ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಂಡ್ಲಿ, ಮಾನೇಸರ್ ಹೆದ್ದಾರಿ ತಡೆದು ರೈತರ ಪ್ರತಿಭಟನೆ

|
Google Oneindia Kannada News

ನವದೆಹಲಿ, ಏಪ್ರಿಲ್ 10: ಕುಂಡ್ಲಿ, ಮಾನೇಸರ್ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ 24 ಗಂಟೆಯ ಪ್ರತಿಭಟನೆಗೆ ಕರೆ ನೀಡಿದೆ. ಕೆಎಂಪಿ-ಕೆಜಿಪಿ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ.

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾದ 40 ಮಂದಿ ರೈತರು ಪ್ರತಿಭಟನೆಯಲ್ಲಿ ತೊಡಗಿದ್ದರು.

ಹಳೆಯ ದರದಲ್ಲಿಯೇ ರಸಗೊಬ್ಬರ ಮಾರಾಟಕ್ಕೆ ಸೂಚಿಸಿದ ಸರ್ಕಾರಹಳೆಯ ದರದಲ್ಲಿಯೇ ರಸಗೊಬ್ಬರ ಮಾರಾಟಕ್ಕೆ ಸೂಚಿಸಿದ ಸರ್ಕಾರ

ಇಂದು ಬೆಳಗ್ಗೆ 8 ಗಂಟೆಗೆ ಹೆದ್ದಾರಿ ಬ್ಲಾಕ್ ಮಾಡಲಾಗಿದ್ದು, ಏಪ್ರಿಲ್ 11ರ ಬೆಳಗ್ಗೆ 8ರವರೆಗೆ ಹೆದ್ದಾರಿ ಬಂದ್ ಇರಲಿದೆ. ಆದರೆ ಅನಿವಾರ್ಯತೆ ಇದ್ದು ಸಂಚರಿಸುತ್ತಿರುವವರಿಗೆ ಅನುಮತಿ ನೀಡಲಾಗುತ್ತಿದೆ.

Farmers Protest: Kundli Manesar Highway Blocked For A Day

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ನಡೆಸುತ್ತಿರುವ ಆಂದೋಲನ ಬೆಂಬಲಿಸಿ ಉತ್ತರ ಪ್ರದೇಶ ಬಿಜೆಪಿ ನಾಯಕಿ ಪ್ರಿಯಮ್‌ವಾಡ ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯದಲ್ಲಿ ನಡೆಯುವ ಪಂಚಾಯತ್ ಚುನಾವಣೆಗೂ ಮುನ್ನ ತೋಮರ್ ಅವರು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರಿಗೆ ರಾಜೀನಾಮೆ ರವಾನಿಸಿರುವ ತೋಮರ್ ಅವರು, ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರ, ಹೊಸ ಕೃಷಿ ಕಾನೂನುಗಳ ವಿರುದ್ಧ ನಾಲ್ಕು ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಅವರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಪತ್ರದಲ್ಲಿ ದೂರಿದ್ದಾರೆ.

English summary
Following the call of the umbrella body of 40 protesting farmers’ unions, the Kundli-Manesar-Palwal (KMP) highway will be blocked on Saturday for 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X