ಬಳಿಕ ಕೇಂದ್ರದ ಬಿಜೆಪಿ ಸರ್ಕಾರವು ಮಹಾರಾಷ್ಟ್ರದ ಮೈತ್ರಿ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿತ್ತು. ಈ ಹಿನ್ನೆಲೆಯಲ್ಲಿ ಇವರಿಬ್ಬರ ಭೇಟಿ ಮಹತ್ವವನ್ನು ಪಡೆದುಕೊಂಡಿದೆ.

English summary
Union Home Minister Amit Shah on Sunday left people guessing as he declined to confirm nor deny a purported secret meeting with Nationalist Congress Party (NCP) chief Sharad Pawar in the midst of a crisis in the Maharashtra coalition government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X