ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿ ಅಗ್ನಿ ಅವಘಡ
ನವದೆಹಲಿ, ಅಕ್ಟೋಬರ್ 17: ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಮುಂಜಾನೆ 3 ಗಂಟೆ 30 ನಿಮಿಷದ ಸುಮಾರಿಗೆ ಪ್ರಧಾನ ಮಂತ್ರಿ ಕಾರ್ಯಾಲಯದ ಕೊಠಡಿ ಸಂಖ್ಯೆ 242ರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ 10 ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳು ಪ್ರಧಾನಿ ಕಾರ್ಯಾಲಯದತ್ತ ಧಾವಿಸಿದ್ದವು.

ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳ 20 ನಿಮಿಷಗಳಲ್ಲೇ ಪರಿಸ್ಥಿತಿಯನ್ನು ಸಂಪೂರ್ಣ ಹತೋಟಿಗೆ ತೆಗೆದುಕೊಂಡಿವೆ. ಹೀಗಾಗಿ ಯಾವುದೇ ದೊಡ್ಡ ಮಟ್ಟದ ಹಾನಿ ನಡೆದಿಲ್ಲ ಎಂದು ಪ್ರಾಥಮಿಕ ವರದಿಗಳು ಹೇಳಿವೆ.
ಬೆಂಕಿ ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ.
#Delhi: 10 fire tenders were rushed to the site of fire at PMO that broke out around 3:35 AM; flames were doused within 20 minutes pic.twitter.com/SNRuWIsovI
— ANI (@ANI) October 17, 2017












Click it and Unblock the Notifications