ದೆಹಲಿ ಹಿಂಸಾಚಾರದ ಬಗ್ಗೆ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ

ನವದೆಹಲಿ, ಫೆಬ್ರವರಿ.03: ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಜನವರಿ.26ರ ಗಣರಾಜ್ಯೋತ್ಸವದ ದಿನ ನಡೆಸಿದ ಟ್ರ್ಯಾಕ್ಟರ್ ಜಾಥಾ ಹಿಂಸಾಚಾರಕ್ಕೆ ತಿರುಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.

ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣವೇನು ಎಂಬುದರ ಪತ್ತೆಗೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸುವಂತೆ ಕೋರಲಾಗಿದೆ. ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್.ಎ ಬೊಬ್ದೆ, ನ್ಯಾ. ಎ.ಎಸ್. ಬೋಪಣ್ಣ, ನ್ಯಾ. ವಿ. ರಾಮಸುಬ್ರಮಣ್ಯಯನ್ ನೇತೃತ್ವದ ತ್ರಿಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ನಡೆಸಿದ ಟ್ರ್ಯಾಕ್ಟರ್ ಜಾಥಾ ಹಿಂಸಾಚಾರಕ್ಕೆ ತಿರುಗಿತ್ತು.

Farmers’ Protest: Supreme Court To Be Hearing Petitions Related To Delhi Violence

ದೆಹಲಿ ಹಿಂಸಾಚಾರದ ಘಟನೆಯ ಹಿನ್ನೆಲೆ:

ಕಳೆದ ಜನವರಿ.26ರಂದು ನಡೆದ 72ನೇ ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ನಡೆಯುತ್ತಿದ್ದ ರೈತರ ಹೋರಾಟ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ರೈತರು ನಡೆಸುತ್ತಿದ್ದ ಟ್ರ್ಯಾಕ್ಟರ್ ಜಾಥಾವನ್ನು ಪೊಲೀಸರು ತಡೆದಿದ್ದು, ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಳ್ಳಲು ಕಾರಣವಾಯಿತು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರು ಮತ್ತು ಪೊಲೀಸರ ನಡುವೆ ತೀವ್ರ ಸಂಘರ್ಷ ನಡೆಯಿತು. ತದನಂತರ ಪ್ರತಿಭಟನಾನಿರತರಲ್ಲಿ ಕೆಲವರು ಖಡ್ಗ, ಕತ್ತಿ ಸೇರಿದಂತೆ ಮಾರಕಾಸ್ತ್ರಗಳನ್ನು ಹಿಡಿದು ಓಡಾಡಿದ ಘಟನೆ ನಡೆದಿತ್ತು. ಪ್ರತಿಭಟನಾಕಾರರ ಇನ್ನೊಂದು ಗುಂಪು ದೆಹಲಿ ಕೆಂಪುಕೋಟೆಗೆ ನುಗ್ಗಿ ರಾಷ್ಟ್ರ ಧ್ವಜದ ಎದುರಿಗೆ ಸಿಖ್ ಧ್ವಜವನ್ನು ಹಾರಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+