ಕೊರೊನಾ ಹರಡುತ್ತಾರೆ ಎಂದು ಆರೋಪಿಸಿ ಮಹಿಳಾ ವೈದ್ಯರ ಮೇಲೆ ಹಲ್ಲೆ

ನವದೆಹಲಿ, ಏಪ್ರಿಲ್ 09 : ದೆಹಲಿಯಲ್ಲಿ ಇಬ್ಬರು ಮಹಿಳಾ ವೈದ್ಯರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ವೈದ್ಯರು ನಮ್ಮ ಬಡಾವಣೆಯಲ್ಲಿ ಕೊರೊನಾ ಸೋಂಕು ಹರಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ಮಾಡಲಾಗಿದೆ.

ದೆಹಲಿಯ ಗೌತಮ್ ನಗರದ 44 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಎಫ್‌ಐಆರ್ ದಾಖಲು ಮಾಡಲಾಗಿದೆ. ಸಫರ್ ಜಂಗ್ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಕೆಲಸ ಮಾಡುವ ಇಬ್ಬರು ವೈದ್ಯರು ಕೊರೊನಾ ಹರಡುತ್ತಿದ್ದಾರೆ ಎಂದು ಹಲ್ಲೆ ಮಾಡಿಲಾಗಿತ್ತು.

ಬುಧವಾರ ರಾತ್ರಿ 9.30ರ ಸುಮಾರಿಗೆ ಇಬ್ಬರು ವೈದ್ಯರು ಹಣ್ಣುಗಳನ್ನು ಖರೀದಿ ಮಾಡಲು ಹೊರಗೆ ಹೋಗಿದ್ದರು. ಆಗ ವ್ಯಕ್ತಿ ವೈದ್ಯರು ನಮ್ಮ ಬಡಾವಣೆಯಲ್ಲಿ ಕೊರೊನಾ ಹರಡುತ್ತಿದ್ದಾರೆ ಎಂದು ಕೂಗಾಡಿದ್ದ.

Female Doctors Assaulted For Spreading COVID19

ವೈದ್ಯರು ವ್ಯಕ್ತಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದರು. ಆಗ ಅಕ್ಕ-ಪಕ್ಕದವರು ಸೇರಿದ್ದು, ವೈದ್ಯರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲು ಮಾಡಲಾಗಿದೆ.

ಗೌತಮ್ ನಗರದ ನಿವಾಸಿಯಾದ ಒಬ್ಬನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಯನ್ನು ನಡೆಸುತ್ತಿದ್ದಾರೆ. ಈ ಹಿಂದೆ ದೆಹಲಿಯಲ್ಲಿ ವೈದ್ಯರ ಮನೆಯನ್ನು ಖಾಲಿ ಮಾಡಿಸುವ ಪ್ರಯತ್ನಗಳು ನಡೆದಿದ್ದವು.

ಕೋವಿಡ್ - 19 ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಫೈವ್ ಸ್ಟಾರ್ ಹೋಟೆಲ್‌ಗಳಲ್ಲಿ ವಸತಿ ವ್ಯವಸ್ಥೆಯನ್ನು ದೆಹಲಿ ಸರ್ಕಾರ ಮಾಡಿದೆ. ಅವರು ಮನೆಗೆ ಹೋಗಿ ಕುಟುಂಬ ಸದಸ್ಯರಿಗೆ ಸೋಂಕು ಹರಡಬಾರದು ಎಂದು ಅಗತ್ಯ ಎಚ್ಚರಿಕೆ ಕೈಗೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+