• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಂಸತ್‌ನಲ್ಲಿ ಕೃಷಿ ಕಾನೂನು ರದ್ದಾದ ಬಳಿಕವಷ್ಟೇ ಪ್ರತಿಭಟನೆ ಅಂತ್ಯ: ರಾಕೇಶ್

|
Google Oneindia Kannada News

ನವದೆಹಲಿ, ನವೆಂಬರ್ 19: ಸಂಸತ್‌ನಲ್ಲಿ ಕೃಷಿ ಕಾನೂನು ರದ್ದಾದ ಬಳಿಕವಷ್ಟೇ ರೈತರ ಪ್ರತಿಭಟನೆ ಅಂತ್ಯಗೊಳ್ಳಲಿದೆ ಅಲ್ಲಿವರೆಗೆ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಈ ಕುರಿತು ಚರ್ಚೆ ನಡೆಸಲು ಹಾಗೂ ಪರಿಶೀಲನೆ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಸಭೆ ಕರೆಯಲಾಗುತ್ತದೆ, ಅದರ ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು, ಮೋದಿಯವರ ಘೋಷಣೆ ಕೇವಲ ಆರಂಭವಷ್ಟೇ ಎಂದಿದ್ದಾರೆ.

ಕೃಷಿ ಕಾನೂನು: ರೈತರ ಸತ್ಯಾಗ್ರಹ ದುರಹಂಕಾರವನ್ನು ಸೋಲಿಸಿದೆ ಎಂದ ರಾಹುಲ್ ಗಾಂಧಿಕೃಷಿ ಕಾನೂನು: ರೈತರ ಸತ್ಯಾಗ್ರಹ ದುರಹಂಕಾರವನ್ನು ಸೋಲಿಸಿದೆ ಎಂದ ರಾಹುಲ್ ಗಾಂಧಿ

ಕೇಂದ್ರ ಸರ್ಕಾರದಿಂದ 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವ ನಿರ್ಧಾರ ದೇಶದ ಎಲ್ಲ ರೈತರಿಗೆ ಸಿಕ್ಕಿರುವ ಗೆಲುವು ಎಂದು ಆಲ್ ಇಂಡಿಯಾ ಕಿಸಾನ್ ಸಭಾ ಪ್ರತಿಕ್ರಿಯೆ ನೀಡಿದೆ.ಈ ಹೋರಾಟದಲ್ಲಿ 700 ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಎಐಕೆಎಸ್ ಹೇಳಿದೆ.

ಆಂದೋಲನವನ್ನು ಬಲಪಡಿಸಲು ಮತ್ತು ಮುನ್ನಡೆಸಲು 600 ಕ್ಕೂ ಹೆಚ್ಚು ರೈತರು ತಮ್ಮ ತ್ಯಾಗವನ್ನು ನೀಡಿದ್ದಾರೆ ಮತ್ತು ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ನಾವು ಅವರ ತ್ಯಾಗವನ್ನು ಗೌರವಿಸಬೇಕಾಗಿದೆ ಎಂದು ಹೇಳಿದರು.

ದೂರವಾಣಿ ಮೂಲಕ ಹಿಂದೂಸ್ತಾನ್ ಟೈಮ್ಸ್ ಜತೆ ಮಾತನಾಡಿದ ಟಿಕಾಯತ್ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು ಸೇರಿದಂತೆ ಅನೇಕ ಸಮಸ್ಯೆಗಳು ಬಾಕಿ ಉಳಿದಿವೆ, ಇವುಗಳನ್ನು ಪ್ರಧಾನಿ ತಿಳಿಸಿಲ್ಲ. ಕಾರ್ಯ ಮುಗಿದ ನಂತರ ಮಾತ್ರ ಹಿಂತಿರುಗುತ್ತೇವೆ ಎಂದು ಪುನರಾವರ್ತಿಸಿದರು. ಸಂಸತ್ತಿನಲ್ಲಿ ಅದನ್ನು ಸರಿಯಾಗಿ ಅಂಗೀಕರಿಸುವವರೆಗೆ ರೈತರು ಅಂತಹ ಘೋಷಣೆಗಳನ್ನು ನಂಬುವುದಿಲ್ಲ ಎಂದು ಟಿಕಾಯತ್ ಹೇಳಿದ್ದಾರೆ.

ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ವಿವಾಧಿತ ಕೃಷಿ ಕಾನೂನನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ. 355ದಿನಗಳ ಸುದೀರ್ಘವಾದ ರೈತರ ಹೋರಾಟಕ್ಕೆ ಫಲ ಸಿಕ್ಕಿದೆ.

ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಈ ವೇಳೆ ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು ಎಂದಿದ್ದಾರೆ.

ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.

ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ದೇಶದಲ್ಲಿ 100ರಲ್ಲಿ 80 ಪ್ರತಿಶತ ರೈತರು ಸಣ್ಣ ಹಿಡುವಳಿ ರೈತರಾಗಿದ್ದು, 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಅವರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ. ಅದನ್ನು ಬಗೆಹರಿಸಲು ಪ್ರಯತ್ನ ಮಾಡಲಾಗುತ್ತಿದ್ದು, ಬೀಜ, ವಿಮೆ, ಮಾರುಕಟ್ಟೆ, ಉಳಿತಾಯಕ್ಕೆ ಯೋಜನೆಗಳಿಗಾಗಿ ರೈತರಿಗೆ ಫಸಲ್ ಬಿಮಾ, ಪೆನ್ಷನ್‌ ಯೋಜನೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದ್ದಾರೆ.

ಕೃಷಿ ಮಾರುಕಟ್ಟೆ ಆಧುನೀಕರಣಕ್ಕೆ ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿದೆ. ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾರಬಹುದು. ಕೃಷಿ ಬಜೆಟ್‌ ಮೊದಲಿಗಿಂತ 5 ಪಟ್ಟು ಹೆಚ್ಚಿಸಿದ್ದೇವೆ. ರೈತರಿಗೆ 22 ಕೋಟಿ ಸಾಯಿಲ್ ಹೆಲ್ತ್ ಕಾರ್ಡ್‌ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.

English summary
Bharatiya Kisan Union (BKU) leader Rakesh Tikait on Friday said the ongoing anti-farm laws protest will be withdrawn only after the contentious legislations are repealed in Parliament..
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion