ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸತ್ ಸದಸ್ಯರಿಗೆ ಮಾಜಿ ಪ್ರಧಾನಿ ದೇವೇಗೌಡರ ಕಿವಿಮಾತು

|
Google Oneindia Kannada News

ನವದೆಹಲಿ, ಸಪ್ಟೆಂಬರ್.22: ಕೇಂದ್ರ ಸರ್ಕಾರವು ಜಾರಿಗೊಳಿಸಲು ಹೊರಟಿರುವ ಕೃಷಿ ಸಂಬಂಧಿತ ಕಾಯ್ದೆಗಳು ಸಂಸತ್ ಉಭಯ ಸದನದಲ್ಲಿ ಭಾರಿ ಸದ್ದು ಗದ್ದಲಕ್ಕೆ ಕಾರಣವಾಗಿದೆ. ಕೃಷಿ ಸಂಬಂಧಿತ ಕಾಯ್ದೆ ವಿರೋಧಿಸಿ ವಿರೋಧ ಪಕ್ಷದ ನಾಯಕರು ಪ್ರತಿಭಟನೆಗೆ ಇಳಿದಿದ್ದಾರೆ.

ಕೃಷಿ ಸಂಬಂಧಿತ ಕಾಯ್ದೆ ವಿಚಾರದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸಂಸದರು ಒಮ್ಮತದ ತೀರ್ಮಾನಕ್ಕೆ ಬರುವಂತೆ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಎಲ್ಲಾ ಪಕ್ಷಗಳ ಸಂಸದರಿಗೆ ಕಿವಿಮಾತು ಹೇಳಿದ್ದಾರೆ.

ಮುತ್ಸದ್ಧಿತನದ ಸಂಕೇತ: ಟೀ ಕೊಟ್ಟ ಹರಿವಂಶ್ ಅವರನ್ನು ಕೊಂಡಾಡಿದ ಪ್ರಧಾನಿ ಮೋದಿಮುತ್ಸದ್ಧಿತನದ ಸಂಕೇತ: ಟೀ ಕೊಟ್ಟ ಹರಿವಂಶ್ ಅವರನ್ನು ಕೊಂಡಾಡಿದ ಪ್ರಧಾನಿ ಮೋದಿ

ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿಪ್ರಧಾನಿ ಹೆಚ್.ಡಿ.ದೇವೇಗೌಡರು, "ಪರಸ್ಪರ ಒಮ್ಮತದ ತೀರ್ಮಾನಕ್ಕೆ ಬರಲು ಸಂಸದರು ಶಾಂತಿಯುತವಾಗಿ ಚರ್ಚೆ ನಡೆಸಬೇಕು. ಸಂಸತ್ ಕಲಾಪಗಳನ್ನು ನಡೆಸುವುದಕ್ಕೆ ಸಂಸದರು ಅವಕಾಶ ಕಲ್ಪಿಸಿ ಕೊಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಹಕಾರದೊೆಂದಿಗೆ ಎಲ್ಲರೂ ಕೆಲಸ ಮಾಡಬೇಕಿದೆ" ಎಂದು ಸಲಹೆ ನೀಡಿದ್ದಾರೆ.

Farm bills: Opposition And The Government Should Sit Together To Help Run The House

ಸಂಸತ್ ಮೇಲ್ಮನೆಯಲ್ಲಿ ಸದ್ದು-ಗದ್ದಲ:

ಕಳೆದ ಸಪ್ಟೆಂಬರ್.20ರಂದು ರಾಜ್ಯಸಭೆಯಲ್ಲಿ ಕೃಷಿ ಸಂಬಂಧಿತ ಕಾಯ್ದೆಗೆ ಅನುಮೋದನೆ ನೀಡಿದ್ದು ತೀವ್ರ ವಿರೋಧಕ್ಕೆ ಕಾರಣವಾಯಿತು. ಕೃಷಿ ಸಂಬಂಧಿತ ಎರಡು ಮಸೂದೆಗಳನ್ನು ಅಂಗೀಕರಿಸಿರುವುದಕ್ಕೆ 12 ಪಕ್ಷಗಳ ಸದಸ್ಯರು ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಡೆಯ ವಿರುದ್ಧ ಅವಿಶ್ವಾಸ ಮಂಡಿಸಿದ್ದರು. ರಾಜ್ಯಸಭೆಯಲ್ಲಿ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ತೆಲಂಗಾಣ ರಾಷ್ಟ್ರೀಯ ಸಮಿತಿ, ಸಿಪಿಐ, ಸಿಪಿಎಂ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷ, ರಾಷ್ಟ್ರೀಯ ಜನತಾ ದಳ, ಡಿಎಂಕೆ ಮತ್ತು ಆಮ್ ಆದ್ಮಿ ಪಕ್ಷಗಳು ಅವಿಶ್ವಾಸ ಮಂಡಿಸಿದ್ದವು. ಸದನದ ಬಾವಿಗಿಳಿದು ಸಂಸದರು ಪ್ರತಿಭಟನೆ ನಡೆಸಿದ್ದು, ಕೆಲವರು ಉಪಾಧ್ಯಕ್ಷರ ಮುಂದಿದ್ದ ಪುಸ್ತಕವನ್ನು ಹರಿದು, ಮೈಕ್ರೋಫೋನ್ ಕಳೆದುಕೊಳ್ಳುವುದಕ್ಕೆ ಪ್ರಯತ್ನಿಸಿದರು.

English summary
Farm bills: Opposition And The Government Should Sit Together To Help Run The House- Says Former PM H D Devegowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X