ಸಿಂಘು ಗಡಿಯಲ್ಲಿ ಪ್ರತಿಭಟನೆ ಮುಂದುವರೆಸಿದ ರೈತರು

ನವದೆಹಲಿ, ನವೆಂಬರ್ 29 : ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ರೈತರನ್ನು ಪೊಲೀಸರು ಸಿಂಘು ಗಡಿಯಲ್ಲಿ ತಡೆದಿದ್ದಾರೆ. ಅಲ್ಲಿಯೇ ಪ್ರತಿಭಟನೆ ಮುಂದುವರೆಸಲು ರೈತರು ತೀರ್ಮಾನ ನಡೆಸಿದ್ದು, 11 ಗಂಟೆಗೆ ಮಹತ್ವದ ಸಭೆ ನಡೆಯಲಿದೆ.

ಪಂಜಾಬ್, ಹರ್ಯಾಣ ಮೂಲಕ ಆಗಮಿಸಿದ ಸಾವಿರಾರು ರೈತರನ್ನು ದೆಹಲಿ-ಹರ್ಯಾಣ ಗಡಿಯಲ್ಲಿ ತಡೆಯಲಾಗಿದೆ. ನಾವು ವಾಪಸ್ ಹೋಗುವುದಿಲ್ಲ, ಇಲ್ಲಿಯೇ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ರೈತರು ಹೇಳಿದ್ದಾರೆ.

ಪ್ರತಿದಿನ ಬೆಳಗ್ಗೆ 11 ಗಂಟೆಗೆ ಮುಂದಿನ ಹೋರಾಟದ ಬಗ್ಗೆ ರೂಪುರೇಷೆ ತೀರ್ಮಾನ ಮಾಡಲು ಸಭೆ ನಡೆಸುವುದಾಗಿ ರೈತರು ಘೋಷಣೆ ಮಾಡಿದ್ದಾರೆ. "ರೈತರೊಂದಿಗೆ ಮಾತುಕತೆಗೆ ಸರ್ಕಾರ ಸಿದ್ಧವಿದೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಘೋಷಣೆ ಮಾಡಿದ್ದಾರೆ.

Farmers

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ರೈತರು ತೀವ್ರವಾದ ಹೋರಾಟ ನಡೆಸುತ್ತಿದ್ದಾರೆ. ರೈತರ 'ದೆಹಲಿ ಚಲೋ'ವನ್ನು ವಿಫಲಗೊಳಿಸಲು ಪೊಲೀಸರು ಸಹ ಪ್ರಯತ್ನವನ್ನು ನಡೆಸುತ್ತಿದ್ದಾರೆ.

ದೆಹಲಿ ಕೇಂದ್ರ ಭಾಗ ಪ್ರವೇಶ ಮಾಡುವುದು ನಮ್ಮ ಗುರಿ ಎಂದು ರೈತರು ಹೇಳಿದ್ದಾರೆ. ಸಂಸತ್ ಭವನ ಬಳಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಅವರು ಹೇಳಿದ್ದಾರೆ. ಬುರಾರಿಯ ನಿರಂಕಾರಿ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನೀಡುವ ಪೊಲೀಸರು ಪ್ರಸ್ತಾವನೆಗೆ ರೈತರು ಒಪ್ಪಿಲ್ಲ.

ಪಂಜಾಬ್ ಮತ್ತು ಹರ್ಯಾಣದಿಂದ ಆಗಮಿಸಿರುವ ಸಾವಿರಾರು ರೈತರು ಸಿಂಘು ಗಡಿಯಲ್ಲಿ ಮೂರು ದಿನಗಳಿಂದ ಇದ್ದಾರೆ. ಕೊರೆಯುವ ಚಳಿಯನ್ನು ಲೆಕ್ಕಿಸದೇ ರಸ್ತೆಯಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. ಅಲ್ಲಿಯೇ ಆಹಾರ ತಯಾರಿಸಿಕೊಂಡು ಊಟ ಮಾಡುತ್ತಿದ್ದಾರೆ.

ಸುಮಾರು 400 ರೈತರು ಶನಿವಾರ ದೆಹಲಿ ತಲುಪಿದ್ದಾರೆ. ಬುರಾರಿ ಬಳಿಯ ಮೈದಾನದಲ್ಲಿ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ. ಉಳಿದ ರೈತರು ದೆಹಲಿ ಪ್ರವೇಶ ಮಾಡದಂತೆ ತಡೆಯುವ ಪ್ರಯತ್ನಗಳು ನಡೆಯುತ್ತಿವೆ. ಬುರಾರಿ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಸರ್ಕಾರ ಅವಕಾಶ ಕೊಟ್ಟಿದೆ.

ರೈತರ ಪ್ರತಿಭಟನೆ ತಡೆಯಲು ಪೊಲೀಸರು ನಡೆಸಿದ ಪ್ರಯತ್ನಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ರೈತರ ಪ್ರತಿಭಟನೆಗೆ ರಾಜಕೀಯ ಪಕ್ಷಗಳಾದ ಎನ್‌ಸಿಪಿ, ಡಿಎಂಕೆ, ಸಿಪಿಎಂ, ಸಿಪಿಐ, ಆರ್‌ಜೆಡಿ, ಎಐಎಫ್‌ಬಿ ಮತ್ತು ಆರ್‌ಎಸ್‌ಪಿ ಬೆಂಬಲ ಸೂಚಿಸಿವೆ.

ಪ್ರಾಯೋಜಿತ ಪ್ರತಿಭಟನೆ : ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, "ಕೆಲವು ರಾಜಕೀಯ ಪಕ್ಷಗಳು, ಸಂಘಟನೆಗಳು ರೈತರ ಪ್ರತಿಭಟನೆಯನ್ನು ಪ್ರಾಯೋಜಿಸುತ್ತಿವೆ" ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+