ಭಾರತದಲ್ಲಿಯೇ ರಕ್ಷಣಾ ಸಾಮಗ್ರಿಗಳ ಉತ್ಪಾದಿಸಲು ಸರ್ಕಾರದ ಕ್ರಮ
ನವ ದೆಹಲಿ, ಮೇ 16: ಭಾರತದಲ್ಲಿಯೇ ರಕ್ಷಣಾ ಸಾಮಗ್ರಿಗಳ ಉತ್ಪಾದಿಸಲು ಕೇಂದ್ರ ಸರ್ಕಾರದ ಹೊಸ ಯೋಜನೆಯನ್ನು ಹಾಕಿಕೊಂಡಿದೆ. ಈ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಣೆ ನೀಡಿದ್ದಾರೆ.
Recommended Video
ಇಂದು ಆರ್ಥಿಕ ಪ್ಯಾಕೇಜ್ ನಾಲ್ಕನೇ ಹಂತವನ್ನು ನಿರ್ಮಲಾ ಸೀತಾರಾಮನ್ ವಿವರಿಸಿದರು. ಪ್ರಮುಖವಾಗಿ ಕಲ್ಲಿದ್ದಲು, ನಾಗರಿಕ ವಿಮಾನಯಾನ, ಪರಮಾಣು ಶಕ್ತಿ, ವಿದ್ಯುತ್ ಸರಬರಾಜು ಕಂಪನಿಗಳು, ಬಾಹ್ಯಾಕಾಶ, ರಕ್ಷಣೆ ಹಾಗೂ ಖನಿಜಗಳ ಕ್ಷೇತ್ರಗಳ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಮೇಕ್ ಇನ್ ಇಂಡಿಯಾ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣಕ್ಕಾಗಿ ಸರ್ಕಾರ ಹಲವು ಯೋಜನೆಯನ್ನು ರೂಪಿಸಿದೆ. ಭಾರತದಲ್ಲಿಯೇ ರಕ್ಷಣಾ ಸಾಮಗ್ರಿಗಳನ್ನು ಉತ್ಪಾದಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.
''ರಕ್ಷಣಾ ವಲಯದ ಉತ್ಪನ್ನ ಆಮದು ಕಡಿಮೆ ಮಾಡಲು ಮತ್ತು ಭಾರತದಲ್ಲಿಯೇ ರಕ್ಷಣಾ ಸಾಮಗ್ರಿಗಳನ್ನು ಉತ್ಪಾದಿಸಲು ಆದ್ಯತೆ ನೀಡಿದೆ. ಶಸ್ತ್ರಾಸ್ತ್ರ ಕೈಗಾರಿಕೆ ಮಂಡಳಿಯಲ್ಲಿ ಸ್ವಾಯತ್ತತೆ, ಹೊಣೆಗಾರಿಕೆ, ದಕ್ಷತೆಗೆ ಒತ್ತು ನೀಡಿದ್ದು, ಭಾರತದಲ್ಲಿಯೇ ರಕ್ಷಣಾ ಸಾಮಗ್ರಿ ಖರೀದಿಗೆ ಬಜೆಟ್ ನಲ್ಲಿ ಅವಕಾಶ ನೀಡಲಾಗುವುದು'' ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ರಕ್ಷಣಾ ವಲಯದ ಕಂಪನಿಗಳು ಷೇರು ಮಾರುಕಟ್ಟೆ ಪ್ರವೇಶಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ರಕ್ಷಣಾ ವಲಯದಲ್ಲಿ ಎಫ್.ಡಿ.ಐ 49% ರಿಂದ 74% ಕ್ಕೆ ಹೆಚ್ಚಳ ಮಾಡಲಾಗಿದೆ. ಕಾಲಮಿತಿಯಲ್ಲಿ ರಕ್ಷಣಾ ಸಾಮಗ್ರಿಗಳನ್ನು ಕೊಳ್ಳಲು ಕೇಂದ್ರ ಸರ್ಕಾರ ಆದ್ಯತೆ ನೀಡಿದೆ.












Click it and Unblock the Notifications