ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ಕಾನೂನು: ರೈತರ ಸತ್ಯಾಗ್ರಹ ದುರಹಂಕಾರವನ್ನು ಸೋಲಿಸಿದೆ ಎಂದ ರಾಹುಲ್ ಗಾಂಧಿ

|
Google Oneindia Kannada News

ನವದೆಹಲಿ, ನವೆಂಬರ್ 19: ನೂತನ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸಿದ ಸತ್ಯಾಗ್ರಹ ಕೇಂದ್ರದ ದುರಹಂಕಾರವನ್ನು ಸೋಲಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕಳೆದೊಂದು ವರ್ಷದಿಂದ ರೈತರ ಪ್ರತಿಭಟನೆಯ ಕೇಂದ್ರವಾಗಿದ್ದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವ ಸರ್ಕಾರದ ನಿರ್ಧಾರದ ಬಗ್ಗೆ ಪ್ರಧಾನಿ ಮಾಡಿರುವ ಘೋಷಣೆ ಕುರಿತು ರಾಹುಲ್ ಮಾತನಾಡಿದ್ದು, ರೈತರ ಸತ್ಯಾಗ್ರಹ ಎಲ್ಲವನ್ನೂ ಸೋಲಿಸಿದೆ ಎಂದರು.

ಸರ್ಕಾರ ಘೋಷಿಸಿದ್ದ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು.

Farm laws: Farmers Satyagraha Defeated Arrogance, Says Rahul Gandhi

3 ಕೃಷಿ ತಿದ್ದುಪಡಿ ಕಾಯ್ದೆಯನ್ನು ಮರಳಿ ಪಡೆದ ನಂತರ ಪ್ರಧಾನಿ, ಮತ್ತಷ್ಟು ಹೆಚ್ಚಿನ ಶ್ರಮ ವಹಿಸಿ ದುಡಿಯುವುದಾಗಿ ಭರವಸೆ ನೀಡಿದ್ದಾರೆ. ''ನಾನೇನು ಮಾಡಿದ್ದೇನೋ, ಅದೆಲ್ಲವೂ ರೈತರಿಗಾಗಿ. ನಾನು ಮಾಡುತ್ತಿರುವ ಕೆಲಸಗಳು ದೇಶಕ್ಕಾಗಿ. ಇಂದು ಎಲ್ಲರಿಗೂ ನಾನು, ಇನ್ನೂ ದೇಶಕ್ಕಾಗಿ ಮತ್ತಷ್ಟು ಹೆಚ್ಚು ಶ್ರಮವಹಿಸಿ ದುಡಿಯುತ್ತೇನೆ ಎಂದು ಭರವಸೆ ನೀಡುತ್ತೇನೆ. ಇದರಿಂದಾಗಿ ನಿಮ್ಮ ಮತ್ತು ದೇಶದ ಕನಸು ನನಸಾಗಲು ಸಾಧ್ಯವಾಗುತ್ತದೆ'' ಎಂದು ಹೇಳಿದ್ದಾರೆ.ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ.

 ಕೃಷಿ ಕಾನೂನು ವಾಪಸ್ ಸೇರಿ ಮೋದಿ ಭಾಷಣದ ಪ್ರಮುಖಾಂಶಗಳು ಕೃಷಿ ಕಾನೂನು ವಾಪಸ್ ಸೇರಿ ಮೋದಿ ಭಾಷಣದ ಪ್ರಮುಖಾಂಶಗಳು

ಭಾಷಣದಲ್ಲಿ ಮೊದಲು ರೈತರ ಸಮಸ್ಯೆಯ ಕುರಿತು ಮಾತನಾಡಿದ ಪ್ರಧಾನಿ, ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ದೇಶದಲ್ಲಿ 100ರಲ್ಲಿ 80 ಪ್ರತಿಶತ ರೈತರು ಸಣ್ಣ ಹಿಡುವಳಿ ರೈತರಾಗಿದ್ದು, 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಅವರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ.

ಅದನ್ನು ಬಗೆಹರಿಸಲು ಪ್ರಯತ್ನ ಮಾಡಲಾಗುತ್ತಿದ್ದು, ಬೀಜ, ವಿಮೆ, ಮಾರುಕಟ್ಟೆ, ಉಳಿತಾಯಕ್ಕೆ ಯೋಜನೆಗಳಿಗಾಗಿ ರೈತರಿಗೆ ಫಸಲ್ ಬಿಮಾ, ಪೆನ್ಷನ್‌ ಯೋಜನೆ ಜಾರಿಗೆ ತಂದಿದ್ದೇವೆ. ಕೃಷಿ ಮಾರುಕಟ್ಟೆ ಆಧುನೀಕರಣಕ್ಕೆ ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿದೆ. ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾರಬಹುದು. ಕೃಷಿ ಬಜೆಟ್‌ ಮೊದಲಿಗಿಂತ 5 ಪಟ್ಟು ಹೆಚ್ಚಿಸಿದ್ದೇವೆ. ರೈತರಿಗೆ 22 ಕೋಟಿ ಸಾಯಿಲ್ ಹೆಲ್ತ್ ಕಾರ್ಡ್‌ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.

Recommended Video

600 ವರ್ಷಗಳ ನಂತರ ನಾಳೆ ಸಂಭವಿಸಲಿದೆ ಸುದೀರ್ಘ ಚಂದ್ರಗ್ರಹಣ | Oneindia Kannada

ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ. ಹೋರಾಟ ಮಾಡುತ್ತಿರುವ ರೈತರು ಮನೆಗೆ ತೆರಳಲು ಪ್ರಧಾನಿ ಮನವಿ ಮಾಡಿದ್ದಾರೆ.

ಭಾಷಣದಲ್ಲಿ ಪ್ರಧಾನಿ ಸೇವಾ ಮನೋಭಾ, ರೈತರ ಸಮಸ್ಯೆಗಳು ಮೊದಲಾದವುಗಳ ಕುರಿತು ಮಾತನಾಡಿದ್ದಾರೆ. ಗುರು ನಾನಕ್ ಜಯಂತಿಯ ಶುಭಾಶಯಗಳನ್ನು ತಿಳಿಸುತ್ತಾ ಭಾಷಣವನ್ನು ಆರಂಭಿಸಿದ ಪ್ರಧಾನಿ, ಸೇವಾ ಮಾರ್ಗ ಅನುಸರಿಸುವುದರಿಂದ ಜೀವನ ಸಾರ್ಥವಾಗಲಿದೆ ಎಂದಿದ್ದಾರೆ.

English summary
Congress leader Rahul Gandhi on Friday said that farmers satyagraha defeated arrogance as he talked about Prime Minister Narendra Modi's announcement about the government's decision to repeal the three farm laws, which were at the centre of protests by farmers for the past year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X