ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್: ಆದೇಶ ಕಾಯ್ದಿರಿಸಿದ ಕೋರ್ಟ್

|
Google Oneindia Kannada News

ನವದೆಹಲಿ, ಮೇ 23: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಸಾವಿನ ದಲ್ಲಾಳಿ' ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೇಲೆ ಎಫ್‌ಐಆರ್ ದಾಖಲು ಮಾಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ಕುರಿತಾದ ಆದೇಶವನ್ನು ದೆಹಲಿ ನ್ಯಾಯಾಲಯ ಜೂನ್ 7ಕ್ಕೆ ಕಾಯ್ದಿರಿಸಿದೆ.

2016ರಲ್ಲಿ ನರೇಂದ್ರ ಮೋದಿ ವಿರುದ್ಧ ಅವಹೇಳನಾಕಾರಿ ಪದ ಬಳಸಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ಮಾಡುವಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ವಕೀಲ ಜೋಗಿಂದರ್ ತುಲಿ ಅವರು ಅರ್ಜಿ ಸಲ್ಲಿಸಿದ್ದರು. ಇದರ ಆದೇಶವನ್ನು ಸಿಟಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಕಾಯ್ದಿರಿಸಿದರು.

ಮೋದಿ ಅವರು ರೈತರ ರಕ್ತದ ಹಿಂದೆ ಅಡಗಿಕೊಳ್ಳುತ್ತಿದ್ದಾರೆ ಮತ್ತು ಅವರ ತ್ಯಾಗದ ಲಾಭವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು.

FIR against Rahul Gandhi court reserves order

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಿಸಬಹುದು ಎಂದು ದೆಹಲಿ ಪೊಲೀಸರು ಮೇ 15ರಂದು ನ್ಯಾಯಾಲಯಕ್ಕೆ ಆಕ್ಷನ್ ಟೇಕನ್ ರಿಪೋರ್ಟ್ ಸಲ್ಲಿಸಿದ್ದರು.

English summary
A Delhi court has reserved its order on June 7 on a complaint seeking an FIR against Congress President Rahul Gandhi for derogatory remarks against Prime Minister Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X