33 ರಾಜಕಾರಣಿಗಳ ವಿದೇಶಕ್ಕೆ ಪ್ರಯಾಣಕ್ಕೆ ನಿರ್ಬಂಧ
ನವದೆಹಲಿ, ನವೆಂಬರ್ 14: ಜಮ್ಮು ಮತ್ತು ಕಾಶ್ಮೀರದ 33 ರಾಜಕೀಯ ಮುಖಂಡರನ್ನು ವಿದೇಶ ಪ್ರಯಾಣದಿಂದ ನಿರ್ಬಂಧಿಸಲಾಗಿದೆ. ಅದರ ಪರಿಣಾಮವಾಗಿ ನ್ಯಾಷನಲ್ ಕಾನ್ಫರೆನ್ಸ್‌ನ ಮಾಜಿ ಶಾಸಕ ಅತ್ಲಾಫ್ ಅಹ್ಮದ್ ವಾನಿ ಅವರನ್ನು ದುಬೈ ವಿಮಾನಕ್ಕೆ ಏರುವುದನ್ನು ತಡೆಯಲಾಯಿತು ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ.
ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರ ಹೆಸರು ಈ ಪಟ್ಟಿಯಲ್ಲಿಲ್ಲ. ಆದರೆ ವಿವಿಧ ರಾಜಕೀಯ ಪಕ್ಷಗಳ ಮಾಜಿ ಶಾಸಕರು ಮತ್ತು ಮಾಜಿ ಸಚಿವರು ಹೆಚ್ಚಾಗಿ ಈ ಪಟ್ಟಿಯಲ್ಲಿದ್ದಾರೆ.
ಅತ್ಲಾಫ್ ಅಹ್ಮದ್ ವಾನಿ ಅವರು ಗುರುವಾರ ಸಂಜೆ ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ದುಬೈಗೆ ಹೊರಡಲು ವಿಮಾನ ಏರಲು ಮುಂದಾಗಿದ್ದರು. 'ಅಧಿಕಾರಿಗಳಿಗೆ ಧನ್ಯವಾದಗಳು. ನನ್ನನ್ನು ಇಲ್ಲಿಯೇ ಬಿಟ್ಟು ಲಗೇಜ್ ಅನ್ನು ಕುಟುಂಬದೊಂದಿಗೆ ಕಳುಹಿಸಲಾಗಿದೆ' ಎಂದು ಅವರು ಹೇಳಿದ್ದಾರೆ.

'ನಾನು ಗುರುವಾರ ಮಧ್ಯಾಹ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದೆ. ವಲಸೆ ಕೇಂದ್ರಕ್ಕೆ ತಲುಪಿದಾಗ ನನ್ನ ಪಾಸ್‌ಪೋರ್ಟ್‌ನಲ್ಲಿ ದೋಷವಿದೆ ಎಂಬಂತೆ ನಟಿಸಿ ನನ್ನನ್ನು ಕೊಠಡಿಯೊಂದಕ್ಕೆ ಕರೆದೊಯ್ಯಲಾಯಿತು' ಎಂದು ಪಹಲ್ಗಾಮ್ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸಿದ್ದ ವಾನಿ ಹೇಳಿದ್ದಾರೆ.
ತಮ್ಮನ್ನು ಏಕೆ ತಡೆಯಲಾಗಿತ್ತು ಎಂಬುದು ಸುಮಾರು ಮೂರು ಗಂಟೆಯವರೆಗೂ ತಮಗೆ ಗೊತ್ತಾಗಿರಲಿಲ್ಲ. ತಮಗೆ ಕೆಲವು ಸ್ಪಷ್ಟೀಕರಣ ನೀಡುವಂತೆ ವಲಸೆ ಅಧಿಕಾರಿಗಳಿಗೆ ಮನವಿ ಮಾಡಿದ್ದೆ. ಹೀಗಾಗಿ ತಮ್ಮನ್ನು ಬಿಟ್ಟು ದುಬೈಗೆ ಪ್ರಯಾಣಿಸುವಂತೆ ಕುಟುಂಬಕ್ಕೆ ಮನವೊಲಿಸಿದ್ದಾಗಿ ಅವರು ತಿಳಿಸಿದ್ದಾರೆ.
'ಸುಮಾರು ಮೂರು ಗಂಟೆಗಳ ಬಳಿಕ ನನ್ನ ಪಾಸ್‌ಪೋರ್ಟ್ ಅನ್ನು ವಾಪಸ್ ನೀಡಲಾಯಿತು. ಬಳಿಕ ನಾನು ದೆಹಲಿಯಲ್ಲಿನ ನನ್ನ ವಸತಿಗೆ ಮರಳಿದೆ. ಅದಕ್ಕೂ ಮುನ್ನ ನಾನು ಗೊಂದಲದ ನಡುವೆ ನನ್ನ ಲಗೇಜ್ ಚೆಕ್ ಇನ್ ಮಾಡಿದ್ದರಿಂದ ಕೆಲವು ಖರೀದಿಗಳನ್ನು ಮಾಡಬೇಕಾಯಿತು' ಎಂದು ಅವರು ಹೇಳಿದ್ದಾರೆ. ಮಾರ್ಚ್ 2021ರವರೆಗೆ ಅವರು ವಿದೇಶಕ್ಕೆ ಪ್ರಯಾಣಿಸುವಂತಿಲ್ಲ ಎಂದು ತಿಳಿಸಲಾಗಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications