ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟ ಅಂತ್ಯ ಯಾವಾಗ?

|
Google Oneindia Kannada News

ನವದೆಹಲಿ, ಮಾರ್ಚ್.06: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವವರೆಗೂ ರೈತರ ಹೋರಾಟ ಮುಂದುವರಿಯಲಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ತಿಕೈಟ್ ತಿಳಿಸಿದ್ದಾರೆ.

ದೆಹಲಿಯ ಮೂರು ಗಡಿಗಳಲ್ಲಿ ಕಳೆದ 101 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟದ ಬಗ್ಗೆ ರಾಕೇಶ್ ತಿಕೈಟ್ ಅವರು ರಾಮರಾಜನ್ ಗ್ರಾಮದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸರ್ಕಾರವು ನಮ್ಮ ಬೇಡಿಕೆಗಳಿಗೆ ಒಪ್ಪಿಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ 101 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದಾರೆ.

Explained: ಕೇಂದ್ರದ ಚಳಿ ಬಿಡಿಸಿತಾ ರೈತರ ಒಂದೇ ಒಂದು ನಿರ್ಧಾರ!Explained: ಕೇಂದ್ರದ ಚಳಿ ಬಿಡಿಸಿತಾ ರೈತರ ಒಂದೇ ಒಂದು ನಿರ್ಧಾರ!

ವಿವಾದಿತ ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೂ ರೈತರ ಹೋರಾಟ ಮುಂದುವರಿಯಲಿದೆ. ಮಾರ್ಚ್.27ರಂದು ಘಾಜಿಪುರ್ ನಲ್ಲಿ ನಡೆಯಲಿರುವ ಹೋರಾಟಕ್ಕೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ರೈತರು ಟ್ರ್ಯಾಕ್ಟರ್ ಜಾಥಾದ ಮೂಲಕ ಭಾಗವಹಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

 Farmers Protest Will Continue Till Three Agri Laws Are Withdrawn: Rakesh Tikait

ಕೃಷಿ ಸಚಿವರು ಮಾತು:

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾಯ್ದೆಗಳನ್ನು ತಿದ್ದುಪಡಿ ಮಾಡುವುದಕ್ಕೆ ನಾವು ಸಿದ್ಧರಿದ್ದೇವೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ. "ಕೇಂದ್ರ ಸರ್ಕಾರವು ರೈತರ ಆದಾಯ ಅಭಿವೃದ್ಧಿ ಮತ್ತು ಹಿಸಾಸಕ್ತಿಗೆ ಬದ್ಧವಾಗಿದೆ. ಕೃಷಿ ಕಾಯ್ದೆಗಳ ಬಗ್ಗೆ ರೈತರ ಜೊತೆಗೆ ಹಲವು ಸುತ್ತಿನಲ್ಲಿ ಮಾತುಕತೆ ನಡೆಸಿದ್ದೇನೆ. ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತರುವುದಕ್ಕೆ ಚಿಂತಿಸಲಾಗುತ್ತದೆ ಎಂದು ಪ್ರಸ್ತಾಪ ಮಂಡಿಸಲಾಗಿದೆ. ಆಗೆಂದ ಮಾತ್ರಕ್ಕೆ ಕಾಯ್ದೆಗಳಲ್ಲಿ ದೋಷವಿದೆ ಎಂದು ಹೇಳುವುದಕ್ಕೆ ಆಗುವುದಿಲ್ಲ" ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ರೈತರ ಪ್ರತಿಭಟನೆಗೆ ಬರೋಬ್ಬರಿ 101 ದಿನ:

ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಈ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ.

English summary
Farmers Protest Will Continue Till Three Agri Laws Are Withdrawn: BKU Chief Rakesh Tikait.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X