ನವದೆಹಲಿ: ಅರುಣ್ ಜೇಟ್ಲಿ ನೇತೃತ್ವದಲ್ಲಿ ಇಂದು ಜಿಎಸ್ಟಿ ಕೌನ್ಸಿಲ್ ಸಭೆ
ನವದೆಹಲಿ, ಜನವರಿ 18: ಜಿಎಸ್ಟಿ(ಸರಕು ಮತ್ತು ಸೇವಾ ತೆರಿಗೆ) ಸಮಿತಿಯ 25 ನೇ ಸಭೆ ನವದೆಹಲಿಯಲ್ಲಿ ಇಂದು(ಜ. 18) ನಡೆಯಲಿದೆ. ವಿತ್ತ ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.
ಸಮಿತಿಯಲ್ಲಿ ರಿಯಲ್ ಎಸ್ಟೇಟ್, ಆಸ್ತಿ ನೋಂದಣಿಗೂ ಮೊದಲ ಸ್ಟಾಂಪ್ ಡ್ಯೂಟಿ, ಪೆಟ್ರೋಲ್ ಮತ್ತು ಡೀಸೆಲ್ ಗಳನ್ನೂ ಜಿಎಸ್ಟಿ ಅಡಿಯಲ್ಲಿ ತರುವ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಈ ಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ಡಿಜಿಟಲ್ ಆಧಾರಿತ ಅರ್ಥವ್ಯವಸ್ಥೆಯ ಗುರಿಯನ್ನು ಸಾಧಿಸುವ ಕುರಿತು ಚರ್ಚೆ ನಡೆಯಲಿದೆ. ಜಿಎಸ್ಟಿ ಅಡಿಯಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆಗೆ ಪ್ರೋತ್ಸಾಹಧನ ನೀಡುವ ಕುರಿತೂ ಚರ್ಚೆಯಾಗಲಿದೆ. ಪ್ರವಾಸೋದ್ಯಮ ಮತ್ತು ಹೊಟೇಲ್ ಉದ್ಯಮಕ್ಕೆ ಸಂಬಂಧಿಸಿದಂತೆ ಜಿಎಸ್ಟಿ ನಿಯಮಗಳಲ್ಲಿ ಬದಲಾವಣೆ ಮಾಡುವ ಸಾಧ್ಯತೆಯೂ ಇದೆ.












Click it and Unblock the Notifications