• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರೈತರ ಹೋರಾಟಕ್ಕೆ 4 ತಿಂಗಳು: ಮಾ.26ರಂದು ಭಾರತ್ ಬಂದ್

|

ನವದೆಹಲಿ, ಮಾರ್ಚ್.10: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಮಾರ್ಚ್.26ರಂದು ಭಾರತ್ ಬಂದ್‌ಗೆ ಕರೆ ನೀಡುವುದಕ್ಕೆ ತೀರ್ಮಾನಿಸಿವೆ.

ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರೈತರ ಪ್ರತಿಭಟನೆ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಕಿಡಿಗೇಡಿಗಳುರೈತರ ಪ್ರತಿಭಟನೆ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಕಿಡಿಗೇಡಿಗಳು

ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆಗೆ ಮಾರ್ಚ್.26ರಂದು ನಾಲ್ಕು ತಿಂಗಳು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆ ಭಾರತ್ ಬಂದ್ ನಡೆಸುವುದಕ್ಕೆ ರೈತ ಸಂಘಟನೆಗಳು ಮುಂದಾಗಿವೆ.


ಖಾಸಗೀಕರಣ ವಿರೋಧಿಸಿ ಮಾ.15ರಂದು ಹೋರಾಟ:

ಪೆಟ್ರೋಲ್, ಡೀಸೆಲ್ ದರ ಏರಿಕೆ ಮತ್ತು ಖಾಸಗೀಕರಣವನ್ನು ವಿರೋಧಿಸಿ ರೈತರು ಮತ್ತು ಕಾರ್ಮಿಕರ ಸಂಘಟನೆಗಳ ವತಿಯಿಂದ ಮಾರ್ಚ್.15ರಂದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವವರೆಗೂ ರೈತರ ಹೋರಾಟ ಮುಂದುವರಿಯಲಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ತಿಕೈಟ್ ತಿಳಿಸಿದ್ದಾರೆ. ಮಾರ್ಚ್.27ರಂದು ಘಾಜಿಪುರ್ ನಲ್ಲಿ ನಡೆಯಲಿರುವ ಹೋರಾಟಕ್ಕೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ರೈತರು ಟ್ರ್ಯಾಕ್ಟರ್ ಜಾಥಾದ ಮೂಲಕ ಭಾಗವಹಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

English summary
Farmer Unions Calls Bharat Bandh On March 26 Against Farm Laws.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X