ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್ ನಿಂದ ಅಗ್ನಿ ಅವಘಡ!

ನವದೆಹಲಿ, ಮಾರ್ಚ್ 24: ಇಲ್ಲಿನ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನ ಟ್ರೌಮ ಸೆಂಟರ್ ನಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸಂಜೆ ಆರೂ ಮೂವತ್ತರ ಹೊತ್ತಿಗೆ ನಮಗೆ ಅಗ್ನಿ ಅವಘಡದ ಬಗ್ಗೆ ಮಾಹಿತಿ ಸಿಕ್ಕಿತು ಎಂದು ದೆಹಲಿ ಅಗ್ನಿಶಾಮಕ ದಳದವರು ತಿಳಿಸಿದ್ದಾರೆ.

ಆಸ್ಪತ್ರೆಯ ಕೆಳಗಿನ ಅಂತಸ್ತಿನಲ್ಲಿರುವ ಆಪರೇಷನ್ ಥಿಯೇಟರ್ ನಲ್ಲಿ ಈ ಘಟನೆ ಸಂಭವಿಸಿದೆ. ನಾಲ್ಕು ಅಗ್ನಿಶಾಮಕ ವಾಹನವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಇನ್ನಷ್ಟು ವಾಹನ ಕಳುಹಿಸಲಾಗುವುದು ಎಂದು ತಿಳಿಸಲಾಗಿದೆ. ಎಲೆಕ್ಟ್ರಿಕಲ್ ಶಾರ್ಟ್ ಸರ್ಕೀಟ್ ನಿಂದ ಈ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ರೋಗಿಗಳು ಹಾಗೂ ಇತರ ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

AIIMS

ಸದ್ಯಕ್ಕೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ಯಾವಾಗ ಅಸ್ಪತ್ರೆಯ ಕೆಳಗಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡು, ಹೊಗೆ ದಟ್ಟವಾಯಿತೋ ಅಲ್ಲಿನ ವಾರ್ಡ್ ಗಳಲ್ಲಿ ಇದ್ದ ರೋಗಿಗಳನ್ನು ಸ್ಥಳಾಂತರ ಮಾಡಲಾಗಿದೆ. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಇತ್ತು. ಆದರೆ ಗಾಬರಿ ಅಗತ್ಯ ಇಲ್ಲ ಎಂದು ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+