ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ

|
Google Oneindia Kannada News

ನವದೆಹಲಿ, ಮೇ 14: ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಸಂಭವಿಸಿದ ಪ್ರಾಣಹಾನಿಯಿಂದ ದುಃಖಿತರಾಗಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

"ದೆಹಲಿಯಲ್ಲಿ ಸಂಭವಿಸಿದ ದುರಂತ ಬೆಂಕಿಯಿಂದಾಗಿ ಪ್ರಾಣಹಾನಿಯಿಂದ ತುಂಬಾ ದುಃಖವಾಗಿದೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪದ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಸಂಭವಿಸಿದ ಬೃಹತ್ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಸುಮಾರು 40 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆಯನ್ನು ದೃಢಪಡಿಸಿದ ದೆಹಲಿ ಅಗ್ನಿಶಾಮಕ ಸೇವೆಯ ಹಿರಿಯ ಅಧಿಕಾರಿ ಸುನಿಲ್ ಚೌಧರಿ, ಇದುವರೆಗೆ ಒಟ್ಟು 27 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.

Delhi Fire: PM Modi Announces Rs 2 Lakh Compensation Each For Kin of Deceased

ದೆಹಲಿ ಅಗ್ನಿ ದುರಂತದಲ್ಲಿ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ:

ದೆಹಲಿಯಲ್ಲಿ ಬೆಂಕಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬದ ಸಂಬಂಧಿಕರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ದೆಹಲಿ ಅಗ್ನಿ ಅವಘಡದಲ್ಲಿ 27 ಸಾವು: ಸಮಯವಾರು ಮಾಹಿತಿ ಓದಿ ತಿಳಿಯಿರಿದೆಹಲಿ ಅಗ್ನಿ ಅವಘಡದಲ್ಲಿ 27 ಸಾವು: ಸಮಯವಾರು ಮಾಹಿತಿ ಓದಿ ತಿಳಿಯಿರಿ

ದೆಹಲಿಯಲ್ಲಿ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂಪಾಯಿ ನೀಡಲಾಗುವುದು. ಗಾಯಾಳುಗಳಿಗೆ 50,000 ರೂಪಾಯಿ ನೀಡಲಾಗುವುದು," ಎಂದು ಪಿಎಂಒ ಟ್ವೀಟ್‌ನಲ್ಲಿ ಉಲ್ಲೇಖಿಸಿದಂತೆ ಪ್ರಧಾನಿ ಮೋದಿ ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಟ್ವೀಟ್:

"ದೆಹಲಿಯ ಮುಂಡ್ಕಾದಲ್ಲಿ ನಡೆದ ಬೆಂಕಿ ಘಟನೆ ತುಂಬಾ ದುಃಖಕರವಾಗಿದೆ. ನಾನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ, ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಎನ್‌ಡಿಆರ್‌ಎಫ್ ಕೂಡ ಶೀಘ್ರದಲ್ಲೇ ಅಲ್ಲಿಗೆ ತಲುಪಲಿದೆ. ಜನರನ್ನು ಸ್ಥಳಾಂತರಿಸುವುದು ಮತ್ತು ಗಾಯಗೊಂಡವರಿಗೆ ತಕ್ಷಣದ ಚಿಕಿತ್ಸೆ ನೀಡುವುದು ನಮ್ಮ ಆದ್ಯತೆಯಾಗಿದೆ ಎಂದು ಶಾ ಟ್ವೀಟ್ ಮಾಡಿದ್ದಾರೆ.

Delhi Fire: PM Modi Announces Rs 2 Lakh Compensation Each For Kin of Deceased

ಕಟ್ಟಡದ ಮಾಲೀಕರನ್ನು ವಶಕ್ಕೆ ಪಡೆದ ಪೊಲೀಸರು:

ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪದ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಪೊಲೀಸರು ಕಟ್ಟಡದ ಮಾಲೀಕರನ್ನು ವಶಕ್ಕೆ ಪಡೆದಿದ್ದು, ಅವರ ಪೂರ್ವಾಪರವನ್ನು ಪರಿಶೀಲಿಸುತ್ತಿದ್ದಾರೆ. ಪ್ರಾಥಮಿಕ ವಿಚಾರಣೆಯ ಆಧಾರದ ಮೇಲೆ, ಇದು ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವಾಗಿದ್ದು, ಕಂಪನಿಗಳಿಗೆ ಕಚೇರಿ ಸ್ಥಳಾವಕಾಶಕ್ಕಾಗಿ ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾಗಳು ಮತ್ತು ರೂಟರ್ ತಯಾರಿಕಾ ಕಂಪನಿಯ ಕಚೇರಿಯಾಗಿರುವ ಕಟ್ಟಡದ 1ನೇ ಮಹಡಿಯಿಂದ ಬೆಂಕಿಯ ಹೊತ್ತಿಕೊಳ್ಳಲು ಪ್ರಾರಂಭವಾಯಿತು. ಆದರೆ, ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದಿದ್ದಾರೆ.

English summary
Delhi Fire: PM Modi Announces Rs 2 Lakh Compensation Each For Kin of Deceased.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X