ಮಾಜಿ ಕೇಂದ್ರ ರಕ್ಷಣಾ ಸಚಿವ ಎಕೆ ಆಂಟನಿ ಕಾರ್ ಡ್ರೈವರ್ ಆತ್ಮಹತ್ಯೆ
ನವದೆಹಲಿ, ಜನವರಿ 05: ಕಾಂಗ್ರೆಸ್ ನ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ರಕ್ಷಣಾ ಸಚಿವ ಎಕೆ ಆಂಟನಿ ಅವರ ಕಾರ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ,
ದೆಹಲಿಯಲ್ಲಿರುವ ಎಕೆ ಆಂಟನಿ ಅವರ ಅಧಿಕೃತ ನಿವಾಸ ಕೃಷ್ಣ ಮೆನನ್ ಮಾರ್ಗ್ ನಲ್ಲಿ ಶುಕ್ರವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.
ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಪೋಸ್ಟ್ ಮಾರ್ಟಮ್ ಗೆ ಕಳುಹಿಸಿದ್ದು, ಆತ್ಮಹತ್ಯೆಗೆ ಕಾರಣವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ.

ಇದೊಂದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವ ಸತ್ಯಾಸತ್ಯತೆ ಪೋಸ್ಟ್ ಮಾರ್ಟಮ್ ವರದಿ ಬಂದ ಬಳಿಕ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications