ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರ ಉಳಿಸಿಕೊಳ್ಳಿ: ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಟಾಸ್ಕ್!

|
Google Oneindia Kannada News

ನವದೆಹಲಿ, ಮೇ 20: ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳಲ್ಲಿ ಕೇಂದ್ರದಲ್ಲಿ ಮತ್ತೆ ಎನ್ ಡಿಎ ಸರ್ಕಾರವೇ ಅಸ್ತಿತ್ವಕ್ಕೆ ಬರುತ್ತದೆ ಎನ್ನಲಾಗಿದ್ದು, ಈ ಕುರಿತು ರಾಜ್ಯ ಸರ್ಕಾರಕ್ಕೆ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರಕ್ಕೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ, ಕರ್ನಾಟಕ ರಾಜ್ಯವು ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ನ ಶಕ್ತಿ ಕೇಂದ್ರವಾಗಿದೆ. ಆದ್ದರಿಂದ ನಿಮ್ಮ ನಿಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಮರೆತು ಸರ್ಕಾರಕ್ಕೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಗಾಂಧಿ ಸೂಚನೆ ನೀಡಿದ್ದಾರೆ.

ಎಕ್ಸಿಟ್ ಪೋಲ್ ಸತ್ಯವಾದರೆ ಕರ್ನಾಟಕ ಸರ್ಕಾರದ ಕತೆ ಏನು?ಎಕ್ಸಿಟ್ ಪೋಲ್ ಸತ್ಯವಾದರೆ ಕರ್ನಾಟಕ ಸರ್ಕಾರದ ಕತೆ ಏನು?

"ಈಗಾಗಲೇ ಕರ್ನಾಟಕದಲ್ಲಿ ಬಿಜೆಪಿ ಪಕ್ಷವು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಕೆಡವಲು ಪ್ರಯತ್ನಿಸುತ್ತಿದೆ. ಚುನಾವಣೋತ್ತರ ಸಮೀಕ್ಷೆಗಳೆಲ್ಲವೂ ಸತ್ಯವಾಗುವುದಿಲ್ಲ. ಈ ಬಾರಿಯೂ ಈ ಸಮಿಕ್ಷೆಗಳು ಉಲ್ಟಾ ಹೊಡೆಯಲಿವೆ" ಎಂದು ರಾಹುಲ್ ಗಾಂಧಿ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಹೇಳಿದ್ದಾರೆ.

Exit poll: Rahul Gandhi warns Karnataka Congress leaders

ಚಿಂತಾಮಣಿ ಎಕ್ಸಿಟ್ ಪೋಲ್: ದಕ್ಷಿಣದಲ್ಲಿ ಕರ್ನಾಟಕ ಬಿಟ್ಟರೆ ಬಿಜೆಪಿಗೆ ನೆಲೆ ಇಲ್ಲ!ಚಿಂತಾಮಣಿ ಎಕ್ಸಿಟ್ ಪೋಲ್: ದಕ್ಷಿಣದಲ್ಲಿ ಕರ್ನಾಟಕ ಬಿಟ್ಟರೆ ಬಿಜೆಪಿಗೆ ನೆಲೆ ಇಲ್ಲ!

ಪಕ್ಷದ ಶಾಸಕರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವುದು ನಿಮ್ಮ ಹೊಣೆ ಎಂದಿರುವ ರಾಹುಲ್ ಗಾಂಧಿ, ಕೇಂದ್ರದಲ್ಲಿ ಮಹಾಘಟಬಂಧನದ ಸರ್ಕಾರ ಅಸ್ತಿತ್ವಕ್ಕೆ ಬರುವುದು ಖಚಿತ' ಎಂದರು.

English summary
Congress president Rahul Gandhi warns state congress leaders to do not let Karnataka government to fall after exit poll results.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X