ನವದೆಹಲಿಯ ಸಂಸತ್ ಭವನದಲ್ಲಿ ಅಗ್ನಿ ಅವಘಡ
ನವದೆಹಲಿ, ಆಗಸ್ಟ್ 17 : ನವದೆಹಲಿಯ ಸಂಸತ್ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. 5 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ತೆರಳಿವೆ.
ಸೋಮವಾರ ಬೆಳಗ್ಗೆ ದೆಹಲಿಯ ಸಂಸತ್ ಭವನದ 6ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಕೈಗೊಂಡಿವೆ.

ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಅದನ್ನು ಹತೋಟಿಗೆ ತರಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.












Click it and Unblock the Notifications