• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾರ್ಚ್ 26ರ ಭಾರತ್ ಬಂದ್: ನೀವು ತಿಳಿದುಕೊಳ್ಳಬೇಕಾದ ವಿಷಯ

|

ನವದೆಹಲಿ, ಮಾರ್ಚ್ 25: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಮಾರ್ಚ್ 26ರಂದು ಕರೆ ನೀಡಿರುವ ಭಾರತ್ ಬಂದ್ ಯಶಸ್ವಿಗೊಳಿಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ ಮನವಿ ಮಾಡಿದೆ.

ಕಳೆದ ನಾಲ್ಕು ತಿಂಗಳುಗಳಿಂದ ದೆಹಲಿಯ ಗಡಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಹೋರಾಟಕ್ಕೆ 4 ತಿಂಗಳು ಪೂರ್ಣಗೊಳ್ಳುವ ಹಿನ್ನೆಲೆ ಮಾರ್ಚ್ 26ರಂದು ದೇಶಾದ್ಯಂತ ಭಾರತ್ ಬಂದ್ ನಡೆಸುವುದಕ್ಕೆ ಕರೆ ನೀಡಲಾಗಿದೆ.

"ಕೃಷಿ ಕಾಯ್ದೆ ವಿರುದ್ಧ ಹೋರಾಡುತ್ತಿರುವ ರೈತರಿಗೂ ಕೊರೊನಾ ಲಸಿಕೆ"

ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ದೇಶವ್ಯಾಪ್ತಿ ವ್ಯಾಪಾರ ವಹಿವಾಟು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುವುದು. ಅದಾಗಿ ಎರಡು ದಿನಕ್ಕೆ ಅಂದರೆ ಮಾರ್ಚ್ 28ರಂದು ಆಚರಿಸುವ ಹೋಳಿ ಹಬ್ಬದ ದಿನ ಕಾಮಣ್ಣನ ಜೊತೆಗೆ ಕೃಷಿ ಕಾಯ್ದೆಗಳನ್ನೂ ಕೂಡ ಸುಡುವುದಕ್ಕೆ ತೀರ್ಮಾನಿಸಲಾಗಿದೆ.

4 ತಿಂಗಳಿನಿಂದ ದೆಹಲಿ ಮೂರು ಗಡಿಯಲ್ಲಿ ಹೋರಾಟ

4 ತಿಂಗಳಿನಿಂದ ದೆಹಲಿ ಮೂರು ಗಡಿಯಲ್ಲಿ ಹೋರಾಟ

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ 120ನೇ ದಿನಕ್ಕೆ ಕಾಲಿಟ್ಟಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಸಾವಿರಾರು ರೈತರು ಈ ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಕಾಮಣ್ಣನ ಮೂರ್ತಿ ಜೊತೆಗೆ ಕೃಷಿ ಕಾಯ್ದೆಗೆ ಬೆಂಕಿ

ಕಾಮಣ್ಣನ ಮೂರ್ತಿ ಜೊತೆಗೆ ಕೃಷಿ ಕಾಯ್ದೆಗೆ ಬೆಂಕಿ

"ಹೋಳಿ ಹಬ್ಬದ ದಿನವೇ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ಕಾಮಣ್ಣನ ಮೂರ್ತಿ ಜೊತೆಗೆ ಬೆಂಕಿಗೆ ಹಾಕಲಾಗುತ್ತದೆ. ಇದನ್ನು ಅರಿತುಕೊಂಡಾದರೂ ಕೇಂದ್ರ ಸರ್ಕಾರ ಕಾಯ್ದೆಗಳನ್ನು ರದ್ದುಗೊಳಿಸಬೇಕು. ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಲಿಖಿತ ರೂಪದಲ್ಲಿ ನೀಡಬೇಕು" ಎಂದು ಗಂಗಾನಗರ್ ಕಿಸಾನ್ ಸಮಿತಿಯ ಮುಖಂಡ ರಂಜಿತ್ ರಾಜು ಆಗ್ರಹಿಸಿದ್ದಾರೆ.

ರೈತರಿಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಬೆಂಬಲ

ರೈತರಿಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಬೆಂಬಲ

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಖಾಸಗೀಕರಣಕ್ಕೆ ವಿರೋಧಿಸಿ ಹಾಗೂ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ರೈತರ ಹೋರಾಟವನ್ನು ಆಂಧ್ರ ಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷ ಬೆಂಬಲಿಸಿದೆ. ಮಾರ್ಚ್ 26ರಂದು ನಡೆಯಲಿರುವ ಭಾರತ್ ಬಂದ್‌ಗೆ ವೈಎಸ್‌ಆರ್‌ಸಿಪಿ ಬೆಂಬಲ ಸೂಚಿಸಿದೆ. ಸರ್ಕಾರದ ಅಧೀನದಲ್ಲಿ ಇರುವ ಸ್ಟೀಲ್ ಪ್ಲಾಂಟ್ ಖಾಸಗೀಕರಣಕ್ಕೆ ರಾಜ್ಯ ಸರ್ಕಾರ ವಿರೋಧಿಸುತ್ತದೆ. ಈ ಸಂಬಂಧ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಕೇಂದ್ರಕ್ಕೆ ಪತ್ರವನ್ನು ಬರೆದಿದ್ದಾರೆ ಎಂದು ಸಚಿವ ಪೆರ್ನಿ ವೆಂಕಟರಾಮಯ್ಯ ತಿಳಿಸಿದ್ದಾರೆ.

ರೈತರ ಹೋರಾಟ ಸಂಘಟನೆಗಳಿಂದ ಬೆಂಬಲ

ರೈತರ ಹೋರಾಟ ಸಂಘಟನೆಗಳಿಂದ ಬೆಂಬಲ

ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳ ವಿರುದ್ಧ ಮಾರ್ಚ್ 26ರಂದು ಕರೆ ನೀಡಿರುವ ಭಾರತ್ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೇಶದ ಎಲ್ಲ ವ್ಯಾಪಾರಿಗಳು, ಸಾರಿಗೆ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆ, ಯುವ ಸಂಘಟನೆಗಳು ಮತ್ತು ಮಹಿಳೆಯರು ಸಹ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

English summary
Farmers Union Calls Bharat Bandh On March 26 Against Farm Laws ; All You Need To Know.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X