Breaking: ದೆಹಲಿ ಅಗ್ನಿ ಅವಘಡದಲ್ಲಿ ಮೃತರ ಕುಟುಂಬಕ್ಕೆ 10 ಲಕ್ಷ ಆರ್ಥಿಕ ನೆರವು

ನವದೆಹಲಿ, ಮೇ 14: ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣ ಸಮೀಪದ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಬೃಹತ್ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ದೆಹಲಿಯ ಅಗ್ನಿ ಅವಘಡದಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. ಶುಕ್ರವಾರ ಸಂಭವಿಸಿದ ಬೃಹತ್ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಸುಮಾರು 40 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾವಿನ ಸಂಖ್ಯೆಯನ್ನು ದೃಢಪಡಿಸಿದ ದೆಹಲಿ ಅಗ್ನಿಶಾಮಕ ಸೇವೆಯ ಹಿರಿಯ ಅಧಿಕಾರಿ ಸುನಿಲ್ ಚೌಧರಿ, ಇದುವರೆಗೆ ಒಟ್ಟು 27 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.

ಮೃತರ ಕುರಿತು ಪ್ರಧಾನಿ ಮೋದಿ ಸಂತಾಪ ಸೂಚನೆ

ಮೃತರ ಕುರಿತು ಪ್ರಧಾನಿ ಮೋದಿ ಸಂತಾಪ ಸೂಚನೆ

ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಸಂಭವಿಸಿದ ಪ್ರಾಣಹಾನಿಯಿಂದ ದುಃಖಿತರಾಗಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. "ದೆಹಲಿಯಲ್ಲಿ ಸಂಭವಿಸಿದ ದುರಂತ ಬೆಂಕಿಯಿಂದಾಗಿ ಪ್ರಾಣಹಾನಿಯಿಂದ ತುಂಬಾ ದುಃಖವಾಗಿದೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ದೆಹಲಿಯಲ್ಲಿ ಬೆಂಕಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬದ ಸಂಬಂಧಿಕರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ. ದೆಹಲಿಯಲ್ಲಿ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂಪಾಯಿ ನೀಡಲಾಗುವುದು. ಗಾಯಾಳುಗಳಿಗೆ 50,000 ರೂಪಾಯಿ ನೀಡಲಾಗುವುದು," ಎಂದು ಪಿಎಂಒ ಟ್ವೀಟ್‌ನಲ್ಲಿ ಉಲ್ಲೇಖಿಸಿದಂತೆ ಪ್ರಧಾನಿ ಮೋದಿ ಹೇಳಿದ್ದಾರೆ.

ವಾಣಿಜ್ಯ ಕಟ್ಟಡದ ಮಾಲೀಕ ಪೊಲೀಸ್ ವಶಕ್ಕೆ

ವಾಣಿಜ್ಯ ಕಟ್ಟಡದ ಮಾಲೀಕ ಪೊಲೀಸ್ ವಶಕ್ಕೆ

ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪದ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಪೊಲೀಸರು ಕಟ್ಟಡದ ಮಾಲೀಕರನ್ನು ವಶಕ್ಕೆ ಪಡೆದಿದ್ದು, ಅವರ ಪೂರ್ವಾಪರವನ್ನು ಪರಿಶೀಲಿಸುತ್ತಿದ್ದಾರೆ. ಪ್ರಾಥಮಿಕ ವಿಚಾರಣೆಯ ಆಧಾರದ ಮೇಲೆ, ಇದು ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವಾಗಿದ್ದು, ಕಂಪನಿಗಳಿಗೆ ಕಚೇರಿ ಸ್ಥಳಾವಕಾಶಕ್ಕಾಗಿ ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳು ಮತ್ತು ರೂಟರ್ ತಯಾರಿಕಾ ಕಂಪನಿಯ ಕಚೇರಿಯಾಗಿರುವ ಕಟ್ಟಡದ 1ನೇ ಮಹಡಿಯಿಂದ ಬೆಂಕಿಯ ಹೊತ್ತಿಕೊಳ್ಳಲು ಪ್ರಾರಂಭವಾಯಿತು. ಆದರೆ, ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದಿದ್ದಾರೆ.

ವಾಣಿಜ್ಯ ಕಟ್ಟಡದ ಅಗ್ನಿ ಅವಘಡದ ಟೈಮ್ ಲೈನ್

ವಾಣಿಜ್ಯ ಕಟ್ಟಡದ ಅಗ್ನಿ ಅವಘಡದ ಟೈಮ್ ಲೈನ್

* ರಾತ್ರಿ 9.00: ಬೆಂಕಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮೃತ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಪೊಲೀಸ್ ಪಡೆಯನ್ನು ನಿಯೋಜಿಸಿದ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಸುಮಾರು 15 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದವು. ಈ ವೇಳೆಗೆ ಸುಮಾರು 50-60 ಜನರನ್ನು ರಕ್ಷಿಸಲಾಗಿದೆ ಮತ್ತು 2-3 ಜನರು ಗಾಯಗೊಂಡಿದ್ದಾರೆ ಎಂದು ಹೊರ ಜಿಲ್ಲೆಯ ಡಿಸಿಪಿ ಸಮೀರ್ ಶರ್ಮಾ ತಿಳಿಸಿದರು.

* 9.45 PM: ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿ ಸಂಜೆ ಬೆಂಕಿ ಹೊತ್ತಿಕೊಂಡ 3 ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಇನ್ನೂ ಕೆಲವು ವ್ಯಕ್ತಿಗಳು ಸಿಲುಕಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದರು.

* 10.05 PM: ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿ ಸಂಜೆ ಬೆಂಕಿ ಹೊತ್ತಿಕೊಂಡ 3 ಅಂತಸ್ತಿನ ವಾಣಿಜ್ಯ ಕಟ್ಟಡದಿಂದ ಒಟ್ಟು 16 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೂರನೇ ಮಹಡಿಯಲ್ಲಿ ಇನ್ನೂ ಶೋಧಿಸಲಾಗಿಲ್ಲ ಎಂದು ದೆಹಲಿ ಅಗ್ನಿಶಾಮಕ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದರು.

* 10.15 PM: ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿ ಶುಕ್ರವಾರ ಸಂಜೆ 3 ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಹೊತ್ತಿಕೊಂಡ ಬೆಂಕಿಯಲ್ಲಿ ಇದುವರೆಗೆ 10 ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದರು.

* 10.20 PM: ಅಗ್ನಿ ಅನಾಹುತದ ಸಂದರ್ಭದಲ್ಲಿ ಆತಂಕಗೊಂಡ ಕೆಲವರು ಕಟ್ಟಡದಿಂದ ಜಿಗಿದರು, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ದೆಹಲಿ ಅಗ್ನಿಶಾಮಕ ಸೇವೆಯ ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಸುನಿಲ್ ಚೌಧರಿ ಹೇಳಿದರು.


* 10.30 PM: ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿ ಸಂಜೆ ಸಂಭವಿಸಿದ 3 ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 20 ಮೃತದೇಹಗಳು ಪತ್ತೆಯಾಗಿವೆ ಎಂದು ದೆಹಲಿ ಅಗ್ನಿಶಾಮಕ ನಿರ್ದೇಶಕ ಅತುಲ್ ಗಾರ್ಗ್ ಖಚಿತಪಡಿಸಿದರು.


* 10.55 PM: ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ 3 ಅಂತಸ್ತಿನ ವಾಣಿಜ್ಯ ಕಟ್ಟಡದ ಅಗ್ನಿ ಅವಘಡದಲ್ಲಿ 26 ಮೃತದೇಹಗಳು ಪತ್ತೆಯಾಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಸುನಿಲ್ ಚೌಧರಿ ಹೇಳಿದರು.

* 11.00 PM: ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ 3 ಅಂತಸ್ತಿನ ವಾಣಿಜ್ಯ ಕಟ್ಟಡದ ಅಗ್ನಿ ಅವಘಡದಲ್ಲಿ 50 ಜನರನ್ನು ರಕ್ಷಿಸಲಾಗಿದೆ, 27 ಜನರು ಮೃತಪಟ್ಟಿದ್ದಾರೆ ಎಂದು ಡಿಸಿಪಿ ಸಮೀರ್ ಶರ್ಮಾ ಮಾಹಿತಿ ನೀಡಿದರು.

* 11.10 PM: ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ 3 ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಕ್ತಾಯಗೊಂಡಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ, ಪ್ರದೇಶದ ವಿಸ್ತಾರವನ್ನು ಗಮನಿಸಿದರೆ ಇದು ಸಮಯ ತೆಗೆದುಕೊಳ್ಳುತ್ತದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಸುನಿಲ್ ಚೌಧರಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+