ದೆಹಲಿಯ ಗೋಕುಲ ಪುರಿಯಲ್ಲಿ ಅಗ್ನಿ ಅವಘಡ; 7 ಜನರು ಸಾವು
ನವದೆಹಲಿ, ಮಾರ್ಚ್ 12; ನವದೆಹಲಿಯ ಗೋಕುಲ್ ಪುರಿ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘಟನೆಗೆ ವಿಷಾಧ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ರಾತ್ರಿ ಗೋಕುಲ್ ಪುರಿ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. 13 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಆರಂಭಿಸಿದ್ದು, ಶನಿವಾರ ಮುಂಜಾನೆ ಕಾರ್ಯಾಚರಣೆ ಮುಕ್ತಾಯಗೊಂಡಿತು.
ಮುಂಜಾನೆ 1 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿರುವ ಕುರಿತು ಮಾಹಿತಿ ತಿಳಿಯಿತು. ತಕ್ಷಣ ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ತೆರಳಿದವು. ಘಟನೆಯಲ್ಲಿ 6 ಜನರು ಸಜೀವವಾಗಿ ದಹನವಾಗಿದ್ದು, ಹಲವಾರು ಜನರಿಗೆ ಗಾಯಗಳಾಗಿವೆ.

ದೆಹಲಿಯ ಹೆಚ್ಚುವರಿ ಪೊಲೀಸ್ ಆಯುಕ್ತ ದೇವೇಶ್ ಕುಮಾರ್ ಮಹಾಲ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ, "ರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿರುವ ಕುರಿತು ಮಾಹಿತಿ ತಿಳಿಯಿತು. ತಕ್ಷಣ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. 13 ಅಗ್ನಿ ಶಾಮಕ ದಳದ ವಾಹನಗಳು 4 ಗಂಟೆಯ ತನಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿವೆ" ಎಂದರು.
ದೆಹಲಿ ಅಗ್ನಿ ಶಾಮಕ ದಳ ಘಟನೆ ಕುರಿತು ಮಾಹಿತಿ ನೀಡಿದ್ದು, ಘಟನೆಯಲ್ಲಿ 7 ಜನರು ಮೃತಪಟ್ಟಿದ್ದಾರೆ. ರಾತ್ರಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಘಟನಾ ಸ್ಥಳದಿಂದ 7 ಶವಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದೆ.
At 1 am there was a fire incident in Gokulpuri PS area. Immediately teams reached the spot with all rescue equipment. We also contacted the Fire Dept that responded very well.We could douse the fire by around 4 am. 30 shanties burned & 7 lives are lost: Addl DCP, North East Delhi pic.twitter.com/UT8XzgaNMR
— ANI (@ANI) March 12, 2022
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ, 'ಮುಂಜಾನೆ ಘಟನೆ ಬಗ್ಗೆ ಮಾಹಿತಿ ತಿಳಿಯಿತು. ನಾನು ಘಟನಾ ಸ್ಥಳಕ್ಕೆ ಹೋಗುತ್ತಿದ್ದೇನೆ. ಗಾಯಾಳುಗಳನ್ನು ಸಹ ಭೇಟಿಯಾಗುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications