ದೆಹಲಿಯ ಆಕಾಶವಾಣಿ ಭವನದಲ್ಲಿ ಬೆಂಕಿ ಅವಘಡ
ನವದೆಹಲಿ,ಜನವರಿ 24: ನವದೆಹಲಿಯ ಆಕಾಶವಾಣಿ ಭವನದಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ.
ದೆಹಲಿಯ ಸಂಸದ ಮಾರ್ಗ್‌ನಲ್ಲಿರುವ ಆಕಾಶವಾಣಿ ಭವನದಲ್ಲಿ ಬೆಳಗಿನ ಜಾವ 5.57ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಫೈರ್ ಸರ್ವಿಸಸ್ ( ಡಿಎಫ್ಎಸ್) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೆಹಲಿಯ ಕೊಳೆಗೇರಿಯಲ್ಲಿ ಅಗ್ನಿ ಅವಘಡ: 150 ಕ್ಕೂ ಹೆಚ್ಚು ಗುಡಿಸಲು ಭಸ್ಮ
ತಕ್ಷಣವೇ 8 ಅಗ್ನಿಶಾಮಕದಳದ ವಾಹನಗಳು ಸ್ಥಳಕ್ಕೆ ಆಗಮಿಸಿ ಅಗ್ನಿನಂದಿಸುವ ಕೆಲಸದಲ್ಲಿ ನಿರತವಾಗಿವೆ. 101 ನೇ ನಂಬರ್ ಕೋಠಡಿಯಿಂದ ಅಗ್ನಿ ಅನಾಹುತ ಸಂಭವಿಸಿದ್ದು, ವಿದ್ಯುತ್ ಉಪಕರಣಗಳಿಂದ ಅಗ್ನಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ.
ಘಟನೆಯಲ್ಲಿ ಯಾವುದೇ ಗಾಯಗಳು ಉಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಅವಘಡದ ಬಗ್ಗೆ ಬೆಳಿಗ್ಗೆ 5.57 ಕ್ಕೆ ಸುದ್ದಿ ಬಂದಿದೆ.